Home namma chikmagalur ನಗರಸಭೆಯಿಂದ ಹಮ್ಮಿಕೊಂಡಿದ್ದ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ
namma chikmagalurchikamagalurHomeLatest News

ನಗರಸಭೆಯಿಂದ ಹಮ್ಮಿಕೊಂಡಿದ್ದ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ

Share
Share

ಚಿಕ್ಕಮಗಳೂರು: ನಗರಸಭೆ ಕುಡಿಯುವ ನೀರು, ಸ್ವಚ್ಚತೆ, ರಸ್ತೆ, ಚರಂಡಿ, ಬೀದಿದೀಪ ಮುಂತಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಮುಖ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ತಿಳಿಸಿದರು.
ಅವರು ಇಂದು ಜಿಲ್ಲಾ ಆಟದ ಮೈದಾನದ ಸುತ್ತ ಹಾಗೂ ನ್ಯಾಯಾಲಯ, ಎಲ್‌ಐಸಿ ರಸ್ತೆಯಲ್ಲಿ ನಗರಸಭೆಯಿಂದ ಏರ್ಪಡಿಸಲಾಗಿದ್ದ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಅನುದಾನದ ಕೊರತೆ ಮುಂದಿಟ್ಟುಕೊಂಡು ಜನರ ಅನಿಸಿಕೆಗಳಿಗೆ ತೊಂದರೆಯಾಗಬಾರದು, ನಗರಸಭೆ ಸಿಬ್ಬಂದಿಗಳನ್ನು ಬಳಸಿಕೊಂಡು ಈ ಕೆಲಸ ಕಾರ್ಯಗಳನ್ನು ಮಾಡಬಹುದು ಎಂದು ಸಲಹೆ ನೀಡಿದರು. ಸ್ವಚ್ಚತೆ ಮುಕ್ತ ನಗರ, ಸ್ವಚ್ಚತೆಗೆ ಆದ್ಯತೆ ಈ ಬಗ್ಗೆ ನಾಗರೀಕರಲ್ಲಿ ಅರಿವು ಮೂಡಿಸಿ ನಗರದಲ್ಲಿ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ತೆರವು ಮಾಡದಿದ್ದರೆ ೫ ಸಾವಿರ ರೂ ದಂಡ ವಿಧಿಸುವುದಾಗಿ ಸಂಬಂಧಪಟ್ಟ ಮಾಲಿಕರಿಗೆ ಸೂಚನಾ ಪತ್ರ ನೀಡಿ ಎಂದು ಸಲಹೆ ನೀಡಿದರು.

ನಗರದಲ್ಲಿ ಜನಸಂಖ್ಯೆ ಹೆಚ್ಚಳದ ಜೊತೆಗೆ ವಾಹನಗಳ ಸಂಖ್ಯೆಯೂ ಹೆಚ್ಚಿದೆ. ಇದರಿಂದ ಪಾರ್ಕಿಂಗ್ ಸಮಸ್ಯೆ ಎದುರಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸಿ ಜೊತೆಗೆ ಅಂಗಡಿ ಮಾಲಿಕರು ಫುಟ್‌ಪಾತ್ ಮೇಲೆ ವಸ್ತುಗಳನ್ನು ಇಟ್ಟು ಜನರ ಓಡಾಟಕ್ಕೆ ತೊಂದರೆಯಾಗಿದ್ದು, ಈ ಕುರಿತು ಕ್ರಮ ಜರುಗಿಸಬೇಕೆಂದು ಅಧ್ಯಕ್ಷರಿಗೆ ಸೂಚಿಸಿದರು. ಸಂತೆ ಮಾರ್ಕೆಟ್‌ನಲ್ಲಿ ಜನರ ಓಡಾಟಕ್ಕೆ ತೊಂದರೆಯಾಗುವಂತೆ ಕಟ್ಟೆಯ ಮುಂಭಾಗದಲ್ಲಿ ತರಕಾರಿ ಇಡುತ್ತಿದ್ದಾರೆ. ಇದಕ್ಕೆ ನಗರಸಭೆ ಕಡಿವಾಣ ಹಾಕಬೇಕು, ಸ್ವಚ್ಚತೆಗೆ ಆದ್ಯತೆ ನೀಡಬೇಕು. ಈ ಎಲ್ಲಾ ಕಾರ್ಯಗಳು ಮುಂದಿನ ೯ ತಿಂಗಳ ಅಧಿಕಾರವಧಿಯಲ್ಲಿ ನಿರಂತರವಾಗಿ ಸಾಗಬೇಕು ಎಂದು ಎಚ್ಚರಿಸಿದರು.

ನಗರದ ಅಭಿವೃದ್ಧಿಗೆ ಪಕ್ಷಾತೀತವಾಗಿ ತಾವೂ ಸೇರಿದಂತೆ ಶಾಸಕ ಹೆಚ್.ಡಿ. ತಮ್ಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ನಗರಸಭೆ ಸಿಬ್ಬಂದಿಯೊಂದಿಗೆ ನಗರ ಪ್ರದಕ್ಷಣೆ ಕೈಗೊಳ್ಳುತ್ತೇವೆ. ಇದನ್ನು ಸಾರ್ವಜನಿಕವಾಗಿ ತೋರಿಸುವ ಮೂಲಕ ಲಂಚಮುಕ್ತ ನಗರಸಭೆಯನ್ನಾಗಿಸಲು ಸಂಕಲ್ಪ ಮಾಡಬೇಕೆಂದು ಹೇಳಿದರು. ಪೌರಕಾರ್ಮಿಕರ ಹಲವು ಬೇಡಿಕೆಗಳ ಬಗ್ಗೆ ಶಾಸಕರ ನೇತೃತ್ವದಲ್ಲಿ ನಿಯೋಗ ಹೋಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಬಗೆಹರಿಸುವ ಜೊತೆಗೆ ನಗರಸಭೆಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ನಗರಸಭೆ ನೂತನ ಅಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ತಮ್ಮ ಅಧಿಕಾರವಧಿಯಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದ ಅವರು, ಈ ನಮ್ಮ ಕಾರ್ಯಕ್ಕೆ ಪೌರಕಾರ್ಮಿಕರು ಸಾತ್ ನೀಡಿದ್ದು, ನಾಯಕರಾದ ಎಸ್.ಎಲ್ ಭೋಜೇಗೌಡರು ಚಾಲನೆ ನೀಡಿದ್ದಾರೆಂದರು. ಸದಸ್ಯ ಕುಮಾರ್ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಯೋಜನೆ ರೂಪಿಸಲಾಗಿದ್ದು ಜೊತೆಗೆ ಇಂದಿನಿಂದ ಕಸಮುಕ್ತ ನಗರ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.

ಕಸಮುಕ್ತ ನಗರ ಯೋಜನೆಗೆ ಎಲ್ಲಾ ಪೌರ ಕಾರ್ಮಿಕರು ಕೈಜೋಡಿಸಿದ್ದಾರೆ. ಶಾಸಕರು, ಎಂಎಲ್‌ಸಿ ನಮ್ಮೊಂದಿಗಿದ್ದಾರೆ. ಮುಂದಿನ ದಿನಗಳಲ್ಲಿ ಆರೋಗ್ಯಕರ ಪರಿಸರವನ್ನು ಕಾಪಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ಬಿ.ಸಿ. ಬಸವರಾಜ್, ಆರೋಗ್ಯ ನಿರೀಕ್ಷರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

The cleanliness program organized by the Municipal Council was launched.

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...