Home ಮಳೆಯಿಂದ ಹಾನಿಯಾದ ರಸ್ತೆಗಳನ್ನು ದುರಸ್ತಿ ಮಾಡುವುದೇ ಸವಾಲು
HomechikamagalurLatest Newsnamma chikmagalur

ಮಳೆಯಿಂದ ಹಾನಿಯಾದ ರಸ್ತೆಗಳನ್ನು ದುರಸ್ತಿ ಮಾಡುವುದೇ ಸವಾಲು

Share
Share

ಚಿಕ್ಕಮಗಳೂರು: ಗ್ರಾಮೀಣ ಭಾಗದಲ್ಲಿಯೂ ಉತ್ತಮ ರಸ್ತೆಗಳನ್ನು ನಿರ್ಮಾಣ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಜೊತೆಗೆ ಮಲೆನಾಡು ಭಾಗದ ರಸ್ತೆಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿತಿಳಿಸಿದರು.

ಮೂಡಿಗೆರೆ ತಾಲೂಕಿನ ವಿವಿಧೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಳೆಗಾಲ ಆರಂಭಕ್ಕೂ ಮೊದಲೇ ಈ ಭಾಗದಲ್ಲಿ ರಸ್ತೆಗಳು ಹಾಳಾಗಿದ್ದವು. ಇದೀಗ ಮಳೆಯಿಂದ ಇನ್ನಷ್ಟು ಹಾನಿಯಾಗಿದೆ. ಈ ರಸ್ತೆಗಳನ್ನು ದುರಸ್ತಿ ಮಾಡುವುದೇ ಸವಾಲಿನ ಕೆಲಸ ಎಂದರು,

ಗುತ್ತಿಗೆದಾರರಿಗೆ ಹಣ ಪಾವತಿ ವಿಳಂಬವಾಗುವುದು ಹೊಸದೇನಲ್ಲ. ಇಂದು ಮಾಡಿದ ಕಾಮಗಾರಿಗಳಿಗೆ ಒಂದು ವರ್ಷದ ಬಳಿಕ ಹಣ ಪಾವತಿಯಾಗುತ್ತದೆ. ಇದು ಯಾವುದೇ ಸರ್ಕಾರ ಬಂದರೂ ಹಾಗೆಯೇ ಇರುತ್ತದೆ. ಆದರೆ ಕೆಲಸ ನಿರಂತರವಾಗಿ ನಡೆಯುತ್ತದೆ ಎಂದು ಹೇಳಿದರು.

ಚರಂಡಿ ಮೂಲಕ ನೀರು ಹರಿಯದೇ ಇದ್ದರೆ ರಸ್ತೆಗಳು ಬಾಳಿಕೆ ಬರಲು ಸಾಧ್ಯವಿಲ್ಲ, ಹೀಗಾಗಿ ಕೂಡಲೇ ರಸ್ತೆ ಪಕ್ಕದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಮಳೆ ಆಚಾನಕ್‌ ಆಗಿ ಬಂದಿದೆ. ಹದಿನೈದು ದಿನ ಬೇಗನೇ ಮಳೆ ಆರಂಭಗೊಂಡಿದೆ. ಹೀಗಾಗಿ ರಸ್ತೆ ಕಾಮಗಾರಿಗಳಿಗೆ ಹಿನ್ನಡೆಯಾಗುತ್ತಿದೆ. ಮಳೆಗಾಲದಲ್ಲಿ ರಸ್ತೆ ಕಾಮಗಾರಿ ಮಾಡಿದರೆ ರಸ್ತೆಗಳು ಬಾಳಿಕೆ ಬರುವುದಿಲ್ಲ, ಹೀಗಾಗಿ ನವೆಂಬರ್‌ ಬಳಿಕ ಹೊಸ ರಸ್ತೆ ಕಾಮಗಾರಿ ಆರಂಭಿಸುವುದಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಚ್‌.ಡಿ.ತಮ್ಮಯ್ಯ, ನಯನಾ ಮೋಟಮ್ಮ, ಟಿ.ಡಿ.ರಾಜೇಗೌಡ ಮತ್ತಿತರರಿದ್ದರು.

The challenge is to repair roads damaged by rain.

Share

Leave a comment

Leave a Reply

Your email address will not be published. Required fields are marked *

Don't Miss

ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರ ಬಂಧನ

ಚಿಕ್ಕಮಗಳೂರು : ಮನುಷ್ಯತ್ವಕ್ಕೆ ಮಸಿ ಬಳಿಯುವಂತೆ ವೃದ್ಧ ರೈತರೊಬ್ಬರ ಮೇಲೆ ಹಲ್ಲೆ ನಡೆಸಿ ಹಣ ದೋಚಿದ್ದ ಇಬ್ಬರು ಅಂತರ್ ಜಿಲ್ಲಾ ದರೋಡೆಕೋರರನ್ನು ಚಿಕ್ಕಮಗಳೂರು ನಗರ ಪೊಲೀಸರು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕುರಿಚಿಕ್ಕನಹಳ್ಳಿಯ ನಿಂಗೇಗೌಡ...

ಹೋಂ ಸ್ಟೇ’ನಲ್ಲಿ ಯುವತಿ ಸಾವು-ಮಾಲೀಕ ವಿರುದ್ಧ ಪ್ರಕರಣ ದಾಖಲು

ಚಿಕ್ಕಮಗಳೂರು : ತಾಲೂಕಿನ ಹಾಂದಿ ಗ್ರಾಮದ ‘ಹಿಪ್ಲಾ ಹೋಂ ಸ್ಟೇ’ನಲ್ಲಿ ನಡೆದಿದ್ದ ಯುವತಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ಕು ತಿಂಗಳ ಬಳಿಕ ಮಾಲೀಕ ಸುಧಾಕರ್ ವಿರುದ್ಧ ಅಲ್ಲೂರು ಪೊಲೀಸ್ ಠಾಣೆಯಲ್ಲಿ...

Related Articles

ಇಂದಿನಿಂದ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

ಚಿಕ್ಕಮಗಳೂರು : ಶನಿವಾರದಿಂದ ರಾಜ್ಯಾದ್ಯಂತ 2025 26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು ಇದಕ್ಕೆ...

ಸಾವಿನ ಹೆಣ ಇಟ್ಟುಕೊಂಡು ಕೀಳು ಮಟ್ಟದ ರಾಜಕೀಯ

ಚಿಕ್ಕಮಗಳೂರು: ಇತ್ತೀಚೆಗೆ ನಡೆದ ಆನೆ ದಾಳಿಯಿಂದಾದ ಸಾವು ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಕುರಿತು...

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ

ಚಿಕ್ಕಮಗಳೂರು: ಕೆ.ಎಂ. ರಸ್ತೆಯ ಕತ್ರಿಮಾರಮ್ಮ ದೇವಸ್ಥಾನದ ಸಮೀಪವಿರುವ ಬಸ್ ನಿಲ್ದಾಣದಿಂದ ಸಖರಾಯಪಟ್ಟಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ...