Home namma chikmagalur chikamagalur ಸ್ವಾವಲಂಬನೆ-ಸಮಾಜ ಅವಕಾಶವೇ ಸಹಕಾರಿ ಚಳುವಳಿ ಉದ್ದೇಶ
chikamagalurHomeLatest Newsnamma chikmagalur

ಸ್ವಾವಲಂಬನೆ-ಸಮಾಜ ಅವಕಾಶವೇ ಸಹಕಾರಿ ಚಳುವಳಿ ಉದ್ದೇಶ

Share
Share

ಚಿಕ್ಕಮಗಳೂರು: ಸಹಕಾರಿ ಚಳುವಳಿಯ ಮೂಲತತ್ವವೇ ಸ್ವಾವಲಂಬನೆ, ಪರಸ್ಪರ ಸಹ ಕಾರ, ಸಮಾನ ಅವಕಾಶ ಹಾಗೂ ಸಾಮಾಜಿಕ ಜವಾಬ್ದಾರಿಯಡಿ ರೂಪುಗೊಂಡಿದೆ. ಈ ತತ್ವದಡಿ ಸಂಘವು ದುಡಿದಿರುವ ಪರಿಣಾಮ ಮುಂಚೂಣಿ ಸ್ಥಾನದಲ್ಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಸಿ.ಟಿ.ರವಿ ಹೇ ಳಿದರು.

ನಗರದ ರಂಗಣ್ಣ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾ ಪದವೀಧರರ ಪತ್ತಿನ ಸಹಕಾರ ಸಂಘ ದ ೨೫ನೇ ವರ್ಷದ ಸಾರ್ಥಕ ಸೇವೆಯನ್ನು ಪೂರೈಸಿದ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರಿ ಕ್ಷೇತ್ರದಲ್ಲಿ ನಾನು ಎನ್ನುವುದರಿಂದ ಏನನ್ನು ಸಾಧನೆ ಮಾಡಲಾಗದು. ನಾವುಗಳು ಅನ್ನುವ ಭಾವನೆ ಜೊತೆಗೆ ಎಲ್ಲರ ಶಕ್ತಿ ಒಗ್ಗೂಡಿದರೆ ಆ ಮೂಲಕ ಹೆಚ್ಚು ಸಾಧನೆ ಮಾಡಿ ಸಮಾಜವನ್ನು ಮುನ್ನೆಡೆ ಸಲು ಸಾಧ್ಯ. ಈ ಹಿನ್ನೆಲೆ ಸಹಕಾರಿ ಚಳುವಳಿ ಪರಸ್ಪರ ಅವಲಂಬಿತರಾಗಿ ಸ್ವಾವಲಂಬಿ ಸಮಾಜ ನಿರ್ಮಿಸಲು ಪ್ರಾರಂಭಗೊಂಡಿದೆ ಎಂದರು.

ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ ಸಹಕಾರಿ ಸಂಸ್ಥೆ ನಿರ್ಮಿಸುವುದು ಸುಲಭವಲ್ಲ. ಸುದೀಘ ವಾ ಗಿ ೨೫ ವರ್ಷ ಪೂರೈಸುವುದು ಶ್ರಮದ ಕೆಲಸವಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೆಲವೇ ಸಂಸ್ಥೇಗಳು ಲಾಭ ದಾಯಕವಾಗಿದ್ದು ಸದಸ್ಯರಿಗೆ ಶೇ.೧೦ ರಷ್ಟು ಡಿವಿಡೆಂಟ್ ನೀಡುತ್ತಿವೆ. ಆ ಸಾಲಿನಲ್ಲಿ ಪದವಿಧರರ ಸಹಕಾರ ಸಂಘವು ಒಂದು ಎಂದು ಹೇಳಿದರು.

