ಚಿಕ್ಕಮಗಳೂರು : ಅಕ್ರಮವಾಗಿ ಸಾಗುವಾನಿ ಮರಗಳನ್ನು ಆಪೆ ಆಟೋದಲ್ಲಿ ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಕಳೆದ ರಾತ್ರಿ ಗಸ್ತು ತಿರುಗುತ್ತಿದ್ದಾಗ ಈ ಕಾರ್ಯಾಚರಣೆ ನಡೆದಿದೆ.
ಅಕ್ರಮ ಸಾಗುವಾನಿ ಮರಗಳನ್ನು ಸಾಗಿಸುತ್ತಿದ್ದ ಆರೋಪಗಳನ್ನು ಬಂಧನ ಮಾಡಲಾಗಿದೆ. ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಖದೀಮರು ಸಿಕ್ಕಿಬಿದ್ದ ಘಟನೆ ನಡೆದಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರಗಳನ್ನು ಕದಿದ್ದ ಕಳ್ಳರು ಸಾಗಾಟ ಮಾಡಲು ಯತ್ನಿಸಿದ್ದರು. ಲಕ್ಷಾಂತರ ಮೌಲ್ಯದ ಸಾಗುವಾನಿ ಮರವನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನರಸಿಂಹರಾಜಪುರ ತಾಲೂಕಿನ ಕೊಸ್ಕಲ್ ಮೀಸಲು ಅರಣ್ಯದಿಂದ ಮರಗಳನ್ನು ಕಡಿದು ಸಾಗಿಸುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ
ಕೊಪ್ಪ ವಲಯದ ಚಿಕ್ಕಅಗ್ರಹಾರ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆಯಿಂದ ಘಟನೆ ಬೆಳಕಿಗೆ ಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಕೊಸ್ಕಲ್ ಮೀಸಲು ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಇಂತಹ ಕಳ್ಳ ಸಾಗಣೆಗಳು ನಡೆಯುತ್ತಿವೆ.
Leave a comment