Home namma chikmagalur ಜೂ 14 ರಂದು ತಾಲೂಕು ಪ್ರಥಮ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ
namma chikmagalurchikamagalurHomeLatest News

ಜೂ 14 ರಂದು ತಾಲೂಕು ಪ್ರಥಮ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನ

Share
Share

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಜೂ ೧೪ ರಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದಿಂದ ತಾಲೂಕು ಪ್ರಥಮ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿಶ್ರೀನಿವಾಸ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಶನಿವಾರ ಮಾತನಾಡಿ, ಸಮ್ಮೇಳನದ ಅಧ್ಯಕ್ಷೆ ಲಕ್ಷ್ಮೀಶ್ಯಾಮರಾವ್ ಆಯ್ಕೆಯಾಗಿದ್ದಾರೆ. ಅಂದು ಬೆಳಿಗ್ಗೆ ೮ಗಂಟೆಗೆ ರಾಷ್ಟ್ರಧ್ವಜವನ್ನು ತಹಸೀಲ್ದಾರ್ ರೇಷ್ಮಾ, ಪರಿಷತ್ತಿನ ಧ್ವಜವನ್ನು ತಾಲೂಕು ಕನ್ನಡ ಸಾಹಿತ್ಯಪರಿಷತ್ ಮಹಿಳಾ ಘಟಕದ ಅಧ್ಯಕ್ಷ ಹೆಚ್.ಕೆ. ವಿಜಯಲಕ್ಷ್ಮಿ ವಿಶ್ವನಾಥ್, ನಾಡಧ್ವಜವನ್ನು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷೆ ರೇಖಾಹುಲಿಯಪ್ಪಗೌಡ ನೆರವೇರಿಸುವರು. ಬೆಳಿಗ್ಗೆ ೯ ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಉದ್ಘಾಟಿಸುತ್ತಿದ್ದು, ಆಜಾದ್‌ವೃತ್ತದಿಂದ ಕುವೆಂಪು ಕಲಾಮಂದಿರದವರೆಗೆ ಮೆರವಣಿಗೆ ಸಾಗಲಿದೆ ಎಂದರು.

ಉದ್ಘಾಟನಾ ಸಮಾರಂಭ ಬೆಳಿಗ್ಗೆ ೧೦.೩೦ಕ್ಕೆ ನಡೆಯುತ್ತಿದ್ದು, ಸಾಹಿತಿ ಮೈಸೂರಿನ ಡಾ.ಎಸ್.ಪಿ.ಉಮಾದೇವಿ ಸುತ್ತೂರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಹೆಚ್.ಡಿ.ತಮ್ಮಯ್ಯ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ವಿಧಾನಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಸಿ.ಟಿ.ರವಿ, ಬೆಂಗಳೂರು ಕನ್ನಡಸಾಹಿತ್ಯ ಪರಿಷತ್ ಖಜಾಂಚಿ ಪಟೇಲ್‌ಪಾಂಡು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮ ಸಲ್ಲಿಸುವರು.ಕೆ.ವಿಜಯಲಕ್ಷ್ಮೀ ವಿಶ್ವನಾಥ ಸಮ್ಮೇಳನಾಧ್ಯಕ್ಷರನ್ನು ಪರಿಚಯಿಸುವರು.

ಲಕ್ಷ್ಮಿಶ್ಯಾಮರಾವ್ ಅಧ್ಯಕ್ಷ ನುಡಿಗಳನ್ನಾಡುವರು. ಸಮ್ಮೇಳನಾಧ್ಯಕ್ಷರ ಭಾಷಣ ಪ್ರತಿಯನ್ನು ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್ ಬಿಡುಗಡೆಗೊಳಿಸುವರು. ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ನಿರ್ಮಲಾಮಂಚೇಗೌಡ, ತಾಲೂಕು ಕಸಾಪ ಅಧ್ಯಕ್ಷ ಮಾವಿನಕೆರೆ ದಯಾನಂದ ಪುಸ್ತಕಗಳನ್ನು ಬಿಡುಗಡೆಗೊಳಿಸುವರೆಂದು ತಿಳಿಸಿದರು.

