Home namma chikmagalur chikamagalur ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು
chikamagalurHomeLatest Newsnamma chikmagalur

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

Share
Share

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು.

ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್ ಬಳಗ ನಗರದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿರುವ ಎ.ಐ. ಕೃತಕ ಬುದ್ಧಿಮತ್ತೆ ಹಾಗೂ ನೂತನ ತಂತ್ರಜ್ಞಾನಗಳ ಬಳಕೆ ಕುರಿತ ಎರಡು ದಿನಗಳ ತರಬೇತಿ ಶಿಬಿರಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಹೊಸ ಹೊಸ ಆವಿಷ್ಕಾರಗಳು, ತಂತ್ರಜ್ಞಾನಗಳಿಂದಾಗಿ ಮಾಧ್ಯಮ ಕ್ಷೇತ್ರ ಅತಿ ಕಡಿಮೆ ಸಮಯ ದಲ್ಲಿ ಬಹಳಷ್ಟು ವೇಗವಾಗಿ ಬೆಳೆದಿದೆ ಎಂದರು.  ಸುದ್ದಿಗಳನ್ನು ಜನರಿಗೆ ಶೀಘ್ರವಾಗಿ ತಲುಪಿಸುವ ಉದ್ದೇಶದಿಂದ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿವೆಯಾದರೂ ದೃಶ್ಯ ಮಾಧ್ಯಮಗಳಲ್ಲಿ ಕೆಲವೊಮ್ಮೆ ಸುಳ್ಳು ಸುದ್ದಿಗಳು ಬಿತ್ತ ರವಾಗುತ್ತಿರುವುದರ ಬಗ್ಗೆ ಕೆಲವರಲ್ಲಿ ಅಸಮಾಧಾನಗವಿದೆ ಎಂದು ಹೇಳಿದರು.

ಸುದ್ದಿಗಳನ್ನು ಜನರಿಗೆ ಶೀಘ್ರವಾಗಿ ತಲುಪಿಸುವ ಭರದಲ್ಲಿ ದೃಶ್ಯ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಬಿತ್ತರಿಸುವ ಕೆಲಸವನ್ನು ಮಾಡಬಾರದು, ಅಪಘಾತಗಳು, ಅವಘಡಗಳು ನಡೆದ ಸಂದರ್ಭದಲ್ಲಿ ದೃಶ್ಯ ಮಾಧ್ಯಮಗಳ ವರದಿಗಾರರು ವಿಡಿಯೋ ಚಿತ್ರೀಕರಿಸುವುದನ್ನು ಬಿಟ್ಟು ಜೀವ ಉಳಿಸಲು ಮುಂದಾಗಬೇಕು ಎಂದು ತಿಳಿಸಿದರು.

ಸರ್ಕಾರಗಳ, ಜನಪ್ರತಿನಿಧಿಗಳ, ಅಧಿಕಾರಿಗಳ ತಪ್ಪನ್ನು ಎತ್ತಿ ತೋರಿಸಿ ಎಚ್ಚರಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಹೇಳಿದರು. ಕೆಪಿಸಿಸಿ ವಕ್ತಾರ ಹೆಚ್.ಹೆಚ್. ದೇವರಾಜ್ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಯುವಜನತೆ ಮೊಬೈಲ್‌ನಿಂದ ಸಾಧ್ಯವಾದಷ್ಟು ದೂರವಿರಬೇಕು ಎಂದು ಕಿವಿಮಾತು ಹೇಳಿದರು.

ಮೊಬೈಲೇ ಜೀವನವಲ್ಲ, ಅದಿಲ್ಲದಿದ್ದರೂ ನಮ್ಮ ಬದುಕು ನಡೆಯುತ್ತದೆ ಎಂಬುದನ್ನು ಯುವ ಜನತೆ ಅರ್ಥಮಾಡಿಕೊಂಡು ಮೊಬೈಲನ್ನು ಮಿತವಾಗಿ ಬಳಸಬೇಕು ಎಂದು ಸಲಹೆ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ಮಾತನಾಡಿ, ನೂತನ ತಂತ್ರಜ್ಞಾನವನ್ನು ಯುವಜನತೆ ಸದುಪಯೋಗಪಡಿಸಿಕೊಳ್ಳಬೇಕು, ಸಮಾಜಕ್ಕೆ, ದೇಶಕ್ಕೆ ಒಳಿತಾಗುವ ರೀತಿ ತಂತ್ರಜ್ಞಾನವನ್ನು ಬಳಕೆ ಮಾಡಬೇಕು ಎಂದು ಮನವಿ ಮಾಡಿದರು.

