Home Latest News ಮೈದುಂಬಿ ಹರಿಯುತ್ತಿರುವ ಕಲ್ಲತ್ತಿಗರಿ ಜಲಪಾತ
Latest NewsHomenamma chikmagalurTarikere

ಮೈದುಂಬಿ ಹರಿಯುತ್ತಿರುವ ಕಲ್ಲತ್ತಿಗರಿ ಜಲಪಾತ

Share
Share

ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದ ಪರಿಣಾಮ, ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪದ ಕಲ್ಲತ್ತಿಗರಿ ಜಲಪಾತವು ಮೈದುಂಬಿ ಹರಿಯುತ್ತಿದ್ದು, ರಾಕ್ಷಸ ಸ್ವರೂಪ ತಳೆದಂತೆ ಕಾಣುತ್ತಿದೆ.

ಕೆಮ್ಮಣ್ಣುಗುಂಡಿ ತಪ್ಪಲಿನಲ್ಲಿರುವ ಈ ಸುಂದರ ಜಲಪಾತ, ಕಳೆದ ವಾರವರೆಗೆ ಸಾಧಾರಣವಾಗಿ ಹರಿಯುತ್ತಿತ್ತು, ಆದರೆ ಕಳೆದ ನಾಲೈದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಲಪಾತದ ನೀರಿನ ಪ್ರಮಾಣ ಬಹಳಷ್ಟು ಹೆಚ್ಚಾಗಿದೆ.

ಧುಮ್ಮಿಕ್ಕುತ್ತಾ ಹರಿಯುತ್ತಿರುವ ಜಲಪಾತ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಮಲೆನಾಡು ಈ ಪ್ರಕೃತಿ ವೈಭವಕ್ಕೆ ಸಾಕ್ಷಿಯಾದರೂ, ಇಲ್ಲಿಗೆ ತೆರಳುವ ಪ್ರವಾಸಿಗರು ನಿರಂತರ ಮಳೆಯಿಂದಾಗಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಅಗತ್ಯತೆಯಿದೆ.

ನಿನ್ನೆ ಈ ಜಲಪಾತ ವೀಕ್ಷಣೆಗೆ ಬಂದಿದ್ದ ಪ್ರವಾಸಿ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರ್ ಸಂಪೂರ್ಣ ಹಾನಿಗೊಳಗಾಗಿತ್ತು. ಕಾರಿನಲ್ಲಿ ಯಾರು ಇಲ್ಲದ ಪರಿಣಾಮ ದೊಡ್ಡ ಅನಾಹುತ ಒಂದು ತಪ್ಪಿದಂತಾಗಿದೆ. ಹೀಗಾಗಿ ಮಳೆಗಾಲದಲ್ಲಿ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮುನ್ನ ಗಾಳಿ ಮಳೆಯ ಸ್ಥಿತಿಯನ್ನು ಅವಲೋಕಿಸಬೇಕಿದೆ.

ಇದರ ನಡುವೆಯೂ ನೂರಾರು ಪ್ರವಾಸಿಗರು ಪ್ರತಿನಿತ್ಯ ಕಲ್ಲತ್ತಿಗಿರಿ ಜಲಪಾತದ ಸೌಂದರ್ಯವನ್ನು ಕಣ್ಣುಂಬಿ ಕೊಳ್ಳುತ್ತಿದ್ದಾರೆ.

The flowing Kallatthigiri waterfall

Share

Leave a comment

Leave a Reply

Your email address will not be published. Required fields are marked *

Don't Miss

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ ೫ರಂದು ಆಯೋಜಿಸಲಾಗಿದೆ. ಶಿಬಿರವು ಬೆಳಿಗ್ಗೆ ೯ ಗಂಟೆಯಿಂದ ನಗರದ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ಸಂಸ್ಥೆ ಸೇವಾ ನ್ಯೂನತೆ ಎಸಗಿತೆಂಬ ಹಿನ್ನೆಲೆಯಲ್ಲಿ ಸಂಸ್ಥೆಯ ವಿರುದ್ಧ ತೀರ್ಪು ನೀಡಿರುವ ಜಿಲ್ಲಾ ಗ್ರಾಹಕರ...

Related Articles

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...

ತನಿಕೋಡ್‌ನಿಂದ ಎಸ್.ಕೆ. ಬಾರ್ಡರ್‌ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 169ರ ತನಿಕೋಡ್‌ನಿಂದ ಎಸ್.ಕೆ. ಬಾರ್ಡ‌್ರವರೆಗಿನ ರಸ್ತೆ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು...

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...