Home namma chikmagalur ತಾಂತ್ರಿಕ ಸ್ಪರ್ಧೆಗಳು ಕೌಶಲ್ಯವರ್ಧನೆಗೆ ಅನುಕೂಲ
namma chikmagalurchikamagalurHomeLatest News

ತಾಂತ್ರಿಕ ಸ್ಪರ್ಧೆಗಳು ಕೌಶಲ್ಯವರ್ಧನೆಗೆ ಅನುಕೂಲ

Share
Share

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರ್ಯಕ್ರಮದ ಸ್ಪರ್ಧೆಗಳು ಕೌಶಲ್ಯ ವರ್ಧನೆಗೆ ಅನುಕೂಲವಾಗುವ ಜೊತೆಗೆ ಭವಿ?ದಲ್ಲಿ ಬಹಳ? ಉಪಯೋಗಕ್ಕೆ ಬರಲಿವೆ ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ|| ಸಿ.ಟಿ.ಜಯದೇವ್ ಹೇಳಿದರು.

ನಗರದ ಎಐಟಿ ಕಾಲೇಜು ಬಿಜಿಎಸ್ ಸಭಾಂಗಣದಲ್ಲಿ ಮಾಹಿತಿ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿ ಗಳಿಗೆ ಆಯೋಜಿಸಿದ್ಧ ಎರಡು ದಿನದ ಅಂತರ ಕಾಲೇಜು ತಾಂತ್ರಕ ಕಾರ್ಯಕ್ರಮವನ್ನು ಗುರುವಾರ ಉದ್ಘಾ ಟಿಸಿ ಅವರು ಮಾತನಾಡಿದರು.

ತಾಂತ್ರಿಕ ಸ್ಪರ್ಧೆಗಳು ಸಾಮಾನ್ಯವಾಗಿ ಸಾಪ್ಟ್‌ವೇರ್, ಡೆವಲಪ್‌ಮೆಂಟ್, ಡೇಟಾ ವಿಶ್ಲೇ?ಣೆ, ಮತ್ತು ಕೃತಕ ಬುದ್ಧಿಮತ್ತೆಯಂತಹ ವಿಭಾಗಗಳನ್ನು ಒಳಗೊಂಡಿವೆ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯಗಳನ್ನು ಪರೀಕ್ಷಿಸಲು, ಸಮಸ್ಯೆಯನ್ನು ಪರಿಹರಿಸುವ ಸಾಮರ್ಥ್ಯವನ್ನು ಉತ್ತೇಜಿಸಲು ಸಹಕಾರಿ ಎಂ ದು ತಿಳಿಸಿದರು.

ಸ್ಪರ್ಧಾ ಕಾರ್ಯಕ್ರಮವು ಕಠಿಣ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಕೌಶಲ್ಯಗಳನ್ನು ಸುಧಾರಿಸಲು ಉತ್ತಮ ಅವಕಾಶವನ್ನು ನೀಡಲಿದೆ. ವಾಸ್ತವಿಕ ಪ್ರಪಂಚದ ಸನ್ನಿವೇಶಗಳಲ್ಲಿ ಕೌಶಲ್ಯಗಳನ್ನು ಬಳಸುವ ಅನು ಭವವನ್ನು ನೀಡುವ ಜೊತೆಗೆ ವಿದ್ಯಾರ್ಥಿಗಳು, ವೃತ್ತಿಪರರು ಮತ್ತು ಉದ್ಯಮದ ತಜ್ಞರೊಂದಿಗೆ ಸಂಪರ್ಕ ಸಾ ಧಿಸಲು ಸಹಾಯ ಮಾಡಲಿದೆ ಎಂದರು.

ಮಾಹಿತಿ ತಂತ್ರಜ್ಞಾನವನ್ನು ಈಗ ಆಧುನಿಕ ಜೀವನದ ಪ್ರತಿಯೊಂದು ಅಂಶಕ್ಕೂ ಸಂಯೋಜಿಸಲಾ ಗಿದೆ. ಕಂಪ್ಯೂಟರ್ ಮಾಹಿತಿ ತಂತ್ರಜ್ಞಾನ ತಜ್ಞರು ಅವರು ಕೆಲಸ ಮಾಡುವ ಕಂಪನಿಯಲ್ಲಿ ಬಳಸುವ ಹಾರ್ಡ್ವೇರ್ ಮತ್ತು ಸಾಫ್ಟ್ವೇರ್‌ನೊಂದಿಗೆ ಪರಿಚಿತರಾಗಿರಬೇಕು ಮತ್ತು ದೊಡ್ಡ ಮತ್ತು ಸಣ್ಣ ಸಮಸ್ಯೆಗಳ ಶ್ರೇಣಿ ಯಲ್ಲಿ ತಾಂತ್ರಿಕ ಬೆಂಬಲವನ್ನು ನೀಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಎಐಟಿ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ|| ಎಸ್ ಸಂಪತ್ ಮಾತನಾಡಿ ಪ್ರತಿವ?ವೂ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ತಾಂತ್ರಿಕ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದ್ದು ರಾಜ್ಯದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಸ್ಪರ್ಧೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಅನಿಲಿವಿಂಗ್ ಸ್ಪೆಸ್ ಕಂಪನಿಯ ಗಗನ್, ನಿಶ್ಚಿತ್, ಎಐಟಿ ಕಾಲೇಜಿನ ಎಐ ವಿಭಾಗದ ಮುಖ್ಯಸ್ಥ ಪ್ರೊ.ಸುನಿತಾ, ವಿವಿಧ ವಿಭಾಗದ ಮುಖ್ಯಸ್ಥರಾದ ಪ್ರೊ.ರಾಕೇಶ್, ಪ್ರೊ.ಅಶ್ವಿನಿ ಹಾಗೂ ವಿಭಾಗದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.

Technical competitions conducive to skill development

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...