ಪದವೀಧರರು ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿರುವುದನ್ನು ಮನಗಂಡ ಲೋಕಪ್ಪಗೌಡರು ಸಹಕಾರಿ ಬ್ಯಾಂಕ್ ತೆರೆದು ಜೀವನ ಹಾಗೂ ಉದ್ಯೋಗಕ್ಕೆ ನೆರವಾದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ, ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಹೇಶ್, ಜಿಲ್ಲಾ ಪದವೀಧರರ ಪತ್ತಿನ ಸಹಕಾರ ಸಂಘದ ಅಧ್ಯ ಕ್ಷ ಬಿ.ಸಿ.ಲೋಕಪ್ಪಗೌಡ ಮಾತನಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ವರಸಿದ್ದಿ ವೇಣುಗೋಪಾಲ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ದಿವಾಕರ್, ಜಿಲ್ಲಾ ಪದವಿಧರರ ಸಂಘದ ಉಪಾಧ್ಯಕ್ಷ ಹೆಚ್.ಆರ್.ಮರುಳಪ್ಪ, ನಿರ್ದೇಶಕರಾದ ಡಾ|| ಡಿ.ಎಲ್.ವಿಜಯ್‌ಕುಮಾರ್, ಸಿ.ಆರ್.ಪ್ರೇಮ್‌ಕುಮಾರ್, ಯು.ಟಿ.ನಾಗರಾಜು, ವೆಂಕಟೇಶ್ ಪೈ, ಬಿ.ಹೆಚ್. ಶಂಕರ್, ಎಂ.ಸಿ.ಶಿವಾನಂದಸ್ವಾಮಿ, ಎಂ.ಪಿ.ಗಂಗೇಗೌಡ ಮುಂತಾದವರಿದ್ದರು.

The purpose of the cooperative movement is self-reliance and social opportunity.

Share

Leave a comment

Leave a Reply

Your email address will not be published. Required fields are marked *

Don't Miss

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ, ದೇಶದ ಸಾಧನೆಗಳನ್ನು ಸ್ಮರಿಸುವ, ಸ್ವಾತಂತ್ರ್ಯದ ಮೌಲ್ಯಗಳನ್ನು ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಸಂಕಲ್ಪದ ದಿನವಾಗಬೇಕು...

ಕಸ್ತೂರಿ ರಂಗನ್ ವರದಿ ಮರುಪರಿಶೀಲಿಸಲು ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ವೈಫಲ್ಯದಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ತಕ್ಷಣವೇ ಬರಗಾಲವೆಂದು ಘೋಷಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಮಲೆನಾಡಿನ 137 ಗ್ರಾಮಗಳಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಪುನಃ ಪರಿಶೀಲಿಸಿ ಜನವಸತಿ...

Related Articles

ಅಧಿಕಾರ ಎಂಬ ಮಾಯಾ ಜಿಂಕೆ ಮರೆಯಾಗಿದ್ದು ಏಕೆ ?

ಚಿಕ್ಕಮಗಳೂರು: ಕಳೆದ ನಾಲ್ಕು ವರೆ ವರ್ಷಗಳ ಹಿಂದೆಯೇ ವಿಧಾನ ಪರಿಷತ್ ಸದಸ್ಯರಾಗ ಬೇಕಿದ್ದ ಗಾಯಿತ್ರಿ ಶಾಂತೇಗೌಡ...

ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ-ಲೂಟಿಗಾಗಿ ಪೈಪೋಟಿ

ಚಿಕ್ಕಮಗಳೂರು: ಬಿಜೆಪಿ ಸರ್ಕಾರದಲ್ಲಿ ಶಾಸಕರ ನಡುವೆ ಕ್ಷೇತ್ರದ ಅಭಿವೃದ್ಧಿಗೆ ಪೈಪೋಟಿ ನಡೆದರೆ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರ,ಲೂಟಿಗಾಗಿ...

ಅಕ್ರಮ ಮರಳು ಸಾಗಾಟ: 407 ಲಾರಿ ವಶ, ಚಾಲಕ ಪೊಲೀಸ್ ವಶಕ್ಕೆ

ಶೃಂಗೇರಿ: ಪರವಾನಗಿ ಇಲ್ಲದೆ 407 ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದ ಮೇಲೆ ಶೃಂಗೇರಿ ಪೊಲೀಸರು...

₹1.16 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು: ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು ₹80 ಸಾವಿರ ಮೌಲ್ಯದ ಚಿನ್ನಾಭರಣ,...