ಚಿಕ್ಕಮಗಳೂರು: ಕೆಪಿಎಸ್ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆಯಂತೆ ಎಸ್ಐಟಿ ರಚಿಸಿ ತನಿಖೆಯನ್ನು ಕಾಲಮಿತಿಲ್ಲಿ ಪೂರ್ಣಗೊಳಿಸಬೇಕು. ಅದನ್ನು ಬಿಟ್ಟು ತನಿಖೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಸರ್ಕಾರವೇ ಮೇಲ್ಮನವಿ ಸಲ್ಲಿಸಿದರೆ ಜನರಲ್ಲಿ ಸರ್ಕಾರದ ಬಗ್ಗೆಯೇ ಅನುಮಾನ ಮೂಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.
ನಗರದ ಪ್ರೆಸ್ಕ್ಲಬ್ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸುವ ಉz್ದೆÃಶದಿಂದ ಸರ್ಕಾರ ಮೇಲ್ಮನವಿ ಸಲ್ಲಿಸಲು ಮುಂದಾಗುತ್ತಿದೆ ಎಂಬ ಆರೋಪ ಹಾಗೂ ಅನುಮಾನ ನನ್ನದಾಗಿದೆ ಎಂದು ಹೇಳಿದರು.
ಓಎಂಆರ್ ಶೀಟ್ ತಿದ್ದಲಾಗಿದೆ ಎಂಬ ಆರೋಪ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪಗಳಿವೆ. ಈ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ಅಗತ್ಯ. ಹೀಗಾಗಿ ಎಸ್ಐಟಿ ರಚಿಸಿ ಅದಕ್ಕೆ ಬೇಕಾದ ಸಂಪನ್ಮೂಲ ಒದಗಿಸಬೇಕು ಎಂದು ಆಗ್ರಹಿಸಿದರು.
ಕಸ ವಿಲೇವಾರಿ ಟೆಂಡರ್ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ಮುಖ್ಯಮಂತ್ರಿ ತನಿಖೆಗೆ ಆದೇಶಿಸಿರುವುದನ್ನು ಸ್ವಾಗತಿಸುತ್ತೇನೆ. ಟೆಂಡರ್ ಪಡೆದಿರುವ ಮುನಿಯಪ್ಪ ಎಂಟರ್ಪ್ರೈಸಸ್ ಸಂಸ್ಥೆಯ ಮಾಲೀಕತ್ವ ಹಾಗೂ ಅದರ ಹಿಂದಿರುವವರ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಸೌಜನ್ಯ ಪ್ರಕರಣದ ಕುರಿತು ಪಾರದರ್ಶಕ ತನಿಖೆಯಾಗಬೇಕು. ಪ್ರಕರಣ ನಡೆದು ೧೪ ವರ್ಷ ಕಳೆದಿದ್ದರೂ ಸತ್ಯ ಹೊರಬರಬೇಕು. ಸಾವಿಗೆ ಕಾರಣರಾದವರು ಯಾರೇ ಆಗಿದ್ದರೂ ಶಿಕ್ಷೆಯಾಗಬೇಕು. ತನಿಖೆ ಹೇಗೆ ನಡೆಸಬೇಕು ಎಂಬುದು ಎಸ್ಐಟಿಗೆ ಬಿಟ್ಟ ವಿಚಾರ. ವೈಜ್ಞಾನಿಕವಾಗಿ ತನಿಖೆ ನಡೆಸಿ ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಹಳೆಯ ಪ್ರಕರಣಗಳನ್ನೂ ವೈಜ್ಞಾನಿಕ ಸಾಕ್ಷö್ಯಗಳ ಆಧಾರದಲ್ಲಿ ತನಿಖೆ ನಡೆಸಲು ಸಾಧ್ಯವಿದೆ ಎಂದು ಹೇಳಿದರು.
ರಾಜ್ಯದ ಖಜಾನೆ ಖಾಲಿಯಾಗಿದ್ದು, ಬಜೆಟ್ನಲ್ಲಿ ಘೋಷಿಸಿರುವ ಯೋಜನೆಗಳನ್ನೇ ಅನುಷ್ಠಾನಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೊಸ ಹೊಸ ಘೋಷಣೆಗಳನ್ನು ಮಾಡುತ್ತಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.
ರಾಜ್ಯದ ಬಜೆಟ್ ಗಾತ್ರ ೪.೪೮ ಲಕ್ಷ ಕೋಟಿ ರೂ. ಅಷ್ಟಿದ್ದರೂ ಅದರ ಪರಿಣಾಮ ಅಭಿವೃದ್ಧಿ ಕಾರ್ಯಗಳಲ್ಲಿ ಕಾಣಿಸುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಒಂದು ತಿಂಗಳು ಹಣ ಬರುತ್ತದೆ. ಮತ್ತೊಂದು ತಿಂಗಳು ಬರುವುದಿಲ್ಲ. ಕೆಎಸ್ಆರ್ಟಿಸಿ ಬಸ್ಗಳನ್ನು ಓಡಿಸುವುದಕ್ಕೂ ಒತ್ತಡದ ಪರಿಸ್ಥಿತಿ ನಿರ್ಮಾಣವಾಗಿದೆ. ಸೆಪ್ಟೆಂಬರ್ನಲ್ಲೇ ವಿದ್ಯುತ್ ಕೊರತೆ ಎದುರಾಗಿರುವುದು ಆತಂಕಕಾರಿ. ಸಾಮಾನ್ಯವಾಗಿ ಫೆಬ್ರವರಿಮಾರ್ಚ್ಏಪ್ರಿಲ್ನಲ್ಲಿ ವಿದ್ಯುತ್ ಕೊರತೆ ಎದುರಾಗುತ್ತದೆ. ಆದರೆ ಈ ಬಾರಿ ಸೆಪ್ಟೆಂಬರ್ನಲ್ಲೇ ಕೊರತೆ ಕಾಣಿಸಿಕೊಂಡಿದೆ ಎಂದು ಹೇಳಿದರು.
