Home namma chikmagalur chikamagalur ಜಿಂಕೆ ಬೇಟೆ ಮೂವರ ನ್ಯಾಯಾಂಗ ಬಂಧನ
chikamagalurHomeLatest Newsnamma chikmagalur

ಜಿಂಕೆ ಬೇಟೆ ಮೂವರ ನ್ಯಾಯಾಂಗ ಬಂಧನ

Share
Share

ಚಿಕ್ಕಮಗಳೂರು: ಜಿಂಕೆ ಜಾತಿಯ ವನ್ಯಪ್ರಾಣಿಯೊಂದನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಗಳಿಂದ ಪ್ರಾಣಿಯ ಕಳೇಬರ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ತರೀಕೆರೆ ತಾಲ್ಲೂಕು ಲಿಂಗದಹಳ್ಳಿ ಹೋಬಳಿ, ಮೇಟೂರು ಗ್ರಾಮದ ವೆಂಕಟರಮಣ, ತಮಿಳುನಾಡು ತಿರುವಣ್ಣಾಮಲೈ ಜಿಲ್ಲೆಯ ಜಮಣಮತ್ತೂರು ತಾಲ್ಲೂಕಿನ ಕುಂಬಳೂರು ಗ್ರಾಮದ ಕನ್ನಿಯಪ್ಪನ್ ಹಾಗೂ ಅದೇ ಜಿಲ್ಲೆ, ತಾಲ್ಲೂಕು ವಲ್ಲಿಯೂರಿನ ಸುರೇಶ ಎಂಬವರೇ ಬಂಧಿತ ಆರೋಪಿಗಳು.

ಮಂಗಳವಾರ ಬೆಳಗ್ಗಿನ ಜಾವ ಸುಮಾರು ೧.೪೫ರ ಸುಮಾರಿಗೆ ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಕಾಡು ಪ್ರಾಣಿಗಳ ಬೇಟೆಯಾಡುತ್ತಿರುವ ಬಗ್ಗೆ ಮಾಹಿತಿ ದೊರೆತ ತಕ್ಷಣ ಕಾರ್ಯತತ್ಪರರಾದ ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಟಾರ್ಚ್ ಬೆಳಕಿನಲ್ಲಿ ಓಡಿಹೋಗುತ್ತಿದ್ದ ಆರೋಪಿಗಳನ್ನು ಸುತ್ತುವರಿದಿದ್ದಾರೆ.

ಅನಂತರ ಪಂಚರ ಸಮಕ್ಷಮದಲ್ಲಿ ಅವರಿಂದ ಜಿಂಕೆ ಜಾತಿಗೆ ಸೇರಿದ ಪ್ರಾಣಿಯ ಕಳೇಬರ, ಬಿಳಿ ಬಣ್ಣದ ಒಂದು ಬಟ್ಟೆ ಬ್ಯಾಗ್, ಎರಡು ಹೆಡ್‌ಲೈಟ್‌ಗಳು, ಎರಡು ಮರದ ದೊಣ್ಣೆಗಳು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪಮಹಾ ನಿರೀಕ್ಷಕಿ ಜಿ.ಸಂಗೀತ, ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಮಾರ್ಗದರ್ಶನದಲ್ಲಿ ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಉಪನಿರೀಕ್ಷಕ ಬಾಬುದ್ದೀನ್ ಹಾಗೂ ಸಿಬ್ಬಂದಿ ದೇವರಾಜ, ಕೃಷ್ಣರಾಜ್ ಅರಸ್, ದಿಲೀಪ್, ನಟರಾಜ್, ಹಾಲೇಶ್, ಹೇಮಾವತಿ ಹಾಗೂ ಚಾಲಕ ತಿಮ್ಮಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಅರಣ್ಯ ಕಾಯ್ದೆ ಮತ್ತು ವನ್ಯಜೀವಿಗಳ ಸಂರಕ್ಷಣಾ ಕಾಯ್ದೆ ಸಂಬಂಧಪಟ್ಟ ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರ ಕಚೇರಿ (೯೪೮೦೮೦೦೨೨೦) ಹಾಗೂ ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಕಚೇರಿ (೮೨೭೭೯೪೯೮೦೯) ದೂರವಾಣಿ ಸಂಖ್ಯೆಗಳಿಗೆ ಕರೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Three arrested for deer hunting

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...