Home namma chikmagalur chikamagalur ಪ್ರವಾಸಿಗರಿಗಾಗಿ ಆಯೋಜಿಸಿದ್ದ ಹೆಲಿ ಟೂರಿಸಂಗೆ ತಾತ್ಕಾಲಿಕ ತಡೆ
chikamagalurHomeLatest Newsnamma chikmagalur

ಪ್ರವಾಸಿಗರಿಗಾಗಿ ಆಯೋಜಿಸಿದ್ದ ಹೆಲಿ ಟೂರಿಸಂಗೆ ತಾತ್ಕಾಲಿಕ ತಡೆ

Share
Share

ಚಿಕ್ಕಮಗಳೂರು: ಕ್ರಿಸ್ ಮಸ್ ಮತ್ತು ವರ್ಷಾಂತ್ಯಕ್ಕೆ ಬರುವ ಪ್ರವಾಸಿಗರಿಗಾಗಿ ಆಯೋಜಿಸಿದ್ದ ಹೆಲಿ ಟೂರಿಸಂಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ತಾತ್ಕಾಲಿಕ ತಡೆ ໖໖.

ಎ.ಯೋಗೇಶ್ವರನ್ ಮತ್ತು ಬಿ. ಪೂಂಗಳಲಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮಂಡಳಿ, ಮಧ್ಯಂತರ ಆದೇಶ ಹೊರಡಿಸಿದೆ.

ಮುಳ್ಳಯ್ಯನಗಿರಿ ಸೇರಿ ಚಂದ್ರದ್ರೋಣ ಪರ್ವತ ಸಾಲು, ಕಳಸ ಮತ್ತು ಮೂಡಿಗೆರೆ ಸುತ್ತಮುತ್ತ ಹೆಲಿಕಾಪ್ಟರ್ ಹಾರಾಟ ನಡೆಸಿ ಪ್ರವಾಸಿಗರಿಗೆ ಆಗಸದಿಂದ ಗಿರಿಗಳ ದರ್ಶನ ಮಾಡಿಸಲು ಜಿಲ್ಲಾ ಪ್ರವಾಸೋದ್ಯಮ ಸಮಿತಿ ಮುಂದಾಗಿದೆ. ಮುಳ್ಳಯ್ತನಗಿರಿಗೆ ಹೊಂದಿಕೊಂಡಂತೆ ಭದ್ರಾ ವನ್ಯಜೀವಿ ಪ್ರದೇಶ ಇದೆ.

ಕಳಸ ಮತ್ತು ಮೂಡಿಗೆರೆಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನ ಹೊಂದಿಕೊಂಡಿವೆ. ಹೆಲಿ ಟೂರಿಸಂ ನಡೆಸಿದರೆ ವನ್ಯಜೀವಿಗಳ ಆವಾಸಕ್ಕೆ ತೊಂದರೆಯಾಗಲಿದೆ. ಅದರಲ್ಲೂ ಪಕ್ಷಿಗಳು ಗೂಡು ಕಟ್ಟುವ ಸಮಯ ಆಗಿರುವುದರಿಂದ ಹೆಲಿಕಾಪ್ಟ‌ರ್ ಹಾರಾಟದ ಶಬ್ದ ತೊಂದರೆ ಉಂಟು ಮಾಡಲಿದೆ. ಪರಿಸರ ಸೂಕ್ಷ್ಮ ಪ್ರದೇಶ 2 ರುವುದರಿಂದ ಹೆಲಿ ಟೂರಿಸಂಗೆ ಅವಕಾಶ ನೀಡಬಾರದು ಎಂದು ಅರ್ಜಿದಾರರು ವಾದ ಮಂಡಿಸಿದ್ದಾರೆ.

ಪ್ರತಿವಾದಿ ವಕೀಲರು ವಿವರಣೆ ನೀಡಲು ಸಮಯ ಕೇಳಿದರು. ವಿಚಾರಣೆ ನಡೆಸಿದ ನ್ಯಾಯಮಂಡಳಿ, ಪರಿಸರ ಸೂಕ್ಷ್ಮ ವಿಷಯ ಆಗಿರುವುದರಿಂದ ಮಧ್ಯಂತರ ಆದೇಶ ನೀಡಲಾಗುತ್ತಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಮುಳ್ಳಯ್ಯನಗಿರಿ ಮೇಲ್ಬಾಗದಲ್ಲಿ ಹೆಲಿಕಾಪ್ಟರ್ ಹಾರಾಟ ನಡೆಸಬಾರದು. ಚಿಕ್ಕಮಗಳೂರು ನಗರದಲ್ಲಿ ಹೆಲಿಕಾಪ್ಟರ್ ಹಾರಾಟಕ್ಕೆ ಅನುಮತಿ ನೀಡಲಾಗುವುದು ಎಂದು ವಿವರಿಸಿದೆ. ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಶನಿವಾರ ಮೂಡಿಗೆರೆಯಲ್ಲಿ ಹೆಲಿ ಟೂರಿಸಂ ಉದ್ಘಾಟನಾ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿತ್ತು. ಸದ್ಯಕ್ಕೆ ಎಲ್ಲಾ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಿದೆ.

Temporary suspension of heli tourism organized for tourists

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...