Home namma chikmagalur chikamagalur ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ
chikamagalurHomeLatest Newsnamma chikmagalur

ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ

Share
Share
ಚಿಕ್ಕಮಗಳೂರು:  ಐ.ಡಿ. ಪೀಠ ಹಾಗೂ ಸುತ್ತಮುತ್ತಲಿನ ತಾಲ್ಲೂಕಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ ಹಾಗೂ ಗಾಳಿಕೆರೆಗೆ ಮಾರ್ಚ್ ೪ ರಿಂದ ೬ರವರೆಗೆ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವುದು ಸೂಕ್ತ ಎಂದು ಜಿಲ್ಲಾಡಳಿತ ತಿಳಿಸಿದೆ.
ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಮಾರ್ಚ್ ೪ ರಿಂದ ೬ರವರೆಗೆ ಉರುಸ್ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಭಕ್ತರು ವಾಹನಗಳಲ್ಲಿ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಸ್ಥೆಗೆ ಆಗಮಿಸಲಿದ್ದಾರೆ.
ಅಲ್ಲಿಗೆ ತೆರಳುವ ರಸ್ತೆ ತುಂಬಾ ಕಿರಿದಾಗಿದೆ ಹಾಗೂ ಉರುಸ್ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುವುದರಿಂದ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿಗಳು ಈ ಸಂಬಂಧದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉರುಸ್ ಸಂಬಂಧ ಆಗಮಿಸುವ ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಉರುಸ್ ಕಾರ್ಯಕ್ರಮದ ಭಕ್ತಾದಿಗಳನ್ನು ಹೊರತುಪಡಿಸಿ ಉಳಿದಂತೆ ಇತರೆ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡಿ ಸಹಕರಿಸುವಂತೆ ಜಿಲ್ಲಾಧಿಕಾರಿಗಳು ಕೋರಿದ್ದಾರೆ.

ಪ್ಲಾಸ್ಟಿಕ್ ನಿರ್ಬಂಧ ಮತ್ತೆ ವಿಸ್ತರಣೆ: ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ ಪ್ರದೇಶದ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವ, ಒಯ್ಯುವ ಮತ್ತು ಮಾರಾಟ ಮಾಡುವ ಕ್ರಮಕ್ಕೆ ನಿರ್ಬಂಧ ವಿಧಿಸಿ ಹೊರಡಿಸಿದ್ದ ಕ್ರಮವನ್ನು ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಆದ ಎನ್.ಎಂ.ನಾಗರಾಜ್, ೨೦೨೬ರ ಏಪ್ರಿಲ್ ೧೮ರವರೆಗೆ ಅಥವಾ ಮುಂದಿನ ಆದೇಶದವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ನಿರ್ಬಂಧಿಸಿ ೨೦೨೪ರ ಏಪ್ರಿಲ್ ೧೬ ರಂದು ಮೊದಲ್ಗೊಂಡು ಆದೇಶ ಹೊರಡಿಸಿದ್ದು, ಅನಂತರದಲ್ಲಿ ಈ ಆದೇಶವನ್ನು ಫೆಬ್ರವರಿ ೧೮ರವರೆಗೆ ವಿಸ್ತರಿಸುತ್ತಾ ಬರಲಾಗಿತ್ತು.
ಈ ಆದೇಶದ ಪ್ರಕಾರ ಉಪಯೋಗಿಸಿ ಎಸೆಯುವ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚಿಪ್ಸ್ ಪ್ಯಾಕೇಟ್‌ಗಳು, ಗುಟ್ಕಾ ಪ್ಯಾಕೇಟ್‌ಗಳು ಹಾಗೂ ಇದೇ ರೀತಿಯ ತಿನ್ನಲು ಯೋಗ್ಯವೆಂದು ಪ್ಯಾಕ್ ಮಾಡಿರುವ ಇತರೆ ಪ್ಲಾಸ್ಟಿಕ್ ಪ್ಯಾಕೇಟ್‌ಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ.
ಈ ಅದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ವಿರುದ್ಧ ಬಿಎನ್‌ಎಸ್ ೨೨೧ ಮತ್ತು ಅನ್ವಯಿಸಬಹುದಾದ ಇತರೆ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
The district administration requested to postpone the tour
Share

Leave a comment

Leave a Reply

Your email address will not be published. Required fields are marked *

Don't Miss

ನೈತಿಕ ಪೊಲೀಸ್ ಗಿರಿ ಪ್ರಕರಣ – ಗಂಭೀರವಾಗಿ ಪರಿಗಣನೆ

ಚಿಕ್ಕಮಗಳೂರು: ಕಾಫಿನಾಡಿನ ಸಂತೇ ಮೈದಾನದ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್...

ಕಲ್ಲು ಎಸೆತ ಪ್ರಕರಣ: ಇಬ್ಬರು ಹಿಂದೂ ಯುವಕರ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ವಿಜಯಪುರ ಬಡಾವಣೆಯಲ್ಲಿ ನಡೆದಿದ್ದ ಹಿಂದೂ ಮನೆಯೊಂದರ ಮೇಲೆ ನಡೆದಿದ್ದ ಕಲ್ಲು ಎಸೆತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪೊಲೀಸರು ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ...

Related Articles

ಫೆ.೨೮-ಮಾ.೧೭ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ ೨೮ ರಿಂದ ಮಾರ್ಚ್ ೧೭ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು...

ಕಾಡುಕೋಣ ದಾಳಿಗೆ ಕೃಷಿಕನಿಗೆ ಗಾಯ

ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಜನತೆಗೆ ಈಗ ಕಾಡುಕೋಣಗಳ ಉಪಟಳ ಹೊಸ ಆತಂಕ ತಂದೊಡ್ಡಿದೆ. ಕೊಪ್ಪ ತಾಲೂಕಿನ...

ಕಾಫಿನಾಡಿನ ಹಲವೆಡೆ ಕಾಡಾನೆಗಳ ಸಂಚಾರ – ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ

ಚಿಕ್ಕಮಗಳೂರು: ಕಾಫಿನಾಡಿನ ಹಲವೆಡೆ ಕಾಡಾನೆಗಳ ಸಂಚಾರ ತೀವ್ರಗೊಂಡಿದ್ದು, ಅರಣ್ಯ ಇಲಾಖೆ ಹಾಗೂ ಆನೆ ಕಾರ್ಯಪಡೆ (ETF)...

ಇನ್ವೆಸ್ಟ್ಮೆಂಟ್ ನಲ್ಲಿ ಅಧಿಕ ಲಾಭ ವೈದ್ಯರೊಬ್ಬರಿಗೆ 21.85 ಲಕ್ಷ ರೂ. ವಂಚನೆ

ಚಿಕ್ಕಮಗಳೂರು: ಆನ್ಲೈನ್ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ನಲ್ಲಿ ಅಧಿಕ ಲಾಭವಿದೆ ಎಂದು ನಂಬಿಸಿ ವೈದ್ಯರೊಬ್ಬರಿಗೆ 21.85 ಲಕ್ಷರು...