Home namma chikmagalur chikamagalur ಕಲ್ಲುದೊಡ್ಡಿ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ
chikamagalurCrime NewsHomeLatest Newsnamma chikmagalur

ಕಲ್ಲುದೊಡ್ಡಿ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ

Share
Share

ಚಿಕ್ಕಮಗಳೂರು: ನಗರದ ಹೊರವಲಯದ ಕಲ್ಲುದೊಡ್ಡಿ ಗ್ರಾಮದ ಶನೇಶ್ವರ ಸ್ವಾಮಿ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಸುಮಾರು ₹1.10 ಲಕ್ಷ ಮೌಲ್ಯದ ಪಂಚಲೋಹದ ವಿಗ್ರಹಗಳು ಸೇರಿದಂತೆ ದೇವರ ಪೂಜಾ ಸಾಮಗ್ರಿಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

ನವೆಂಬರ್ 13ರ ರಾತ್ರಿ 9 ಗಂಟೆಯಿಂದ ನವೆಂಬರ್ 14ರ ಬೆಳಗಿನ ಜಾವ 5 ಗಂಟೆಯ ನಡುವಿನ ಅವಧಿಯಲ್ಲಿ ಈ ಕಳ್ಳತನ ನಡೆದಿದೆ. ನವೆಂಬರ್ 13ರಂದು ಸಂಜೆ 7 ಗಂಟೆಗೆ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ ಬಳಿಕ ರಾತ್ರಿ 8.30ರ ಸುಮಾರಿಗೆ ಬೀಗ ಹಾಕಿ ಅರ್ಚಕರು ತೆರಳಿದ್ದರು.

ಮರುದಿನ ಬೆಳಿಗ್ಗೆ 5.45ರ ಸುಮಾರಿಗೆ ದೇವಸ್ಥಾನಕ್ಕೆ ಪೂಜೆ ಮಾಡಲು ತೆರಳಿದ ಅರ್ಚಕರ ಚಿಕ್ಕಪ್ಪ ವೆಂಕಟೇಶ್ ಅವರು ದೇವಸ್ಥಾನದ ಬಾಗಿಲು ಮುರಿದಿರುವುದನ್ನು ಗಮನಿಸಿದ್ದಾರೆ. ಒಳಗೆ ಪರಿಶೀಲಿಸಿದಾಗ ಸುಮಾರು ₹70 ಸಾವಿರ ಮೌಲ್ಯದ ಒಂದು ದೊಡ್ಡ ಶನೇಶ್ವರ ಪಂಚಲೋಹದ ವಿಗ್ರಹ, ₹25 ಸಾವಿರ ಮೌಲ್ಯದ ಮತ್ತೊಂದು ಚಿಕ್ಕ ಪಂಚಲೋಹದ ವಿಗ್ರಹ ಹಾಗೂ ₹15 ಸಾವಿರ ಮೌಲ್ಯದ ಪಂಚಲೋಹದ ಗಂಟೆ, ತ್ರಿಶೂಲ ಮತ್ತು ಗದೆ ಸೇರಿದಂತೆ ಒಟ್ಟು ₹1.10 ಲಕ್ಷ ಮೌಲ್ಯದ ವಸ್ತುಗಳು ಕಳವಾಗಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ದೇವಸ್ಥಾನದ ಅರ್ಚಕ ತೇಜ್ ಕುಮಾರ್.ಸಿ. (24) ಅವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೇವಸ್ಥಾನದ ವಿಗ್ರಹಗಳು ಹಾಗೂ ಪೂಜಾ ಸಾಮಗ್ರಿಗಳನ್ನು ಕಳ್ಳತನ ಮಾಡಿರುವ ಆರೋಪಿಗಳನ್ನು ಪತ್ತೆಹಚ್ಚಿ ಕಳವಾದ ವಸ್ತುಗಳನ್ನು ವಶಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ದೂರಿನ ಮೇರೆಗೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Theft at Kalludoddi Shaneshwara Swamy Temple

