Home namma chikmagalur ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ
namma chikmagalurchikamagalurHomeLatest News

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

Share
Share

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ ಈ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಇದಕ್ಕೆ ಶಾಶ್ವತವಾಗಿ ಪರಿಹಾರ ಒದಗಿಸಬೇಕೆಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯಿಸಿದರು.

ಇನ್ನು ಪ್ರತಿಭಟನೆಯಲ್ಲಿ ಪಾಲ್ಗೊಂಡು ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು.

ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವು ಖಂಡಿಸಿ ಬಾಳೆಹೊನ್ನೂರು ಉಪ ವಿಭಾಗ ವಲಯ ಅರಣ್ಯಾಧಿಕಾರಿಗಳ ಕಚೇರಿ ಬಳಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಪಾಲ್ಗೊಂಡರು

ಕೂಡಲೇ ಅರಣ್ಯ ಸಚಿವರು ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಬೇಕು ಬೇಕೆಂದು ಒತ್ತಾಯಿಸಿದರು.ನಿರಂತರವಾಗಿ ಈ ಭಾಗದ ರೈತರು ಆನೆದಾಳಿಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕೂಡಲೇ ಕಾಡನೆಯನ್ನ ಹಿಡಿದು ಆನೆ ಶಿಬಿರಕ್ಕೆ ಬಿಡಬೇಕು ಎಂದು ಆಗ್ರಹಿಸಿದರು.
ಒಂದು ಕಡೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಿಸಲು ಒಂದು ಭಾಗ

ಮೃತಪಟ್ಟ ಕುಟುಂಬ ಯಾರು ಕೂಡ ನೀವು ಕೊಡುವಂತ ಪರಿಹಾರವನ್ನು ನಂಬಿಕೊಂಡು ಜೀವನ ನಡೆಸುತ್ತಿಲ್ಲ. ಈ ಕೂಡಲೇ ಅರಣ್ಯ ಸಚಿವರು ಸ್ಥಳಕ್ಕೆ ಆಗಮಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಇಲ್ಲಿನ ಅರಣ್ಯ ಅಧಿಕಾರಿಗಳು ಹಾಗೂ ಸರ್ವ ಪಕ್ಷದ ಮುಖಂಡರ ಜೊತೆ ಸಭೆ ನಡೆಸಬೇಕು ಎಂದು ಹೇಳಿದರು.

ಈ ಭಾಗದಲ್ಲಿ ಕಾಡನೆ ಸಮಸ್ಯೆಗಗಳಿಂದ ಶಾಶ್ವತವಾಗಿ ಪರಿಹಾರ ಘೋಷಿಸಬೇಕೆಂದು. ಈ ಹೋರಾಟವನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತವೆ. ಇದನ್ನ ವಿಧಾನಮಂಡಲದಲ್ಲೂ ಸರ್ಕಾರದ ಗಮನ ಸೆಳೆಯುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಏಳುವರೆ ಕೋಟಿ ಕನ್ನಡಿಗರನ್ನ
ಕೈ ಬಿಟ್ಟಿದೆ. ಇವತ್ತು ಒಬ್ಬರು ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನೊಬ್ಬರು ಡಿಸಿಎಂ, ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಮತ್ತೆ ಡಿಸಿಎಂ ಕುರ್ಚಿ ಖಾಲಿ ಅದ್ರೆ ಅಧ್ಯಕ್ಷರು ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು. ಕುರ್ಚಿ ಉಳಿಸಿಕೊಳ್ಳುವ ಜಂಜಾಟದಲ್ಲಿ ರಾಜ್ಯದ ಜನ ದೇಶಕ್ಕೆ ಹೋಗಿದ್ದಾರೆ ಎಂದು ಕಿಡಿಕಾರಿದರು.

ಇದಕ್ಕೂ ಮುನ್ನ ಇತ್ತೀಚೆಗೆ ನಿಧನರಾಗಿದ್ದ ಪಕ್ಷದ ಹಿರಿಯ ಮುಖಂಡರಾದ ಹೆಚ್‌.ಟಿ. ರಾಜೇಂದ್ರ ಅವರ ನಿವಾಸಕ್ಕೆ ತೆರಳಿ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ರಂಜನ್‌ ಅಜಿತ್‌ ಕುಮಾರ್‌, ರಾಜ್ಯ ಉಪಾಧ್ಯಕ್ಷರಾದ ಸುಧಾಕರ್‌ ಶೆಟ್ಟಿ , ಮುಖಂಡರಾದ ವಿನಯ್‌ ಕಣಿವೆ, ಕೊಪ್ಪ, ಎನ್‌.ಆರ್.‌ ಪುರ ಕ್ಷೇತ್ರದ ಮುಖಂಡರುಗಳು ಜೊತೆಯಲ್ಲಿದ್ದರು.

The Forest Minister does not know the difference between the mountains and the plains.

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...