Home namma chikmagalur ಗಿರಿ ಪ್ರದೇಶಕ್ಕೆ -ಪ್ರವಾಸಿಗರ ಭೇಟಿಗೆ ತಾತ್ಕಾಲಿಕ ನಿರ್ಬಂಧ
namma chikmagalurchikamagalurHomeLatest News

ಗಿರಿ ಪ್ರದೇಶಕ್ಕೆ -ಪ್ರವಾಸಿಗರ ಭೇಟಿಗೆ ತಾತ್ಕಾಲಿಕ ನಿರ್ಬಂಧ

Share
Share

ಚಿಕ್ಕಮಗಳೂರು: ತಾಲ್ಲೂಕಿನ ಐ.ಡಿ.ಪೀಠ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಡಿಸೆಂಬರ್ ೨ ರಿಂದ ೪ರವರೆಗೆ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿರುವುದರಿಂದ ಜಿಲ್ಲೆಯ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆ, ಗಾಳಿಕೆರೆ ಮತ್ತು ಮಾಣಿಕ್ಯಧಾರಾ ತಾಣಗಳಿಗೆ ಮತ್ತು ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಸ್ಥೆಗೆ ಆಗಮಿಸುವ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ಡಿಸೆಂಬರ್ ೧ ರ ಬೆಳಿಗ್ಗೆ ೬ ರಿಂದ ಡಿ.೫ ರ ಬೆಳಿಗ್ಗೆ ೧೦ ಗಂಟೆವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ದತ್ತಜಯಂತಿಗೆ ಈ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು, ವಾಹನಗಳ ಮುಖಾಂತರ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಸ್ಥೆಗೆ ಆಗಮಿಸಲಿದ್ದು, ದತ್ತಮಾಲಾಧಾರಿಗಳು, ವಿಶ್ವ ಹಿಂದೂ ಪರಿಷತ್, ಬಜರಂಗದಳ ಮುಖಂಡರು, ಕಾರ್ಯಕರ್ತರು, ಸುತ್ತಮುತ್ತಲಿನ ವ್ಯಾಪ್ತಿಯ ಸ್ಥಳೀಯರು ಹಾಗೂ ಜಮೀನುಗಳಲ್ಲಿ ಕೃಷಿ ಚಟುವಟಿಕೆ ಮಾಡುವವರು ಮತ್ತು ಮೇಲ್ಕಂಡ ಸ್ಥಳಗಳಲ್ಲಿ ಈಗಾಗಲೇ ಹೋಮ್ ಸ್ಟೇ, ರೆಸಾರ್ಟ್‌ಗಳನ್ನು ಬುಕಿಂಗ್ ಮಾಡಿಕೊಂಡವರನ್ನು ಈ ನಿರ್ಬಂಧದಿಂದ ಹೊರತುಪಡಿಸಲಾಗಿದೆ.

ಸಂಸ್ಥೆಗೆ ತೆರಳುವ ರಸ್ತೆಯು ತುಂಬಾ ಕಿರಿದಾಗಿದ್ದು ಪ್ರಸಕ್ತ ವರ್ಷದಲ್ಲಿ ಸುರಿದ ಮಳೆಯಿಂದಾಗಿ ರಸ್ತೆಗಳು ಹಾಳಾಗಿದ್ದು, ಭೂಕುಸಿತ ಉಂಟಾಗಿದೆ. ಇದರಿಂದಾಗಿ ವಾಹನ ದಟ್ಟಣೆ ಹಾಗೂ ಹೆಚ್ಚಿನ ಜನಸಂದಣಿಯಾಗಿ ಅನಾನುಕೂಲವಾಗುವ ಸಂಭವವಿರುವುದರಿಂದ ಹಾಗೂ ಜಿಲ್ಲಾ ಲೋಕೋಪಯೋಗಿ ಇಲಾಖೆಯ ವರದಿ ಮೇರೆಗೆ ಕೈಮರದಿಂದ ಕವಿಕಲ್‌ಗಂಡಿ ಮೂಲಕ ಹೋಗುವ ಅತ್ತಿಗುಂಡಿ ಭಾಗಗಳಲ್ಲಿ ಅತಿಯಾದ ಮಳೆಯಿಂದಾಗಿ ರಸ್ತೆಯು ಕುಸಿದಿದೆ ಮಾತ್ರವಲ್ಲ, ರಸ್ತೆಯ ಭಾಗವು ಅತೀ ಕಿರಿದಾಗಿದ್ದು ಹಾಗೂ ಏರಿಳಿತಗಳಿಂದ ಕೂಡಿರುವುದರಿಂದ ಉದ್ದ ಚಾಸ್ಸಿ ಇರುವ ವಾಹನಗಳ ಸಂಚಾರವು ಅಪಾಯಕಾರಿಯಾಗಿದೆ.

ಈ ಹಿನ್ನೆಲೆಯಲ್ಲಿ ಕೈಮರ ಚೆಕ್‌ಪೋಸ್ಟ್‌ನಿಂದ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆಗೆ ತೆರಳುವ ರಸ್ತೆಯಲ್ಲಿ ಉದ್ದಚಾಸ್ಸಿ ವಾಹನಗಳ ಸಂಚಾರವನ್ನು (ಎರಡು ಆಕ್ಸೆಲ್‌ಗಿಂತ ಹೆಚ್ಚಿನ ಆಕ್ಸೆಲ್‌ಗಳನ್ನು ಹೊಂದಿರುವ ಲಾರಿ ಮತ್ತು ಬಸ್ಸುಗಳು) ಡಿಸೆಂಬರ್ ೧ ರಿಂದ ೫ ರವರೆಗೆ ನಿರ್ಬಂಧಿಸಲಾಗಿದೆ. (ಈ ಆದೇಶವು ಬಂದೂಬಸ್ತ್ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ಉಪಯೋಗಿಸುವ ಕೆ.ಎಸ್.ಆರ್.ಟಿ.ಸಿ ವಾಹನಗಳು ಮತ್ತು ಆಗ್ನಿಶಾಮಕ ವಾಹನಗಳು ಮತ್ತು ಇತರೆ ಅಗತ್ಯ ತುರ್ತು ಸೇವೆಗಳ ವಾಹನಗಳಿಗೆ ಅನ್ವಯಿಸುವುದಿಲ್ಲ). ಸಾರ್ವಜನಿಕರು ಸಹಕರಿಸಬೇಕೆಂದು ಜಿಲ್ಲಾಡಳಿತವು ಕೋರಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Temporary ban on tourist visits to the Giri region

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...