Home ರಾಜ್ಯದ ನೂತನ ಮುಖ್ಯಮಂತ್ರಿ ರಾಜೀನಾಮೆ
HomeLatest Newsnamma chikmagalurNational NewsPolitical News

ರಾಜ್ಯದ ನೂತನ ಮುಖ್ಯಮಂತ್ರಿ ರಾಜೀನಾಮೆ

Share
Share

ನವದೆಹಲಿ: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರಿಗೆ ರವಾನಿಸಿದ್ದಾರೆ. ಇದರ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿಗೆ ನೂತನ ಸಾರಥಿಯನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಬಿಕೆ ಹರಿಪ್ರಸಾದ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸತೀಶ್ ಜಾರಕಿಹೊಳಿ ಮತ್ತು ಈಶ್ವರ ಖಂಡ್ರೆ ಅವರು ಈಗಾಗಲೇ ಸಚಿವ ಸಂಪುಟ ಸೇರಿರುವುದರಿಂದ, ಅವರಿಗೆ ಅಧ್ಯಕ್ಷ ಸ್ಥಾನ ನೀಡುವುದು ನಿಯಮಕ್ಕೆ ವಿರುದ್ಧವಾಗುತ್ತಿತ್ತು. ಹೀಗಾಗಿ, ಯಾವುದೇ ಸಚಿವ ಸ್ಥಾನದ ಜವಾಬ್ದಾರಿ ಇಲ್ಲದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಗಲಿಗೆ ಪಕ್ಷ ಸಂಘಟನೆಯ ಹೊಣೆ ನೀಡಲಾಗಿದೆ.

The state’s new Chief Minister resigns.

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ...

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ...