Home namma chikmagalur ನಗರದಲ್ಲಿ ಕನಿಷ್ಠ 5 ವರ್ಷ ಶಾಶ್ವತ ಗುಣಮಟ್ಟದ ರಸ್ತೆಗಳಾಗಬೇಕು
namma chikmagalurchikamagalurHomeLatest News

ನಗರದಲ್ಲಿ ಕನಿಷ್ಠ 5 ವರ್ಷ ಶಾಶ್ವತ ಗುಣಮಟ್ಟದ ರಸ್ತೆಗಳಾಗಬೇಕು

Share
Share

ಚಿಕ್ಕಮಗಳೂರು: ನಗರದ ಎಲ್ಲಾ ರಸ್ತೆಗಳು ಸಮಗ್ರವಾಗಿ ಅಭಿವೃದ್ಧಿಪಡಿಸಿದ ಬಳಿಕ ಕನಿಷ್ಠ ೫ ವರ್ಷ ಶಾಶ್ವತವಾಗಿ ಗುಣಮಟ್ಟದ ರಸ್ತೆಗಳಾಗಬೇಕು. ಈ ನಿಟ್ಟಿನಲ್ಲಿ ಸ್ಥಳೀಯರ ಸಹಭಾಗಿತ್ವದ ಜೊತೆಗೆ ನಗರಸಭೆ ಸದಸ್ಯರು ಕ್ರಮವಹಿಸಬೇಕು ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.

ಅವರು ನಗರಸಭೆ ವ್ಯಾಪ್ತಿಯ ವಾರ್ಡ್ ಸಂಖ್ಯೆ ೮ ರಲ್ಲಿ ‘ಸೈಕಲ್ ತುಳಿ ಜನರ ಸಮಸ್ಯೆ ತಿಳಿ’ ಕಾರ್ಯಕ್ರಮದಡಿಯಲ್ಲಿ ಜಯನಗರ ಬಡಾವಣೆಯ ಶ್ರೀ ಸಾಯಿಮಂದಿರದ ರಸ್ತೆ ಹಾಗೂ ಹೊಸಮನೆ ಬಡಾವಣೆಯ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ನಗರದ ರಸ್ತೆಗಳ ಬಗ್ಗೆ ಹಾಗೂ ಜನರ ಸಮಸ್ಯೆಗಳನ್ನು ಅರಿಯಲು ‘ಸೈಕಲ್ ತುಳಿ ಜನರ ಸಮಸ್ಯೆ ತಿಳಿ’ ಅಂತಿಮ ದಿನದ ಕಾರ್ಯಕ್ರಮದಲ್ಲಿ ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಅಧಿಕಾರಿಗಳಿಂದ ಪರಿಹರಿಸುವ ಭರವಸೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯಸರ್ಕಾರಕ್ಕೆ ಮನವಿ ಮಾಡಿದ ಮೇರೆಗೆ ೧೦ ಕೋಟಿ ವಿಶೇಷ ಅನುದಾನ ನಗರಸಭೆಗೆ ಹಾಗೂ ೨.೫೦ ಕೋಟಿ ಅನುದಾನ ಪಿಡಬ್ಲೂಡಿ ಗೆ ಮತ್ತು ಈಗ ೧೦ ಕೋಟಿ ಸೇರಿ ಒಟ್ಟು ೨೦ ಕೋಟಿ ರೂ ವೆಚ್ಚದಲ್ಲಿ ನಗರದ ಎಲ್ಲಾ ನಾಗರಿಕರ ಅವಶ್ಯಕತೆಗಳಿಗುಣವಾಗಿ ಪ್ರಮುಖ ರಸ್ತೆಗಳನ್ನು ಡಾಂಬರೀಕರಣ ಮತ್ತು ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುತ್ತಿದ್ದೇವೆ ಎಂದರು.

