ಚಿಕ್ಕಮಗಳೂರು: ಭಾರತ ದೇಶದಲ್ಲಿ ಜನಿಸಿದ ನಾವು ಮೊದಲು ದೇಶ ಬಳಿಕ ಧರ್ಮ, ನಂತರ ಗ್ರಾಮ, ಮನೆ. ದೇಶಕ್ಕೆ ಉಗ್ರಗಾಮಿಗಳಿಂದ ಭಯೋತ್ಪಾದಕರ ಉಪಟಳದಿಂದ ತೊಂದರೆಯಾಗುತ್ತಿದ್ದು, ಈ ಸಂದರ್ಭದಲ್ಲಿ ದೇಶದ ಯಾವುದೇ ಧರ್ಮದ ಪ್ರಜೆಗಳ ಮೇಲೆ ದಾಳಿ ಮಾಡಿದರೆ ಸಹಿಸಲಾಗದು. ಕೇಂದ್ರ ಸರ್ಕಾರ ಉಗ್ರರನ್ನು ಸದೆಬಡಿಯಲು ತೆಗೆದುಕೊಂಡ ನಿರ್ಧಾರ ಶ್ಲಾಘನೀಯ ಶಾಸಕ ಹೆಚ್.ಡಿ. ತಮ್ಮಯ್ಯ ಎಂದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಈಗಾಗಲೇ ರಾಜ್ಯಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸೇನೆಗೆ ನೈತಿಕ ಬೆಂಬಲ ತುಂಬುವ ದೃಷ್ಟಿಯಿಂದ ಉಗ್ರವಾದಿ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಾಶಮಾಡಲು ಮುಂದಾಗಿರುವ ಕೇಂದ್ರಸರ್ಕಾರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ನೆನ್ನೆ ನಡೆದ ತಿರಂಗಾ ಯಾತ್ರೆ ಇತಿಹಾಸದ ಪುಟದಲ್ಲಿ ಸೇರುತ್ತಿದೆ. ಇದರಲ್ಲಿ ಸರ್ವರೂ ಒಗ್ಗಟ್ಟಿನಿಂದ ಭಾಗವಹಿಸಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಉಗ್ರಗಾಮಿಗಳನ್ನು ಸದೆಬಡಿಯುವ ಶಕ್ತಿಯನ್ನು ಸೇನೆಗೆ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಭಾರತ ಅತೀ ಶೀಘ್ರ ಉಗ್ರಗಾಮಿಗಳ, ಭಯೋತ್ಪಾದಕರ ಮುಕ್ತ ದೇಶವಾಗಬೇಕು. ಯಾವುದೇ ರಾಜ್ಯದ ಪ್ರವಾಸಿ ತಾಣಗಳಿಗೆ ಹೋದವರಿಗೆ ಭಯಮುಕ್ತವಾಗುವ ಜೊತೆಗೆ ಕ್ಷೇಮವಾಗಿ ವಾಪಸ್ ಆಗುವ ಭಾವನೆ ಬೆಳೆಯುವಂತಾಗಲಿ ಎಂದು ಹಾರೈಸಿದರು.
ಸೈನಿಕರಿಗೆ ಆರ್ಥಿಕ ಸಹಾಯದ ಜೊತೆಗೆ ನೈತಿಕ ಬೆಂಬಲ ನೀಡಲು ಮೇ.೧೭ ರಂದು ನಡೆಯಲಿರುವ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಜಿಲ್ಲೆಯ ಜನರು ನೀಡುವ ದೇಣಿಗೆಯನ್ನು ಸಂಗ್ರಹಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
The central government’s decision to crack down on terrorists is commendable.
Leave a comment