Home namma chikmagalur chikamagalur ನಗರದಲ್ಲಿ ಹಾಡುಹಗಲೇ ಶಿಕ್ಷಕಿಯ ಮಾಂಗಲ್ಯ ಸರ ಅಪಹರಣ
chikamagalurCrime NewsHomeLatest Newsnamma chikmagalur

ನಗರದಲ್ಲಿ ಹಾಡುಹಗಲೇ ಶಿಕ್ಷಕಿಯ ಮಾಂಗಲ್ಯ ಸರ ಅಪಹರಣ

Share
Share

ಚಿಕ್ಕಮಗಳೂರು: ಹಾಡುಹಗಲೇ ಶಿಕ್ಷಕಿಯ ಕೊರಳಿಗೆ ಕೈ ಹಾಕಿ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಸೋಮವಾರ ಸಂಜೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಈ ಕುರಿತು ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಗರದ ಕೋಟೆಯಲ್ಲಿರುವ ಸೆಂಟ್ ಮೇರಿಸ್‌ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಿ,ಎಂ.ಪೂರ್ಣಿಮಾ ಸೋಮವಾರ ಶಾಲೆ ಮುಗಿಸಿಕೊಂಡು ಎಸ್ ಬಿಐ ಬ್ಯಾಂಕ್ ಗೆ ಹೋಗಲು ಕೋಟೆಯ ನಾಯ್ಡು ಮೆಸ್ ನಿಂದ ಎದುರು ಕೋರ್ಟ್ ಗೆ ಹೋಗುವ ರಸ್ತೆಯಲ್ಲಿ ನೆಡೆದುಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ.

ಕೋರ್ಟ್ ಕಡೆಯಿಂದ ಬೈಕ್ ನಲ್ಲಿ ಬಂದ ಇಬ್ಬರು, ಕುತ್ತಿಗೆಯಲ್ಲಿದ್ದ ಚಿನ್ನದ ಎರಡು ಎಳೆ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಿತ್ತುಕೊಂಡಿದ್ದಾನೆ. ಈ ವೇಳೆ ಅರ್ಧ ಭಾಗ ಮಾತ್ರ ಕಳ್ಳನ ಕೈ ಸೇರಿದೆ. ಉಳಿದರ್ಧ ಅಲ್ಲಿಯೇ ಕೆಳಗೆ ಬಿದ್ದಿದೆ.

ಕಿತ್ತುಕೊಂಡು ಹೋದ ಅರ್ಧ ಭಾಗ ಸರ ಸುಮಾರು 15 ಗ್ರಾಂ ತೂಕ ಇದ್ದು, ಅಂದಾಜು 2,10 ಲಕ್ಷ ರು, ಆಗಿದೆ. ಕಳ್ಳರನ್ನು ಪತ್ತೆ ಮಾಡಿ ಸರ ವಾಪಾಸ್‌ ಕೊಡಿಸುವಂತೆ ಶಿಕ್ಷಕಿ ಪೂರ್ಣಿಮಾ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ..

Teacher Mangalya Sara kidnapped in broad daylight in the city

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...