ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃಧ್ಧಿ ನಿಗಮದ ಅಧ್ಯಕ್ಷ ಸ್ಥಾನದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರನ್ನು ಮುಂದುವರೆಯಲು ಆದೇಶವನ್ನು ನೀಡಲಾಗಿದೆ.
ರಾಜೇಗೌಡರನ್ನು 2024 ರಲ್ಲಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಎರಡು ವರ್ಷದ ಅವಧಿಯ ನೇಮಕಾತಿ ಅವಧಿ ಮುಗಿದಿದ್ದರಿಂದ ಇಂದು ಮತ್ತೆ ಎರಡು ವರ್ಷಗಳ ಅವಧಿಗೆ ಮುಂದುವರೆಸಲು ಆದೇಶ ನೀಡಲಾಗಿದೆ.
ಮಂತ್ರಿ ಆಗುತ್ತಾರೆ ಎಂಬ ನಿರೀಕ್ಷೆಯಲ್ಲಿ ಇದ್ದ ರಾಜೇಗೌಡರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಸಲಾಗಿದೆ. ಟಿ.ಡಿ.ರಾಜೇಗೌಡರು ಅಧ್ಯಕ್ಷರಾದ ಮೇಲೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದ ಕರ್ನಾಟಕ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಮತ್ತಷ್ಟು ಪ್ರಶಸ್ತಿ ಪಡೆಯಲಿ.
ಜಿಲ್ಲಾ ಪಂಚಾಯತಿ ಸದಸ್ಯರಾಗಿ, ಜಿ.ಪಂ.ಅಧ್ಯಕ್ಷರಾಗಿ ಶೃಂಗೇರಿ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮಕ್ಕೆ ಎರಡನೇ ಬಾರಿ ಅಧ್ಯಕ್ಷರಾಗಿದ್ದಾರೆ
T.D. Rajegowda reappointed as Chairman of Energy Corporation
Leave a comment