Home namma chikmagalur chikamagalur ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ
chikamagalurHomeLatest Newsnamma chikmagalur

ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

Share
Share

ಚಿಕ್ಕಮಗಳೂರು, ಫೆ.೧೬: ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳ ಜೊತೆ ಮಾತನಾಡಿದ ಅವರು, ಜಿಲ್ಲೆಯ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಯಾವುದೇ ಸಮಸ್ಯೆಯಾಗದಂತೆ ಹಾಗೂ ಅಗತ್ಯ ಔಷಧಿಗಳ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.

ಸೋಮವಾರ ಜಿಲ್ಲಾ ಆಸ್ಪತ್ರೆಯ ಹೊರ ರೋಗಿಗಳ ವಿಭಾಗ, ತುರ್ತು ಚಿಕಿತ್ಸಾ ವಿಭಾಗ, ಔಷಧಿ ಉಗ್ರಾಣ ಮತ್ತು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಹೆರಿಗೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಸಮಸ್ಯೆಗಳು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದೇ ವೇಳೆ ಜಿಲ್ಲಾ ಸರ್ಜನ್ ಡಾ.ಚಂದ್ರಶೇಖರ್ ಹೆಚ್.ಬಿ. ಮಾತನಾಡಿ, ಆಸ್ಪತೆಯಲ್ಲಿ ರೋಗಿಗಳಿಗೆ ದೈನಂದಿನ ತುರ್ತು ಚಿಕಿತ್ಸೆಗೆ ಬೇಕಿರುವ ಅಗತ್ಯ ಔಷಧಿಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿದ್ದು, ಯಾವುದೇ ಕೊರತೆ ಕಾಡಿಲ್ಲ ಎಂದು ತಿಳಿಸಿದರು.

ನಾಯಿ ಕಡಿತ, ಹಾವು ಕಡಿತ, ವಿಷ ಸೇವನೆಯಂತಹ ಪ್ರಕರಣಗಳು ಬಂದಾಗ ಬೇಕಾಗಿರುವ ಎಲ್ಲಾ ಔಷಧಿಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನಿರುವ ಬಗ್ಗೆ ಕೂಡ ಜಿಲ್ಲಾಧಿಕಾರಿಗಳಿಗೆ ಅವರು ಮಾಹಿತಿ ನೀಡಿದರು. ಆಸ್ಪತ್ರೆಯ ಡಯಾಲಿಸಿಸ್ ವಿಭಾಗವು ಎಂದಿನಂತೆ ಕಾರ್ಯ ಪ್ರವೃತ್ತವಾಗಿದ್ದು, ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ ಎಂಬ ಅಂಶವನ್ನು ಕೂಡ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ ಬಾಬು ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅವಶ್ಯವಿರುವ ಔಷಧಿಗಳು ಲಭ್ಯವಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸರ್ಜನ್ ಡಾ.ಚಂದ್ರಶೇಖರ್ ಸಾಲಿಮಠ್ ಎಸ್. ಮತ್ತು ಆರ್‌ಸಿಹೆಚ್ ಅಧಿಕಾರಿಗಳಾದ ಡಾ.ಮಂಜುನಾಥ ಹೆಚ್.ಕೆ. ಹಾಜರಿದ್ದರು. ಉಳಿದಂತೆ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರು ಕರ್ತವ್ಯದಲ್ಲಿದ್ದರು.

The District Collector made a surprise visit to the District Hospital

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...