Home namma chikmagalur chikamagalur ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ
chikamagalurHomeLatest Newsnamma chikmagalur

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

Share
Share

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಭಾನುವಾರ ₹5.14 ಕೋಟಿ ವೆಚ್ಚದ ಕೆಳಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿ ‘ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಹತ್ತರ ಸಂಕಲ್ಪ ಮಾಡಿದೆ. ದೇಶದಲ್ಲಿ ₹8 ಲಕ್ಷ ಕೋಟಿ ಮೊತ್ತದ ಕಾಮಗಾರಿ ಪ್ರಗತಿಯಲ್ಲಿವೆ. ಈಗಾಗಲೇ 13 ಸಾವಿರ ಲೆವೆಲ್ ಕ್ರಾಸಿಂಗ್‌ಅನ್ನು ತೆರವುಗೊಳಿಸಿ ಜನರಿಗೆ ಸುರಕ್ಷಿತ, ಆಧುನಿಕ ಹಾಗೂ ದೀರ್ಘಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯದಲ್ಲಿ 700 ಲೆವೆಲ್ ಕ್ರಾಸಿಂಗ್‌ ಅನ್ನು ತೆಗೆದು ಹಾಕಲಾಗಿದೆ ಇನ್ನು ಕೆಲವೇ ವರ್ಷಗಳಲ್ಲಿ ದೇಶದಲ್ಲಿ ಲೆವೆಲ್‌ಕ್ರಾಸ್‌ಗಳೇ ಇರುವುದಿಲ್ಲ’ ಎಂದು ಅವರು ಹೇಳಿದರು.

ಬೀರೂರು ನಿಲ್ದಾಣದಲ್ಲಿ ಪ್ಲಾಟ್‌ಫಾರಂಗಳ ಅಭಿವೃದ್ಧಿಗಾಗಿ ₹8 ಕೋಟಿ ನೀಡಲಾಗಿದೆ. ಇಲ್ಲಿ ಕೆಳಸೇತುವೆ ನಿರ್ಮಾಣವು ಈ ಪ್ರದೇಶದ ಜನರ ಸುರಕ್ಷತೆ ಹಾಗೂ ಸಾರ್ವಜನಿಕರ ಸಂಚಾರವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಮನ್ವಯದಿಂದ ಕೆಲಸ ನಿರ್ವಹಿಸಿ ಡಿಸೆಂಬರ್ ಒಳಗೆ ಈ ಕಾಮಗಾರಿ ಮುಗಿಸಿಕೊಡಬೇಕು ಎಂದು ಸೂಚಿಸಿದರು.

ಶಾಸಕ ಕೆ.ಎಸ್.ಆನಂದ್ ಮಾತ ನಾಡಿ, ‘ಇಲ್ಲಿನ ನಿಲ್ದಾಣದ ಅಗತ್ಯಕ್ಕೆ ತಕ್ಕಂತೆ ಸಚಿವರು ಅನುದಾನ ನೀಡಿ ಅಭಿವೃದ್ಧಿಪಡಿಸುತ್ತಿರುವುದು ಶ್ಲಾಘ ನೀಯ. ಕಡೂರು ರೈಲು ನಿಲ್ದಾಣದ ಮೂಲ ಸೌಕರ್ಯ ಅಭಿವೃದ್ಧಿಗೆ ಎನ್ನುವುದಕ್ಕಿಂತ ಅದರ ಪುನ‌ರ್ ನಿರ್ಮಾಣಕ್ಕೆ ಕ್ರಮ ವಹಿಸಬೇಕು. ಕಡೂರು ನಿಲ್ದಾಣವನ್ನು ಹೊಸದಾಗಿಯೇ ನಿರ್ಮಿಸಬೇಕು ಎನ್ನುವುದು ಜನರ ಮತ್ತು ನನ್ನ ವೈಯಕ್ತಿಕ ಆಗ್ರಹವೂ ಆಗಿದೆ’ ಎಂದರು.

ಕಡೂರಿನ ಕೋಟೆ ಪ್ರದೇಶದಲ್ಲಿ ₹68 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೈಲ್ವೆ ಮೇಲ್ಲೇತುವೆಗೆ ಭೂ ಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಅಲ್ಲಿಯೂ ಕೆಲವು ಲೋಪ ಸರಿಪಡಿಸಬೇಕು. ಈ ಗೇಟ್‌ನಿಂದ ವಿದ್ಯಾರ್ಥಿಗಳು, ನೌಕರರಿಗೆ ಸಮಸ್ಯೆ ಉಂಟಾಗುತ್ತಿದೆ. ಈ ಕೆಲಸ ಮಾಡಿಕೊಡಬೇಕು ಎಂದರು.

ನೈರುತ್ಯ ರೈಲ್ವೆ ಡಿಆರ್‌ಎಂ ಮುದಿತ್ ಮಿತ್ತಲ್, ಬೇಲೂರು ಶಾಸಕ ಎಚ್.ಕೆ. ಸುರೇಶ್, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಬೆಳ್ಳಿ ಪ್ರಕಾಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಆ‌ರ್.ದೇವರಾಜ್ ಶೆಟ್ಟಿ, ಎಚ್.ಸಿ. ಕಲ್ಮರುಡಪ್ಪ, ಕನ್ನಡ ಸಂಘದ ಎಚ್.ಸಿ. ವಿಶ್ವನಾಥಗೌಡ, ಕಂದಾಯ ಇಲಾಖೆ ಅಧಿಕಾರಿಗಳು, ಬೀರೂರು ದೇವರಾಜ್, ಸವಿತಾ ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ. ನಾಗರಾಜ್, ರೈಲ್ವೆ ಇಲಾಖೆಯ ಡಿಸಿಎಂ ಗಿರೀಶ್, ರೈಲ್ವೆ ಸಂಚಾರ ಇನ್‌ಸ್ಪೆಕ್ಟರ್ ಜಗದೀಶ್, ವಿವಿಧ ಅಧಿಕಾರಿಗಳು, ಎಂಜಿನಿಯರ್‌ಗಳು, ಪೊಲೀಸ್ ಮತ್ತು ಆರ್‌ಪಿಎಫ್ ಅಧಿಕಾರಿಗಳು ಭಾಗವಹಿಸಿದ್ದರು.

There is no politics in the development of the country.

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...