Home namma chikmagalur chikamagalur ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ
chikamagalurCrime NewsLatest Newsnamma chikmagalur

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

Share
Share

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗಳ ಸಮರ್ಪಕ ಪೂರೈಕೆಗಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಎಲ್‌ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಜಿಲ್ಲೆಯ ಎಲ್ಲಾ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಒಂದು ಗೃಹಬಳಕೆ ಸಿಲಿಂಡರನ್ನು ಬುಕ್ ಮಾಡಿದ ೨೫ ದಿನಗಳ ಬಳಿಕವೇ ಇನ್ನೊಂದು ಸಿಲಿಂಡರ್ ಅನ್ನು ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಗ್ರಾಹಕರು ಅಡುಗೆ ಅನಿಲವನ್ನು ಮಿತಬಳಕೆ ಮಾಡುವಂತೆ ಕೋರಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯುವಂತೆ ವಿನಂತಿಸಲಾಗಿದೆ.

ಎಲ್‌ಪಿಜಿ ವಿತರಣೆಯಲ್ಲಿ ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ದೂರವಾಣಿ (೦೮೨೬೨-೨೩೭೭೧೫ ಅಥವಾ ೯೪೮೩೩೨೫೯೪೪) ಸಂಖ್ಯೆಗಳಿಗೆ ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ರವರೆಗೆ ಕರೆ ಮಾಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಯಿಲ್ ಕಂಪನಿಗಳಿಂದ ಜಿಲ್ಲೆಗೆ ಅಡುಗೆ ಅನಿಲ ಸರಬರಾಜು ಪರಿಸ್ಥಿತಿಗೆ ಅನುಗುಣವಾಗಿ ಅಡುಗೆ ಅನಿಲ ಬಳಕೆ ಮಿತಿಗೊಳಿಸುವ ಬಗ್ಗೆ ಸಾರ್ವಜನಿಕರು, ಗ್ರಾಹಕರು, ಸಂಘ-ಸಂಸ್ಥೆಗಳು ಇತರರಿಗೆ ಅರಿವು ಮೂಡಿಸಲು ಈ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ಹಾಗೂ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯೂಲೇಷನ್ ಆಫ್ ಸಪ್ಪೆ, ಅಂಡ್ ಡಿಸ್ಟ್ರಿಬ್ಯೂಷನ್) ಆರ್ಡರ್ ೨೦೦೦ ರನ್ವಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಗೃಹಬಳಕೆ ಗ್ಯಾಸ್ ವಿತರಣಾ ವ್ಯವಸ್ಥೆಯು ಸುಗಮವಾಗಿ ನಡೆಯಲು ಸಹಕರಿಸುವಂತೆ ಅವರು ಕೋರಿದ್ದಾರೆ.

There is no shortage of domestic cylinders in the district.

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...