Home namma chikmagalur ಸರ್ಕಾರಿ ಸೌಲಭ್ಯ ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕು
namma chikmagalurchikamagalurHomeLatest News

ಸರ್ಕಾರಿ ಸೌಲಭ್ಯ ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕು

Share
Share

ಚಿಕ್ಕಮಗಳೂರು: ಸರ್ಕಾರಿ ಸೌಲಭ್ಯಗಳನ್ನು ಪರಿಶಿಷ್ಟ ಜಾತಿ ಸಮುದಾಯದವರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್‌.ಧರ್ಮಸೇನಾ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಚಿತ್ರದುರ್ಗ ದಲ್ಲಿ ನಡೆದ ಸಮಾವೇಶದಲ್ಲಿ ನೀಡಿದ ಭರವಸೆಗಳನ್ನು ಮುಖ್ಯಮಂತ್ರಿಗಳು ಈಡೇರಿಸಿದ್ದಾರೆ ಎಂದರು.

ಪರಿಶಿಷ್ಟ ಜಾತಿ ಅಭಿವೃದ್ಧಿ ಹಾಗೂ ಸರ್ಕಾರಿ ಯೋಜನೆಗಳು ತಲುಪುತ್ತಿವೆಯೆ, ಸ್ಥಳೀಯ ಶಾಸಕರು, ಸಂಸದರು ಸಮಸ್ಯೆಗಳಿಗೆ ಸ್ಪಂಧಿಸುತ್ತಿದ್ದಾರೆಯೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲು ಎಐಸಿಸಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವ ಕುಮಾರ್‌ ಅವರ ಸೂಚನೆಯಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು.

ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯನ್ನು ನಡೆಸಿದ್ದು, ನಿಗಮ ಮಂಡಳಿ ನೇಮಕ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನ ಸೇರಿದಂತೆ ಇತರೆ ಹುದ್ದೆಗಳನ್ನು ಪರಿಶಿಷ್ಟರಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಜತೆಗೆ ಕೆಲವೊಂದು ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದು, ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ಹಾಗೂ ಸರ್ಕಾರದ ಗಮನಕ್ಕೆ ತರಲಾಗುವುದು ಎಂದ ಅವರು, ಪದಾಧಿಕಾರಿಗಳು ಗೂಗಲ್‌ ಮೇಬರ್‌ಶೀಫ್‌ ಮಾಡಲು ಗಮನಹರಿಸಲಾಗುವುದು ಎಂದರು.

ಸುಪ್ರೀಂಕೋರ್ಟ್‌ ನ್ಯಾಯಾಧೀಶರ ಮೇಲೆ ವಕೀಲ ಶೂ ಎಸೆದಿರುವ ಪ್ರಕರಣವನ್ನು ಖಂಡಿಸಿದ ಅವರು, ನ್ಯಾಯಾಧೀಶರಿಗೆ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಆರೋಪಿಸಿ, ಶೂ ಎಸೆದ ವಕೀಲನ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.

ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್‌ ಗಾಂಧಿ ಅವರು ಮತಕಳ್ಳತನ ಆರೋಪ ಮಾಡಿದ್ದು, ಕೇಂದ್ರ ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಗ್ಯಾರೆಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದ ಸ್ವಾಮಿ, ಮಲ್ಲೇಶ ಸ್ವಾಮಿ, ಎಚ್‌.ಪಿ.ಮಂಜೇಗೌಡ, ಎಂ.ಎಸ್‌.ಅನಂತ್‌, ಶಾಂತಕುಮಾರ್‌, ನೇತ್ರಾವತಿ, ಹಿರೇಮಗಳೂರು ರಾಮಚಂದ್ರ ಇದ್ದರು.

The community should make good use of government facilities.

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...