Home namma chikmagalur chikamagalur ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ತಾತ್ಕಾಲಿಕ ಚಾರಣ ನಿರ್ಬಂಧ
chikamagalurHomeLatest Newsnamma chikmagalur

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ತಾತ್ಕಾಲಿಕ ಚಾರಣ ನಿರ್ಬಂಧ

Share
Share

ಚಿಕ್ಕಮಗಳೂರು : ಅಖಿಲ ಭಾರತ ಹುಲಿ ಗಣತಿ 2026ರ ಪ್ರಕ್ರಿಯೆಯು ಜ.5ರಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಸೇರಿದಂತೆ ಸುತ್ತಮುತ್ತಲಿನ ಪ್ರಮುಖ ಚಾರಣ ಪಥಗಳು ಮತ್ತು ಜಲಪಾತಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಕುದುರೆಮುಖ ವನ್ಯಜೀವಿ ವಿಭಾಗದ ಕಾರ್ಕಳ ಉಪ ಅರಣ್ಯ ಸಂರಕ್ಷಣಾಧಿಕಾರಿ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಜ.5, 2026ರಿಂದ ಜ.12, 2026ರವರೆಗೆ ಒಟ್ಟು 8 ದಿನಗಳ ಕಾಲ ಹುಲಿ ಗಣತಿ ನಡೆಯಲಿದ್ದು, ಗಣತಿ ನಡೆಯುವ ಈ ದಿನಗಳಂದು ಚಾರಣ ಸ್ಥಳಗಳಲ್ಲಿ ಈ ನಿರ್ಬಂಧ ಜಾರಿಯಲ್ಲಿರುತ್ತದೆ.

ಹುಲಿ ಗಣತಿ ಕಾರ್ಯವು ಸುಗಮವಾಗಿ ನಡೆಯಲು ಅರಣ್ಯ ಇಲಾಖೆಯು ಕುದುರೆಮುಖ, ಗಂಗಡಿಕಲ್, ಕುರಿಂಜಾಲ್, ವಾಲಿಕುಂಜ ಕೆರೆಕಟ್ಟೆ, ನೇತ್ರಾವತಿ, ಕೊಡಚಾದ್ರಿ ಮಾಲೂರು, ಕೊಡಚಾದ್ರಿ ಹಿಡ್ಲುಮನೆ ಜಲಪಾತ, ನರಸಿಂಹ ಪರ್ವತ ಮಲ್ಲಂದೂರು, ನರಸಿಂಹ ಪರ್ವತ ಕಿಗ್ಗ ವಾಲಿಕುಂಜ ಕಾರ್ಕಳ, ಬಂಡಾಜೆ ಓಲಂಬ್ರ ಚಾರಣ ತಾಣಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.

ಕೇವಲ ಚಾರಣ ಪಥಗಳಲ್ಲದೆ, ಈ ವಲಯಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಲಪಾತಗಳಿಗೂ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅರಣ್ಯ ಪ್ರದೇಶದಲ್ಲಿ ಗಣತಿ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಮತ್ತು ವನ್ಯಜೀವಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪ್ರವಾಸಿಗರು ಈ ದಿನಾಂಕಗಳಂದು ತಮ್ಮ ಪ್ರವಾಸವನ್ನು ಯೋಜಿಸದಂತೆ ಅರಣ್ಯ ಇಲಾಖೆ ಮನವಿ ಮಾಡಿದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಚಾರಣ ಪಥಗಳಲ್ಲಿ ಕಾವಲುಗಾರರನ್ನು ನಿಯೋಜಿಸಲು ಇಲಾಖೆ ಸೂಚಿಸಿದೆ.

Temporary trekking ban within Kudremukh National Park

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...