Home namma chikmagalur chikamagalur ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
chikamagalurCrime NewsHomeLatest Newsnamma chikmagalur

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

Share
Share

ಚಿಕ್ಕಮಗಳೂರು: ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ನಗರದ ಹೊರವಲಯದ ಉಂಡೇದಾಸರಹಳ್ಳಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಇಂದು ಬೆಳಗಿನ ಜಾವ ದಾಳಿ ನಡೆಸಿದ ಪೊಲೀಸರು, ಗಿರೀಶ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ ಸುಮಾರು ೨೦ಸಾವಿರ ಮೌಲ್ಯದ ೧.೨೨೦ ಕೆಜಿ ತೂಕದ ಅಕ್ರಮ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.

ನಗರ ಪೊಲೀಸ್ ಠಾಣಾಧಿಕಾರಿ ಅಭಯ್‌ಪ್ರಕಾಶ್ ಸೋಮನಾಳ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಯವರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾದ ತಂಡದ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

Suspect arrested for selling marijuana

 

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...