Home namma chikmagalur chikamagalur ಟೆಂಪೋ ಟ್ರಾವೆಲರ್ ವಾಹನ ಸ್ಕೂಟಿಗೆ ಡಿಕ್ಕಿ-ಯುವತಿ ಸಾವು
chikamagalurCrime NewsHomeLatest Newsnamma chikmagalur

ಟೆಂಪೋ ಟ್ರಾವೆಲರ್ ವಾಹನ ಸ್ಕೂಟಿಗೆ ಡಿಕ್ಕಿ-ಯುವತಿ ಸಾವು

Share
Share

ಚಿಕ್ಕಮಗಳೂರು: ಟೆಂಪೋ ಟ್ರಾವೆಲರ್ ವಾಹನ ಸ್ಕೂಟಿಗೆ ಡಿಕ್ಕಿಯಾದ ಪರಿಣಾಮ ಮಹಿಳೆ ಒಬ್ಬರು ಮೃತಪಟ್ಟಿದ್ದಾರೆ. ಆಲ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಯೋಗಿ ನವಮಿ (25 ವರ್ಷ) ಸಾವನ್ನಪ್ಪಿರುವ ದುರ್ದೈವಿ.

ಇಂದು ಮುಂಜಾನೆ ನವಮಿ ಆಲ್ದೂರು ಸಹಕಾರ ಸಂಘದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸ್ಕೂಟಿಯಲ್ಲಿ ಆಗಮಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಆಲ್ದೂರು ಸಮೀಪದ ಹುಣಸೆಮಕ್ಕಿ ಗ್ರಾಮದ ವಿಕಾಸ್ ರವರ ಪತ್ನಿ ನವಮಿ ಆಲ್ದೂರು ಸಹಕಾರ ಸಂಘದಲ್ಲಿ ಉದ್ಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು

ಇಂದು ಮುಂಜಾನೆ ಹುಣಸೆಮಕ್ಕಿ ಇಂದ ಸ್ಕೂಟಿಯಲ್ಲಿ ಸಹಕಾರ ಸಂಘದ ಗಣರಾಜ್ಯೋತ್ಸವಕ್ಕೆ ಆಗಮಿಸುತ್ತಿದ್ದರು. ಆಲ್ದೂರು ಬಿರಿಂಜೆ ಹಳ್ಳದ ಸಮೀಪ ಟಿಟಿ ವಾಹನ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಹೆಲ್ಮೆಟ್ ಧರಿಸಿದ್ದರೂ ತಲೆಗೆ ತೀವ್ರ ಬಿಟ್ಟು ಬಿದ್ದಿದೆ. ಚಿಕ್ಕಮಗಳೂರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ

ಅಪಘಾತ ನಡೆಸಿದ ಟಿಟಿ ವಾಹನ ನಿಲ್ಲಿಸದೆ ಪರಾರಿಯಾಗಿದ್ದು ವಾಹನ ಸಂಖ್ಯೆಯ ಆಧಾರದಲ್ಲಿ ವಾಹನವನ್ನು ವಶಕ್ಕೆ ಪಡೆಯಲಾಗುವುದು ಎಂದು ಆಲ್ದೂರು ಠಾಣಾಧಿಕಾರಿ ರವಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಸಾರ್ವಜನಿಕ ಇಂದು ಮಧ್ಯಾಹ್ನ 2 ಗಂಟೆಯಿಂದ ಆಲ್ದೂರು ಸಹಕಾರ ಸಂಘದಲ್ಲಿ ಪಾರ್ಥಿವ ಶರೀರವನ್ನು ಒಂದು ಗಂಟೆಗಳ ಕಾಲ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ತಿಳಿದುಬಂದಿದೆ.

ರಾತ್ರಿ 8 ಗಂಟೆಗೆ ಸ್ವಗ್ರಾಮ ಹುಣಸೆಮಕ್ಕಿಯಲ್ಲಿ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ. ನವಮಿ ಆಲ್ದೂರು ಸಮೀಪದ ಮಾಗರಹಳ್ಳಿ ಗ್ರಾಮದ ವೆಂಕಟೇಶ್ ಗೌಡ ಶ್ರೀಮತಿ ಪೂರ್ಣಿಮಾ ಅವರ ಏಕೈಕ ಪುತ್ರಿ, ಹುಣಸೇಮಕ್ಕಿ ಗ್ರಾಮದ ವಿಕಾಸ್ ಅವರನ್ನು ವಿವಾಹವಾಗಿದ್ದರು. ಇವರಿಗೆ ಮೂರು ವರ್ಷದ ಹೆಣ್ಣು ಮಗು ಇದೆ.

ಅಪಘಾತದಿಂದ ಅಘಾತಗೊಂಡು ದುಃಖದಲ್ಲಿದ್ದರು ಇನ್ನೊಬ್ಬರಿಗೆ ಬೆಳಕಾಗಲಿ ಎಂದು ಕಣ್ಣು ದಾನ ಮಾಡಿ ಮಾನವೀಯತೆ ತೋರಿದ ಕುಟುಂಬದ ಬಗ್ಗೆ ಶ್ಲಾಘಿಸ ಬೇಕು.

Tempo Traveler vehicle collides with a scooty – young woman dies

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...