Share

Leave a comment

Leave a Reply

Your email address will not be published. Required fields are marked *

Don't Miss

ಅನಂತ್ ಅಗಲಿಕೆ ವೈಯಕ್ತಿಕವಾಗಿ ಅಪಾರ ನೋವು ತಂದಿದೆ

ಮೂಡಿಗೆರೆ: ತಾವು ಸಚಿವೆಯಾಗಿದ್ದ ಸಂದರ್ಭದಲ್ಲಿ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದ್ದ ಎಂ.ಎಸ್. ಅನಂತ್ ಅವರು ಅತಿ ಚಿಕ್ಕ ವಯಸ್ಸಿನಲ್ಲೇ ಅಗಲಿರುವುದು ವೈಯಕ್ತಿಕವಾಗಿ ಅಪಾರ ನೋವು ತಂದಿದೆ ಎಂದು ಮಾಜಿ ಸಚಿವೆ...

ಅಡಿಕೆ ತೋಟದ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ

ತರೀಕೆರೆ: ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿರುವ ಘಟನೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆನಂದ್ (48) ಹಾಗೂ ಜುಂಜಾನಾಯ್ (65) ಎಂದು ಗುರುತಿಸಲಾಗಿದೆ....

Related Articles

ಭದ್ರ ಮಾಫಿಯಾ : ಪೈಪ್ ನುಂಗಿ ನೀರು ಕುಡಿಯುವ ಶಾಸಕರುಗಳು ಮತ್ತು ಇಂಜಿನಿಯರ್ ಗಳು?

ಚಿಕ್ಕಮಗಳೂರು: ಜಿಲ್ಲೆಯಿಂದ ಚಿತ್ರದುರ್ಗ, ತುಮಕೂರು ಮತ್ತು ಕೋಲಾರ ಜಿಲ್ಲೆಗಳ ಕುಡಿಯುವ ನೀರಿಗಾಗಿ ಅಂತರ್ ಜಲ ಹೆಚ್ಚಳ...

ನ.18ರಂದು ಗೌಡನಹಳ್ಳಿ ಜನಾಂದೋಲನ ಅಂಬಳೆದಿಂದ ಚಲೋ

ಚಿಕ್ಕಮಗಳೂರು:ಕೈಗಾರಿಕಾ ಮಾಲಿನ್ಯ, ರಾಸಾಯನಿಕ ತ್ಯಾಜ್ಯದಿಂದ ಜಲಮೂಲಗಳ ಮಾಲಿನ್ಯ ಹಾಗೂ ಸಾರ್ವಜನಿಕ ಆಸ್ತಿಗಳ ಅತಿಕ್ರಮಣ ಸೇರಿದಂತೆ ವಿವಿಧ...

ಚಿಕ್ಕಮಗಳೂರಿನಲ್ಲಿ ಇಂದಿರಾಗಾಂಧಿ 110ನೇ ಜನ್ಮದಿನಾಚರಣೆ ಅದ್ದೂರಿ ಸಿದ್ಧತೆ

ಚಿಕ್ಕಮಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಜಕೀಯ ಮರುಜನ್ಮ ನೀಡಿದ ಐತಿಹಾಸಿಕ ನೆಲವಾದ ಚಿಕ್ಕಮಗಳೂರಿನಲ್ಲಿ ಅವರ...

ಚಿಕ್ಕಮಗಳೂರು ಪ್ರೀಮಿಯರ್ ಲೀಗ್‌ಗೆ ಶಾಸಕ ತಮ್ಮಯ್ಯ ಚಾಲನೆ

ಚಿಕ್ಕಮಗಳೂರು: ಕ್ರೀಡಾ ಚಟುವಟಿಕೆಗಳಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಸದೃಢತೆಯೂ ವೃದ್ಧಿಯಾಗುತ್ತದೆ....