Home namma chikmagalur chikamagalur ಜೂಜಾಟದಲ್ಲಿ ತೊಡಗಿಕೊಂಡಿದ್ದ ಮೂವರ ಬಂಧನ
chikamagalurHomeLatest Newsnamma chikmagalur

ಜೂಜಾಟದಲ್ಲಿ ತೊಡಗಿಕೊಂಡಿದ್ದ ಮೂವರ ಬಂಧನ

Share
Share

ಚಿಕ್ಕಮಗಳೂರು: ಜಿಲ್ಲೆಯ ದೋಣಗುಡಿ ಬಳಿ ಇಸ್ಪೇಟು ಜೂಜಾಟದಲ್ಲಿ ತೊಡಗಿಕೊಂಡಿದ್ದ ಮೂವರನ್ನು ಬಂಧಿಸಿ 17 ಸಾವಿರ ರು. ವಶಕ್ಕೆ ಪಡೆದಿರುವ ಪೊಲೀಸರು, ಆಲ್ದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಳೆದ ಗುರುವಾರ ರಾತ್ರಿ 8.30ರ ಸುಮಾರಿಗೆ ದೋಣಗುಡಿಗೆ ಗ್ರಾಮಕ್ಕೆ ಹೋಗುವ ರಸ್ತೆ ಬಳಿಯ ಅಟದ ಮೈದಾನದಲ್ಲಿ 8 ರಿಂದ 9 ಮಂದಿ ಅಂದರ್ ಬಾಹರ್ ಇಸ್ಪೀಟು ಜೂಜಾಟದ ಆಡುತ್ತಿದ್ದರು. ಜೂಜು ಅಡ್ಡೆಯ ಮೇಲೆ ದಾಳಿ ಮಾಡಿದ ಮೂವರನ್ನು ಬಂಧಿಸಿರುವ ಆಲ್ದೂರು ಪೊಲೀಸರು.

ಮೂಡಿಗೆರೆ ತಾಲೂಕಿಮ ಬಿಳಗುಳ ಗ್ರಾಮದ ಕಿಶೋರ್ ಶೆಟ್ಟಿ (ಕೆಕೆ ಬಾರ್‌ ಕೆಲಸ), ಮಾಕೋನಹಳ್ಳಿಯ ರುತ್ವಿಕ್ ಬಿನ್ ಪ್ರಭಾಕರ್( ಅಡುಗೆ ಗುತ್ತಿಗೆದಾರ), ಯಲಗುಡಿಗೆ ಗ್ರಾಮದ ಬಸವರಾಜ ಬಿನ್ ಸೋಮೇಗೌಡ (ಕೃಷಿಕ) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ 17,200 ರು. ನಗದು ವಶಕ್ಕೆ ಪಡೆಯಲಾಗಿದೆ. ಜತೆಗೆ, 2 ಕ್ಯಾಂಡಲ್ ಹಾಗೂ 52 ಇಸ್ಪೀಟ್ ಎಲೆ, ಐದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ತಪ್ಪಿಸಿಕೊಂಡು ಇನ್ನೂ ಐದಾರು ಮಂದಿ ಹುಡುಕಾಟ ನಡೆಸಲಾಗುತ್ತಿದೆ

Three arrested for gambling

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...