ತರೀಕೆರೆ: ರಾಜ್ಯ ಸರ್ಕಾರ 18 ಶಾಸಕರಿಗೆ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದು, ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.
ಸರ್ಕಾರದ ಈ ಆದೇಶದಿಂದ ತರೀಕೆರೆ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರಿಗೆ ಮಹತ್ವದ ಜವಾಬ್ದಾರಿ ಲಭಿಸಿದಂತಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಜಿಲ್ಲೆಯ ಹಾಗೂ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸುವ ಅವಕಾಶ ಅವರಿಗೆ ದೊರೆತಿದೆ.
ಅಜ್ಜಂಪುರ ತಹಶೀಲ್ದಾರ್ ವರ್ಗಾವಣೆ
ಇದೇ ವೇಳೆ, ಅಜ್ಜಂಪುರ ತಾಲ್ಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಿನಾಯಕ ಸಾಗರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಅವರ ಸ್ಥಾನಕ್ಕೆ ಸದ್ಯ ಯಾವುದೇ ಅಧಿಕಾರಿಯನ್ನು ನೇಮಕ ಮಾಡಿಲ್ಲ.
ತಹಶೀಲ್ದಾರ್ ಹುದ್ದೆ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಕಾರ್ಯಚಟುವಟಿಕೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಸರ್ಕಾರ ಹೊಸ ನೇಮಕಾತಿ ಮಾಡುವ ನಿರೀಕ್ಷೆಯಿದೆ.
Tarikere MLA Srinivas appointed as Chairman of the Tourism Development Corporation
Leave a comment