ಸರ್ಕಾರ ಸಾಲ ಮಾಡುವುದು ತಪ್ಪಲ್ಲ. ಆದರೆ ಮೂಲಸೌಕರ್ಯ ಅಭಿವೃದ್ಧಿಗೆ ಸಾಲ ಮಾಡಿದರೆ ಉದ್ಯೋಗ ಸೃಷ್ಟಿಯಾಗಿ ಆದಾಯ ಹೆಚ್ಚಾಗಬಹುದು. ಆದರೆ ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಸಾಲ ಮಾಡಿದರೆ ರಾಜ್ಯದ ಆದಾಯ ಹೆಚ್ಚಾಗುವುದಿಲ್ಲ ಎಂದು ತಿಳಿಸಿದರು.
ಹಿಂದೆ ಕಿಸಾನ್ ಸಮ್ಮಾನ್ ಯೋಜನೆಯಡಿ ೪ ಸಾವಿರ ರೂ. ನೀಡಲಾಗುತ್ತಿತ್ತು. ಈಗ ೨ ಸಾವಿರ ರೂ. ನೀಡುವುದಾಗಿ ಹೇಳಲಾಗುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ಪರಿಹಾರದ ಜೊತೆಗೆ ರಾಜ್ಯದಿಂದಲೂ ರೈತರಿಗೆ ಹೆಚ್ಚುವರಿ ಪರಿಹಾರ ನೀಡಲಾಗುತ್ತಿತ್ತು. ಈಗ ಕನಿಷ್ಠ ಎಕರೆಗೆ ೧೦ ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.
ಮುಂದಿನ ಬೇಸಿಗೆ ಎದುರಿಸಲು ಈಗಿನಿಂದಲೇ ಪೂರ್ವಸಿದ್ಧತೆ ಕೈಗೊಳ್ಳಬೇಕು. ಹವಾಮಾನ ಇಲಾಖೆಯಿಂದ ಹಲವು ತಿಂಗಳ ಮುಂಚಿತವಾಗಿಯೇ ಮುನ್ನೆಚ್ಚರಿಕೆ ದೊರೆಯುತ್ತದೆ. ವಿದ್ಯುತ್ ಕೊರತೆ ಎದುರಾಗುವ ಸಾಧ್ಯತೆ ಇದ್ದರೆ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು ಎಂದು ಹೇಳಿದರು.
ಗೃಹಲಕ್ಷಿö್ಮÃ ಯೋಜನೆಯ ಹಣ ಮೂರು ತಿಂಗಳಿAದ ಫಲಾನುಭವಿಗಳಿಗೆ ತಲುಪಿಲ್ಲ. ಹಣ ಎಲ್ಲಿಗೆ ಹೋಯಿತು ಎಂಬ ಪ್ರಶ್ನೆಗೆ ಮೌನವೇ ಸರ್ಕಾರದ ಉತ್ತರವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ನಕಲಿ ಖಾತೆಗಳಿಗೆ ವರ್ಗಾವಣೆಯಾದಂತೆ ಗೃಹಲಕ್ಷಿö್ಮÃ ಯೋಜನೆ ಹಣವೂ ನಕಲಿ ಖಾತೆ ಸೇರಿದೆಯೇ ಎಂದು ಪ್ರಶ್ನಿಸಿದರು.
ಅತಿಥಿ ಶಿಕ್ಷಕರಿಗೆ ಐದು ತಿಂಗಳಿAದ, ಅಡುಗೆ ಸಹಾಯಕರಿಗೆ ಎರಡು ತಿಂಗಳಿAದ ವೇತನ ಪಾವತಿಯಾಗಿಲ್ಲ. ವೃದ್ಧರು, ವಿಧವೆಯರು ಹಾಗೂ ಅಂಗವಿಕಲರಿಗೆ ಹಲವು ತಿಂಗಳಿAದ ಪಿಂಚಣಿ ದೊರೆಯುತ್ತಿಲ್ಲ. ಗುತ್ತಿಗೆದಾರರಿಗೆ ದೊಡ್ಡ ಪ್ರಮಾಣದ ಬಾಕಿ ಹಣ ಪಾವತಿಯಾಗಬೇಕಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ಮುಖಂಡರಾದ ಎಚ್.ಎಸ್.ಪುಟ್ಟಸ್ವಾಮಿ, ಪುಷ್ಪರಾಜ್ ಹಾಗೂ ಕಲ್ಮರುಡಪ್ಪ ಉಪಸ್ಥಿತರಿದ್ದರು.
There must be a transparent investigation into the Sowjanya case.
Leave a comment