ಸಿಪಿಐ ಕಾರ್ಯದರ್ಶಿ ಜಿ.ರಘು ಮಾತನಾಡಿ, ಮೊಬೈಲ್ ಸೇರಿದಂತೆ ಎಲ್ಲಾ ತಂತ್ರಜ್ಞಾನಗಳು ಒಳ್ಳೆಯದಕ್ಕೆ ಮಾತ್ರ ಬಳಕೆಯಾಗಬೇಕು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ರಾಜ್ಯಾಧ್ಯಕ್ಷ ಎನ್.ರಾಜು, ತಂತ್ರಜ್ಞಾನವನ್ನು ಸಮಾಜದ, ದೇಶದ ಒಳಿತಿಗೆ ಬಳಸಬೇಕು, ವಿದ್ಯಾರ್ಥಿಗಳು ಮತ್ತು ಯುವಜನತೆ ಈ ಶಿಬಿರದಲ್ಲಿ ಪಾಲ್ಗೊಂಡು ನೂತನ ತಂತ್ರಜ್ಞಾನಗಳ ಕುರಿತು ತಮ್ಮ ಅರಿವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರೈತ ಸಂಘದ ಮುಖಂಡ ಗುರುಶಾಂತಪ್ಪ, ಎ.ಐ. ತಂತ್ರಜ್ಞಾನ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಬಳಸಿಕೊಳ್ಳುವ ಬಗೆಯನ್ನು ತಿಳಿಸುವ ನಿಟ್ಟಿನಲ್ಲಿ ಈ ತರಬೇತಿ ಶಿಬಿರವನ್ನು ಸಂಪೂರ್ಣ ಉಚಿತವಾಗಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ನಂತರ ನಡೆದ ತರಬೇತಿ ಶಿಬಿರದಲ್ಲಿ ಎ.ಐ. ಕೃತಕ ಬುದ್ಧಿಮತ್ತೆಯಿಂದ ಉದ್ಯೋಗ ಕಡಿತದ ಸಾಧಕ ಬಾದಕ ಮತ್ತು ಪರಿಹಾರೋಪಾಯಗಳ ಕುರಿತು ಐಐಪಿ ಸಂಸ್ಥಾಪಕ ನಂಜೇಶ್ ಬೆಣ್ಣೂರು, ಜೆನ್.ಜಿ ಹೊಸ ತಲೆಮಾರಿನ ಪಲ್ಲಟಗಳು, ಅಂತರ್ಜಾಲದ ದುರುಪಯೋಗ ಹಾಗೂ ಪರಿಹಾರ ಕುರಿತು ಹಾಸನ ನವ್ಕಿನ್ ಇಂಜಿನಿಯರಿಂಗ್ ಕಾಲೇಜಿನ ಎ.ಐ. ವಿಭಾಗದ ಮುಖ್ಯಸ್ಥ ಪ್ರೊ ವಿವೇಕಾನಂದ ಹಾಗೂ ದೈನಂದಿನ ಬದುಕಿನಲ್ಲಿ ಎ.ಐ. ತಂತ್ರಜ್ಞಾನ ಬಳಕೆ ಕುರಿತು ನಂಜೇಶ್ ಬೆಣ್ಣೂರು ತರಬೇತಿ ನೀಡಿದರು.

ಸಾಹಿತಿ ಡಿ.ಎಂ.ಮಂಜುನಾಥ ಸ್ವಾಮಿ, ಪಿಳ್ಳೆನಹಳ್ಳಿ ವಿಜಯಕುಮಾರ್. ಜೆಡಿಎಸ್ ಮುಖಂಡ ಹೆಚ್.ಎಸ್.ಮಂಜಪ್ಪ, ನಟರಾಜ್ ಎಸ್. ಕೊಪ್ಪಲು ಉಪಸ್ಥಿತರಿದ್ದರು.

The media should work to bring issues to the attention of the government.

 

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...