Home namma chikmagalur chikamagalur ಮುತ್ತಿನಕೊಪ್ಪ ಗ್ರಾಮದ ಶಂಕರಪುರದಲ್ಲಿ ಕಳ್ಳತನ
chikamagalurCrime NewsHomeLatest Newsnamma chikmagalur

ಮುತ್ತಿನಕೊಪ್ಪ ಗ್ರಾಮದ ಶಂಕರಪುರದಲ್ಲಿ ಕಳ್ಳತನ

Share
Share

ಎನ್.ಆರ್.ಪುರ : ಮುತ್ತಿನಕೊಪ್ಪ ಗ್ರಾಮದ ಶಂಕರಪುರದಲ್ಲಿ ಕಳ್ಳತನ ನಡೆದಿದೆ.

ಸುಗಂಧಿ ಎಂಬುವವರ ಮಗಳು ರಕ್ಷಾ ಅವರು ಮದುವೆ ಕಾರ್ಯಕ್ರಮಕ್ಕಾಗಿ ಬ್ಯಾಂಕ್‌ನಿಂದ ಬಿಡಿಸಿಕೊಂಡು ಬಂದಿದ್ದ ಒಡವೆಗಳನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದ್ದು ಮಂಗಳವಾರ ಬೆಳಿಗ್ಗೆ 11:15 ಕ್ಕೆ ಸುಗಂಧಿ ಮತ್ತು ಅವರ ಮಗಳು ಒಡವೆಗಳನ್ನು ಮರಳಿ ಬ್ಯಾಂಕ್‌ಗೆ ಇಡಲು ಪೇಟೆಗೆ ಹೋಗಿದ್ದರು.

ಮಧ್ಯಾಹ್ನ 1:15 ಕ್ಕೆ ಮನೆಗೆ ಮರಳಿದಾಗ ಮುಂಭಾಗಿಲ ಬೀಗ ಮುರಿದಿರುವುದು ಕಂಡುಬಂದಿದೆ.

ಒಳಗೆ ಪರಿಶೀಲಿಸಿದಾಗ ಕಳ್ಳರು ಬೆಡ್‌ರೂಮ್‌ನ ಗಾಡೇಜ್ ಬೀರುಗಳನ್ನು ಮುರಿದು 7 ಗ್ರಾಂ ತೂಕದ ಓಲೆ, 40 ಗ್ರಾಂ ತೂಕದ ತಾಳಿ ಸರ ಮತ್ತು 20 ಗ್ರಾಂ ತೂಕದ ಚೈನ್ ಸೇರಿದಂತೆ ಒಟ್ಟು 67 ಗ್ರಾಂ ಚಿನ್ನವನ್ನು ದೋಚಿದ್ದಾರೆ.

ಸಾಕ್ಷ್ಯ ನಾಶಪಡಿಸಲು ಮನೆಯೊಳಗೆ ಕಾರದ ಪುಡಿ ಚಲ್ಲಿದ್ದಾರೆ. ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Theft in Shankarpura Muttinakoppa village

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...