Home namma chikmagalur chikamagalur ಗಾಂಜಾ ಮಾರಾಟಕ್ಕೆ ಸಂಚು-ಮೂರು ಆರೋಪಿಗಳ ಬಂಧನ
chikamagalurHomeLatest Newsnamma chikmagalur

ಗಾಂಜಾ ಮಾರಾಟಕ್ಕೆ ಸಂಚು-ಮೂರು ಆರೋಪಿಗಳ ಬಂಧನ

Share
Share

ಎನ್.ಆ‌ರ್.ಪುರ: ಕೆ.ಕಣಬೂರು ಬಸ್ ತಂಗುದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಂಚು ರೂಪಿಸಿ, ಅದನ್ನು ಹಂಚಿಕೊಳ್ಳುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಯಶಸ್ವಿಯಾಗಿ ದಾಳಿ ನಡೆಸಿ ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನರಸಿಂಹರಾಜಪುರ ಪೊಲೀಸರು ಈ ಕಾರ್ಯಚರಣೆ ನಡೆಸಿದ್ದಾರೆ. ತಂಗುದಾಣದಲ್ಲಿ ಅಡಗಿ ಕುಳಿತಿದ್ದ ಪೃಥ್ವಿಕ್, ಸಚ್ಚಿನ್ ಕುಮಾರ್ ಹಾಗೂ ಕಿರಣ್ ಎಂಬ ಆರೋಪಿಗಳನ್ನು ಪೊಲೀಸರು ಸುತ್ತುವರೆದು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ ಒಟ್ಟು 50,000 ರೂಪಾಯಿ ಮೌಲ್ಯದ 1,223 ಗ್ರಾಂ (1 ಕೆಜಿಗೂ ಹೆಚ್ಚು) ಒಣಗಿದ ಗಾಂಜಾವನ್ನು ಕವರ್ ಸಮೇತ ಜಪ್ತಿ ಮಾಡಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ್ದ ಎರಡು ಪಲ್ಸ‌ರ್ ಬೈಕ್‌ಗಳು ಹಾಗೂ ಬ್ಯಾಗ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯಿಂದ ಗಾಂಜಾ ಖರೀದಿಸಿ, ಮಾರಾಟ ಮಾಡಲು ಹೊರಟಿದ್ದಾಗ ಮಳೆಯಿಂದಾಗಿ ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದ ವೇಳೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Three accused arrested for conspiracy to sell marijuana illegally

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...