ಜಯನಗರ ಬಡಾವಣೆಯ ರಸ್ತೆ ಅಭಿವೃದ್ಧಿಗೆ ೨೬ ಲಕ್ಷ ರೂ., ಕೆಎಂ ರಸ್ತೆಯಿಂದ ದೊಡ್ಡೇಗೌಡರ ಮನೆವರೆಗೆ ೧೯ ಲಕ್ಷ ರೂ., ಎಸ್ಪಿ ಕಚೇರಿಯಿಂದ ಅರಣ್ಯ ಇಲಾಖೆ ಕಚೇರಿವರೆಗೆ ೩೦.೮೫ ಲಕ್ಷ ರೂ. ಅನುದಾನ ಮೀಸಲಿಟ್ಟಿದ್ದು, ಗುಣಮಟ್ಟದ ಶಾಶ್ವತ ಕಾಮಗಾರಿ ಮಾಡುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು.

ನೆನೆಗುದಿಗೆ ಬಿದ್ದಿರುವ ಆಶ್ರಯ ನಿವೇಶನ ಮತ್ತು ಇಂದಿರಾಗಾಂಧಿ ಬಡಾವಣೆಯಲ್ಲಿ ವಾಸಿಸುತ್ತಿರುವವರಿಗೆ ಶೀಘ್ರದಲ್ಲೇ ಹಕ್ಕುಪತ್ರ ವಿತರಿಸುವುದಾಗಿ ಭರವಸೆ ನೀಡಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರಾಜ್ಯಸರ್ಕಾರ ಪೂರ್ಣಪ್ರಮಾಣದ ಹಣ ಮಂಜೂರು ಮಾಡಿದೆ. ಇನ್ನು ಒಂದೂವರೆ ವರ್ಷದಲ್ಲಿ ಎಲ್ಲಾ ರೀತಿಯ ವೈದ್ಯರನ್ನೊಳಗೊಂಡ ವ್ಯವಸ್ಥೆ ಮಾಡಿ, ಸಾರ್ವಜನಿಕರಿಗೆ ಆಸ್ಪತ್ರೆಯನ್ನು ಸಮರ್ಪಿಸುತ್ತೇವೆಂದು ಹೇಳಿದರು.

ನಗರಸಭಾಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ನಮ್ಮ ವಾರ್ಡಿನಿಂದಲೇ ಸೈಕಲ್ ತುಳಿ ಸಮಸ್ಯೆ ತಿಳಿ ಘೋಷಣೆಯೊಂದಿಗೆ ಆರಂಭವಾದ ನಗರ ಪ್ರದಕ್ಷಿಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು, ನಗರವನ್ನು ಸುಂದರವಾಗಿ ಅಭಿವೃದ್ಧಿಗೊಳಿಸಲು ಶಾಸಕರು ಶ್ರಮಿಸುತ್ತಿದ್ದಾರೆ ಎಂದರು.
ನಗರಸಭೆ ಸದಸ್ಯ ಎ.ಸಿ ಕುಮಾರೇಗೌಡ ಮಾತನಾಡಿ, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಸದೃಢವಾಗಿ ಚಾಲನೆಗೆ ತರುವ ಕೆಲಸ ಆಗಬೇಕಿದ್ದು, ಶಾಸಕ ಹೆಚ್.ಡಿ ತಮ್ಮಯ್ಯನವರು ನಗರದ ೩೫ ವಾರ್ಡ್‌ಗಳಲ್ಲಿಯೂ ಯಾವುದೇ ತಾರತಮ್ಯವಿಲ್ಲದೆ ಸೈಕಲ್ ತುಳಿ ಸಮಸ್ಯೆ ತಿಳಿ ಘೋಷಣೆಯೊಂದಿಗೆ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದಾರೆಂದು ಶ್ಲಾಘಿಸಿದರು.

ಜನರ ಬಳಿಗೆ ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಕರೆತಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುತ್ತಿರುವುದಕ್ಕೆ ಶಾಸಕರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಲಿಲತಾನಾಯ್ಕ್, ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್ ಮೂರ್ತಿ, ಪೌರಾಯುಕ್ತ ಬಿ.ಸಿ ಬಸವರಾಜ್, ಜೇಮ್ಸ್, ರಫೀಕ್, ಆರಾಧ್ಯ, ದಿನೇಶ್, ದೊಡ್ಡೇಗೌಡ ಮತ್ತಿತರರು ಉಪಸ್ಥಿತರಿದ್ದರು.

The city should have permanent quality roads for at least 5 years.

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...