Home namma chikmagalur ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಲವು ಯೋಜನೆ
namma chikmagalurchikamagalurHomeLatest News

ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಲವು ಯೋಜನೆ

Share
Share

ಚಿಕ್ಕಮಗಳೂರು: ರಾಜ್ಯದ ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಲವು ಯೋಜನೆ ಜಾರಿ ಮಾಡಿದ್ದು, ಸಮುದಾಯದವರು ಬಳಸಿಕೊಳ್ಳಬೇಕು ಎಂದು ಕರ್ನಾಟಕ ಕ್ರಿಶ್ಚಿಯನ್ ಸಮು ದಾಯ ಅಭಿವೃದ್ಧಿ ನಿಗಮದ ನಿರ್ದೇಶಕ ಹರ್ಷ ಮೆಲ್ವಿನ್ ಲಸ್ರಾದೊ ತಿಳಿಸಿದರು.

ಸಮುದಾಯದ ನಿರುದ್ಯೋಗಿ, ಕೃಷಿಕರು, ನವೋದ್ಯಮಿಗಳು, ವಿದ್ಯಾರ್ಥಿ ಗಳು ಹಾಗೂ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಯೋಜನೆ ಗಳನ್ನು ರೂಪಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ರಾಜ್ಯದ ಕ್ರಿಶ್ಚಿಯನ್ ಅಲ್ಪ ಸಂಖ್ಯಾತ ಸಮುದಾಯದ, ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಆಧರಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿಗಮವು ರೂಪಿಸಿರುವ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಯೋಜನೆಗಳ ಮಾಹಿತಿಗೆ ಸುಗಮ ಪ್ರವೇಶ ಹಾಗೂ ಸರಳ ಅರ್ಜಿ ಪ್ರಕ್ರಿಯೆ, ಅರ್ಜಿ ಸ್ಥಿತಿಯ ಮಾಹಿತಿ ಹಂಚಿಕೆ, ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ, ಸುಲಭ ಆನ್‌ಲೈನ್ ಸಾಲ ಮರು ಪಾವತಿ, ನಿಗಮದ ಯೋಜನೆಗಳು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಹಿತಕ್ಕಾಗಿ ಮತ್ತು ಅವರ ಸಂಸ್ಥೆಗಳ ಬಲವರ್ಧನೆಗಾಗಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ ಎಂದು ಹೇಳಿದರು.

ನಿಗಮಕ್ಕೆ ₹250 ಕೋಟಿ ಅನುದಾನ ಒದಗಿಸಿದ್ದಾರೆ. ಇತರ ಕಾರ್ಯಕ್ರಮಗಳನ್ನು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶಕ್ಕಾಗಿ ಈ ಕಾರ್ಯಕ್ರಮ ಸಿದ್ಧಪಡಿಸಲಾಗಿದೆ. ಮಾಹಿತಿಗೆ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವೆಬ್‌ಸೈಟ್‌ www.kccdclonline.karnataka.gov.in ನೋಡಬಹುದು ಎಂದರು.

ಸಮುದಾಯದ ಮುಖಂಡರಾದ ಜೇಮ್ಸ್ ಡಿಸೋಜ, ಸಂಜು, ಅಮರ್ ಡಿಸೋಜ, ಸಿ.ಎಂ. ಜಾರ್ಜ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

The state government has several schemes for the development of the Christian minority community.

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...