Home namma chikmagalur ಜಿಲ್ಲೆಯನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಣೆ ಮಾಡಬೇಕು
namma chikmagalurchikamagalurLatest News

ಜಿಲ್ಲೆಯನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಣೆ ಮಾಡಬೇಕು

Share
Share
ಮೂಡಿಗೆರೆ: ಅತಿಯಾದ ಮಳೆಯಿಂದ ಮಲೆನಾಡು ಭಾಗದಲ್ಲಿ ಕಾಫಿ, ಕಾಳುಮೆಣಸು, ಅಡಕೆ ಸೇರಿದಂತೆ ಅನೇಕ ಬೆಳೆ ನಾಶವಾಗಿದೆ. ಇದರಿಂದ ರಾಜ್ಯ ಹಾಗೂ ಕೇಂದ್ರ ಸರಕಾರ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಫ್ ಪರಿಹಾರ ನಿಧಿಯಿಂದ ಕಾಫಿ ಬೆಳೆಗಾರರಿಗೆ ಪರಿಹಾರ ಒದಗಿಸಬೇಕೆಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಒತ್ತಾಯಿಸಿದರು.
ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಕಾಫಿಗೆ ಉತ್ತಮ ಬೆಲೆ ಇತ್ತು. ಇದರಿಂದ ಕಾಫಿ ಬೆಳೆಗಾರರಿಗೆ ಅನುಕೂಲವಾಗಿತ್ತು. ಆದರೆ ಈ ಬಾರಿ ಕಳೆದ ೫ ತಿಂಗಳಿಂದ ಬಿಡದೇ ಮಳೆ ಸುರಿಯುತ್ತಿದೆ. ಬೆಳೆ ಉಳಿಸಿಕೊಳ್ಳಲು ರಾಸಾಯನಿಕ ಗೊಬ್ಬರ ಹಾಕಲು ಕೂಡ ಅವಕಾಶ ಸಿಗುತ್ತಿಲ್ಲ. ಕಾಫಿ, ಕಾಳು ಮೆಣಸು, ಅಡಕೆ ಬೆಳೆ ಶಿಲೀಂದ್ರ ರೋಗಕ್ಕೆ ತುತ್ತಾಗಿ ಫಸಲಿಗೆ ಬಂದ ಬೆಳೆ ಕೈಗೆಟುಕದಂತಾಗಿದೆ. ಇದರಿಂದ ಕಾಫಿ ಬೆಳೆಗಾರರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಈಗಾಗಲೇ ಕಾಫಿ ಮಂಡಳಿ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ನಡೆಸಿದ್ದು, ವರದಿಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ತರಿಸಿಕೊಂಡು ಕೂಡಲೇ ಪರಿಹಾರ ನೀಡಲು ಮುಂದಾಗಬೇಕೆಂದು ಆಗ್ರಹಿಸಿದರು.
ಕಾಂಗ್ರೆಸ್ ಹಿರಿಯ ಮುಖಂಡ ಬಿ.ಎಸ್.ಜಯರಾಂಗೌಡ ಮಾತನಾಡಿ, ಸರ್ಫೇಸಿ ಕಾಯಿದೆಯಡಿ ದೇಶದಲ್ಲಿ ೨೮೦೦ ರೈತರು ಸಿಲುಕಿದ್ದಾರೆ. ಅದರಲ್ಲಿ ಹೆಚ್ಚಾಗಿ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಡದೇ ಸುರಿಯುತ್ತಿರುವ ಮಳೆಯಿಂದ ಸರ್ಪೇಸಿ ಕಾಯಿದೆಯೊಳಪಟ್ಟ ರೈತರು ಸಾಲ ತೀರಿಸಲು ತೊಂದರೆ ಎದುರಾಗಿದೆ. ಈ ಬಗ್ಗೆ ಹಾಸನ, ಮೈಸೂರು, ಚಿಕ್ಕಮಗಳೂರು ವ್ಯಾಪ್ತಿಯ ಎಲ್ಲಾ ಶಾಸಕರು ಹಾಗೂ ಸಂಸದರೊಂದಗೆ ಚರ್ಚಿಸಿದ್ದು, ಅವರು ರೈತರ ನೆರವಿಗೆ ಮುಂದಾಗಿದ್ದಾರೆ.  ಮುಖ್ಯವಾಗಿ ಈಗ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಪರಿಹಾರದ ಹಣ ಸಿಗುವಂತೆ ಹಾಗೂ ಜಿಲ್ಲೆಯನ್ನು ಅತಿವೃಷ್ಟಿ ಪ್ರದೇಶವೆಂದು ಘೋಷಿಸಲು ಎಲ್ಲಾ ಶಾಸಕರು ಹಾಗೂ ಸಂಸದರು ಸರಕಾರದ ಗಮನ ಸೆಳೆಯಬೇಕೆಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಜಿ.ಸುರೇಂದ್ರ, ಜಿಲ್ಲಾ ವಕ್ತಾರ ಎಂ.ಎಸ್.ಅನಂತ್, ಮುಖಂಡರಾದ ಶಿವಣ್ಣ, ಪ್ರಸನ್ನ ಉಪಸ್ಥಿತರಿದ್ದರು.
The district should be declared a heavy rainfall area.
Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...