Home namma chikmagalur chikamagalur ಕೇಂದ್ರ ಬಜೆಟ್‌ ನಲ್ಲಿ ದೇಶದ ಮೂಲ ಸೌಕರ್ಯಾಭಿವೃದ್ಧಿಗೆ ಒತ್ತು
chikamagalurHomeLatest Newsnamma chikmagalur

ಕೇಂದ್ರ ಬಜೆಟ್‌ ನಲ್ಲಿ ದೇಶದ ಮೂಲ ಸೌಕರ್ಯಾಭಿವೃದ್ಧಿಗೆ ಒತ್ತು

Share
Share

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಆಶೋತ್ತರ ಕೇವಲ ಚುನಾವಣೆ ಗೆಲ್ಲುವುದಲ್ಲ, ದೇಶ ಗೆಲ್ಲಿಸುವುದು, ಬಡವರಿಗೆ ಬಲಕೊಡುವುದಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಹೇಳಿದರು.

ಕೇಂದ್ರ ಸರ್ಕಾರದ ಬಜೆಟ್‌ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್‌ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ ಕೇವಲ ಚುನಾವಣೆ ಗೆಲ್ಲುವುದಲ್ಲ.

ದೇಶದ ಮೂಲಸೌಕರ್ಯಾಭಿವೃದ್ಧಿಗೆ ಒತ್ತುಕೊಡುವುದಾಗಿದೆ. ಸಣ್ಣ ಉದ್ಯಮಗಳನ್ನು ಪ್ರೋತ್ಸಾಹಿಸುವ ಮೂಲಕ ಉದ್ಯೋಗ ಸೃಷ್ಟಿ ಮಾಡುವುದಾಗಿದೆ. ವಸತಿ ರಹಿತರಿಗೆ ವಸತಿ ಕಲ್ಪಿಸುವುದು. ಈ ಎಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಕೇಂದ್ರ ಸರ್ಕಾರ ಬಜೆಟ್‌ ರೂಪಿಸಿದೆ ಎಂದರು.

100 ಲಕ್ಷ ಕೋಟಿ ರು, ವೆಚ್ಚದಲ್ಲಿ ಭಾರತ ಆತ್ಮನಿರ್ಬರವಾಗಬೇಕು ಎನ್ನುವುದು ಬಜೆಟ್ ಉದ್ದೇಶವಾಗಿದೆ. ನಮ್ಮ ಬೆಳವಣಿಗೆಯ ದರ 7.8 ದಾಟಿದೆ, ಇದು ಒಂದು ರೀತಿ ದಾಖಲೆಯಾಗಿದೆ. ಭಾರತ ಆರ್ಥಿಕವಾಗಿ ಜಗತ್ತಿನ 4ನೇ ಅತಿ‌ ದೊಡ್ಡ ಶಕ್ತಿವಾಗಿದ್ದು, ಶೀಘ್ರವೇ 3ನೇ ಸ್ಥಾನಕ್ಕೆ ಏರುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.

ಭಾರತಕ್ಕೆ ಸ್ವಾತಂತ್ರ್ಯ ಬಂದು 2047ಕ್ಕೆ 100 ವರ್ಷವಾಗಲಿದೆ. ಆ ವೇಳೆಗೆ ಭಾರತ ಆರ್ಥಿಕ-ಜ್ಞಾನದಲ್ಲಿ ಬಲಶಾಲಿಯಾಗಬೇಕು. ಭಾರತ ಜಗತ್ತಿನ ಕಲ್ಯಾಣ ಬಯಸುವ ಸಿದ್ದಾಂತ ಹೊಂದಿರುವ ರಾಷ್ಟ್ರವಾಗಿದೆ. ಭಾರತದ ಸೈದ್ದಾಂತಿಕ ವಿಚಾರಧಾರೆ ಮೂಲಕ ಜಗತ್ತಿನ ಕಲ್ಯಾಣವಾಗಬೇಕು.

ಈ ಕಲ್ಯಾಣಕ್ಕೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಆರ್ಥಿಕ ಚೈತನ್ಯ ಮೂಡಿಸಲಿದೆ. ಎಲ್ಲಾ ಕ್ಷೇತ್ರದಲ್ಲೂ ಆರ್ಥಿಕ ಹೊಸ ಹುರುಪು ನೀಡುವ ಬಜೆಟ್ ಮಂಡಿಸಿದ್ದಾರೆ. ಜನರ ಆಶೋತ್ತರಗಳನ್ನ ಈಡೇರಿಸುವ ಕಡೆ ವಿಶ್ವಾಸ ಉಳಿಸಿಕೊಂಡಿದ್ದಾರೆ ಎಂದರು.

The Union Budget emphasizes on the development of the country’s infrastructure.

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...