Home namma chikmagalur chikamagalur ಕ‌ಳ್ಳನಿಂದ ಬೆಲೆಬಾಳುವ ‌ಡ್ರೈಪೂಟ್‌ಗಳ ಕಳವು
chikamagalurCrime NewsHomeLatest Newsnamma chikmagalur

ಕ‌ಳ್ಳನಿಂದ ಬೆಲೆಬಾಳುವ ‌ಡ್ರೈಪೂಟ್‌ಗಳ ಕಳವು

Share
Share

ಶೃಂಗೇರಿ: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಭೀಕರ ಯುದ್ಧವು ಇದೀಗ ಕಾಫಿನಾಡಿನ ವ್ಯಾಪಾರಸ್ಥರಿಗೂ ಬಿಸಿ ಮುಟ್ಟಿಸಿದೆ. ಯುದ್ಧದ ಹಿನ್ನೆಲೆಯಲ್ಲಿ ವಿದೇಶಗಳಿಂದ ಆಮದಾಗುವ ಡ್ರೈಫೂಟ್ಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಮಾರುಕಟ್ಟೆಯಲ್ಲಿ ಇವುಗಳ ಬೆಲೆ ಗಗನಕ್ಕೇರಿದೆ.

ಈ ಬೆಲೆ ಏರಿಕೆಯ ನಡುವೆಯೇ ಶೃಂಗೇರಿಯಲ್ಲಿ ವಿಚಿತ್ರ ಕಳ್ಳತನವೊಂದು ಸಂಭವಿಸಿದೆ. ಶೃಂಗೇರಿ ಶಾರದಾಂಬೆ ದೇವಾಲಯದ ಪಾರ್ಕಿಂಗ್ ಆವರಣದಲ್ಲಿರುವ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳನೋರ್ವ ಕೇವಲ ನಗದಷ್ಟೇ ಅಲ್ಲದೆ ಬೆಲೆಬಾಳುವ ಡೈಪೂಟ್‌ಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಸುಮಾರು 80 ಸಾವಿರ ರೂಪಾಯಿ ನಗದು ಹಣದ ಜೊತೆಗೆ, 10 ಕೆಜಿಗಿಂತಲೂ ಅಧಿಕ ತೂಕದ ಬಾದಾಮಿ, ಪಿಸ್ತಾ ಹಾಗೂ ಗೋಡಂಬಿಯನ್ನು ಕಳ್ಳತನ ಮಾಡಲಾಗಿದೆ.

ವ್ಯಾಪಾರಿಗಳು ದಿನವಿಡೀ ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷತೆಯ ದೃಷ್ಟಿಯಿಂದ ಅಂಗಡಿಯಲ್ಲೇ ಇಟ್ಟು ತೆರಳುತ್ತಿದ್ದರು. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಖದೀಮರೇ ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.

ದೇವರಿಗೆ ಮುಡಿಪಾಗಿಟ್ಟಿದ್ದ ಹಣವನ್ನೂ ಬಿಡದ ಕಳ್ಳರು, ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿರುವ ಡೈಫೂಟ್ಸ್ ಗಳನ್ನು ಹೊತ್ತೊಯ್ದಿರುವುದು ಆಶ್ಚರ್ಯ ಮೂಡಿಸಿದೆ. ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಮಾರುಕಟ್ಟೆಯಲ್ಲಿ ಡೈ ಪೂಟ್ಸ್ ಕೊರತೆ ಮತ್ತು ಬೆಲೆ ಏರಿಕೆ ಇರುವುದೇ ಕಳ್ಳರು ಈ ವಸ್ತುವನ್ನು ಆಯ್ದುಕೊಳ್ಳಲು ಕಾರಣವಿರಬಹುದು ಎಂದು ಹೇಳಲಾಗುತ್ತಿದೆ.

Thief steals valuable dry goods

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...