Home namma chikmagalur ಕಳವು ಆರೋಪಿಗಳ ಸೆರೆ- ಚಿನ್ನಾಭರಣ ವಶ
namma chikmagalurchikamagalurHomeLatest News

ಕಳವು ಆರೋಪಿಗಳ ಸೆರೆ- ಚಿನ್ನಾಭರಣ ವಶ

Share
Share

ತರೀಕೆರೆ: ಯರೇಹಳ್ಳಿ ತಾಂಡ್ಯಾದ ಆಶಾ ಎಂಬುವರ ಮನೆಯಲ್ಲಿ  ಮನೆಯ ಚಾವಣಿಯ ಶೀಟ್ ತೆಗೆದು ಒಳ ನುಗ್ಗಿ 96 ಗ್ರಾಂ ಚಿನ್ನಾಭರಣ, ₹8 ಸಾವಿರ ನಗದು ಕಳ್ಳತನವಾಗಿದ್ದು, ಈ ಬಗ್ಗೆ ತರೀಕೆರೆ ಪೊಲಿಸ್ ಠಾಣೆಯಲ್ಲು ದೂರು ದಾಖಲಾಗಿತ್ತು.

ಕಳ್ಳರ ಪತ್ತೆಗಾಗಿ ತರೀಕೆರೆ ಠಾಣಾ ಅಧಿಕಾರಿ, ಸಿಬ್ಬಂದಿಯ ವಿಶೇಷ ತಂಡ ರಚಿಸಲಾಗಿತ್ತು.

ತಂಡವು ಆರೋಪಿಗಳಾದ ಅದೇ ಗ್ರಾಮದ ರಾಮಕೃಷ್ಣ, ಮೇಘರಾಜ್ ಎಂಬುವರನ್ನು ಶುಕ್ರವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಅವರಿಂದ ₹9.63 ಲಕ್ಷ ಮೌಲ್ಯದ ಚಿನ್ನಾಭರಣ, ₹4,400 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ತರೀಕೆರೆ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ರಾಮಚಂದ್ರ ನಾಯಕ್, ಪಿಎಸ್ಐಗಳಾದ ಮಂಜುನಾಥ್, ಮನ್ನಂಗಿ, ದೇವೇಂದ್ರ ರಾಥೋಡ್, ಸಿಬ್ಬಂದಿ ಎಚ್.ಸಿ. ರಾಮಪ್ಪ, ರುದ್ರೇಶ್, ರಿಯಾಜ್, ಧನಂಜಯ ಸ್ವಾಮಿ, ಶ್ರೀನಿವಾಸ, ಜಿಲ್ಲಾ ಕಚೇರಿ ತಾಂತ್ರಿಕ ಸಿಬ್ಬಂದಿ ರಬ್ಬಾನಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Theft suspects arrested gold jewellery seized
Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...