ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ರೂ.1000 ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು ಆಡಳಿತಾತ್ಮಕ ಅನುಮೋದನೆ ನೀಡಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.
ಈ ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಡಿ ವಿಶೇಷ ಚೇತನ ಅಧಿಕಾರಿ/ ನೌಕರರಿಗೆ ಗುಂಪು-ಎ (ಕಿರಿಯ ಶ್ರೇಣಿ) ಮತ್ತು ಗುಂಪು-ಬಿ ವೃಂದಗಳಿಗೆ ನೀಡುವ ಮುಂಬಡ್ತಿಯಲ್ಲಿ ಶೇ 4ರಷ್ಟು ಮೀಸಲಾತಿ ಕಲ್ಪಿಸಲು ಕ್ಯಾಬಿನೆಟ್ ಅನುಮೋದನೆ ನೀಡಲಾಯಿತು.
ಆಶಾ ಕಾರ್ಯಕರ್ತೆಯರಿಗೆ ರೂ.1000/-ಗಳ ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು ಹಾಗೂ ಇದಕ್ಕಾಗಿ ರೂ.18 ಕೋಟಿ ವೆಚ್ಚವನ್ನು ಭರಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
Team-based incentive of Rs. 1000 for ASHA workers
Leave a comment