ಮಧ್ಯಾಹ್ನ ೧.೩೦ಕ್ಕೆ ಜಾನಪದ ಗೋಷ್ಟಿಯ ಅಧ್ಯಕ್ಷತೆಯನ್ನು ಮಾಜಿ ಸಚಿವೆ ಮೋಟಮ್ಮ ವಹಿಸುವರು. ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ ಗೋಷ್ಟಿ ಉದ್ಘಾಟಿಸುವರು. ಸವಿತಾರಮೇಶ್ ಪ್ರಾಸ್ತಾವಿಸುವರು. ಹಾಸನ ಕಸಾಪ ಜಿಲ್ಲಾಧ್ಯಕ್ಷ ಮಲ್ಲೇಶ್‌ಗೌಡ ಉಪನ್ಯಾಸ ನೀಡುವರು.ಅಂದು ಮಧ್ಯಾಹ್ನ ೩ ಗಂಟೆಗೆ ಕವಿಗೋಷ್ಟಿಯನ್ನು ಅಜ್ಜಂಪುರ ಎಸ್.ಶೃತಿ ಉದ್ಘಾಟಿಸುತ್ತಿದ್ದು, ಡಾ.ಪುಷ್ಪಭಾರತಿ ಅಧ್ಯಕ್ಷತೆವಹಿಸುವರು. ಹಿರೇಮಗಳೂರು ಕಣ್ಣನ್, ಡಾ.ನಮನ, ತನ್ಮಯಿ ಪ್ರೇಂಕುಮಾರ್ ಮಾತನಾಡುವರು.

ಸಂಜೆ ೫ಕ್ಕೆ ಸಮಾರೋಪ ಸಮಾರಂಭದಲ್ಲಿ ಸಾಹಿತಿ ದೀಪಾಹಿರೇಗುತ್ತಿ ಸಮಾರೋಪ ನುಡಿಗಳನಾಡುವರು. ಹೆಚ್.ಕೆ.ವಿಜಯಲಕ್ಷ್ಮಿವಿಶ್ವನಾಥ ಅಧ್ಯಕ್ಷತೆವಹಿಸುವರು. ಗಾಯತ್ರಿಶಾಂತೇಗೌಡ, ಸಾಹಿತ್ಯಸಿರಿಯನ್ನು ರೇಖಾಹುಲಿಯಪ್ಪಗೌಡ ಕನ್ನಡಸಿರಿ ಪ್ರಶಸ್ತಿ ಪ್ರದಾನಮಾಡುವರು.ಕಸಾಪ ಜಿಲ್ಲಾಕಾರ್ಯದರ್ಶಿ ಜಿ.ಬಿ.ಪವನ್, ಸಮ್ಮೇಳನ ಸ್ವಾಗತಿ ಸಮಿತಿ ಅಧ್ಯಕ್ಷೆ ರೇಖಾಹುಲಿಯಪ್ಪಗೌಡ, ನಿರ್ಮಲ ಮಂಚೇಗೌಡ, ವಿಜಯಲಕ್ಷ್ಮಿ ವಿಶ್ವನಾಥ, ರೂಪನಾಯಕ್ ಇದ್ದರು.

Taluk’s first women’s Kannada literary conference on June 14th

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...

Related Articles

ಏಷ್ಯನ್ ಗೇಮ್ಸ್‌ನಲ್ಲಿಶಾನುವಳ್ಳಿಯ ಎಸ್.ಎಸ್. ಸ್ನೇಹಾಗೆ ಕಂಚು

ಚಿಕ್ಕಮಗಳೂರು: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4×100 ಮೀಟರ್ ರಿಲೇ...

ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಅತಿರೇಕದ...

ಮಹಾತ್ಮಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರೀಜಿ ಮಾರ್ಗದರ್ಶನ ಇಂದಿಗೂ ಪ್ರಸ್ತುತ

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಸಂದೇಶಗಳು ಮತ್ತು...

ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಚಿಕ್ಕಮಗಳೂರು: ದಟ್ಟ ಅರಣ್ಯ, ಕಾಫಿ ತೋಟಗಳ ನಡುವೆ ಸಾಗುವ ಕಡಿದಾದ ತಿರುವುಗಳು, ಹೊಂಡ-ಗುಂಡಿಗಳ ರಸ್ತೆಯ ಮೇಲೆ...