Home namma chikmagalur chikamagalur ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಹಸುಗಳು ಸಾವು
chikamagalurHomeLatest Newsnamma chikmagalur

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಹಸುಗಳು ಸಾವು

Share
Share

ಕಳಸ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮೂರು ಹಸುಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೆಳಬೈಲ್ ಗ್ರಾಮದಲ್ಲಿ ನಡೆದಿದೆ.

ಬೃಹತ್ ಗಾತ್ರದ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ರಭಸಕ್ಕೆ ತಂತಿಗಳು ತುಂಡಾಗಿ ನೆಲಕ್ಕೆ ಬಿದ್ದಿದ್ದವು. ಈ ವೇಳೆ ಆ ಮಾರ್ಗದಲ್ಲಿ ಸಾಗುತ್ತಿದ್ದ ಮೂರು ಹಸುಗಳಿಗೆ ತಂತಿ ಸ್ಪರ್ಶಿಸಿ, ತೀವ್ರವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅವು ಸ್ಥಳದಲ್ಲೇ ಪ್ರಾಣ ಬಿಟ್ಟಿವೆ.

ತಮ್ಮ ಜೀವನಾಧಾರವಾಗಿದ್ದ ಮೂರು ಹಸುಗಳನ್ನು ಏಕಾಏಕಿ ಕಳೆದುಕೊಂಡ ರೈತ ಕಣ್ಣೀರಿಡುತ್ತಿದ್ದು, ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿ ಪರಿಶೀಲನೆ ನಡೆಸಿದ್ದಾರೆ. ಈ ಅವಘಡಕ್ಕೆ ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ನೇರ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮಾರ್ಗದ ಪಕ್ಕದಲ್ಲಿದ್ದ ಅಪಾಯಕಾರಿ ಮರಗಳನ್ನು ಮುಂಚಿತವಾಗಿ ತೆರವುಗೊಳಿಸುವಂತೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇಲಾಖೆಯ ಬೇಜವಾಬ್ದಾರಿತನದಿಂದಲೇ ಈ ಅನಾಹುತ ಸಂಭವಿಸಿದ್ದು ಹಸುಗಳನ್ನು ಕಳೆದುಕೊಂಡಿರುವ ಸಂತ್ರಸ್ತ ರೈತನಿಗೆ ಸರ್ಕಾರ ಹಾಗೂ ಸಂಬಂಧಪಟ್ಟ ಮೆಸ್ಕಾಂ ಇಲಾಖೆಯಿಂದ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕೆಂದು ಕೆಳಬೈಲ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Three cows die after being trampled by a fallen electric wire

Share

Leave a comment

Leave a Reply

Your email address will not be published. Required fields are marked *

Don't Miss

ಇಂದಿನಿಂದ ಜಿಲ್ಲೆಯಲ್ಲಿ ಸಂಘಟನ್ ಸೃಜನ ಅಭಿಯಾನ

ಚಿಕ್ಕಮಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ತೀರ್ಮಾನದಂತೆ ದೇಶದಾದ್ಯಂತ ‘ಸಂಘಟನ್ ಸೃಜನ ಅಭಿಯಾನ’ ನಡೆಸುತ್ತಿದ್ದು, ಜಿಲ್ಲೆಯಲ್ಲೂ ಇಂದಿನಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿ ಮಾಜಿ ಕಾರ್ಯದರ್ಶಿ, ಗುಜರಾತ್ ಉಸ್ತುವಾರಿ ಬಿಶ್ವರಂಜನ್ ಮೊಹಾಂತಿ...

ಮುಂದುವರಿದ ಟಿ.ಡಿ.ರಾಜೇಗೌಡ-ಗೊಂದಲದಲ್ಲಿ ಗಾಯಿತ್ರಿ ?

ಚಿಕ್ಕಮಗಳೂರು: ಶಾಸಕ ಟಿ.ಡಿ.ರಾಜೇಗೌಡ v/s ಮಾಜಿ ಶಾಸಕ ಡಿ.ಎನ್.ಜೀವರಾಜ್ ಮಧ್ಯೆ ನಡೆದಿರುವ ಶಾಸಕ ಸ್ಥಾನನ ಪೈಪೋಟಿಯಲ್ಲಿ ಸದ್ಯಕ್ಕೆ ಟಿ.ಡಿ.ರಾಜೇಗೌಡರ ಕೈ ಮೇಲಾಗಿದೆ.ಸುಪ್ರೀಂ ಕೋರ್ಟ್ ಜುಲೈ ತಿಂಗಳವರೆಗೆ ರಾಜೇಗೌಡ ಶಾಸಕ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ...

Related Articles

ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ತಪ್ಪಲು ಹಾಗೂ ರಾಜ್ಯದ ಅತಿ ಎತ್ತರದ ಶಿಖರ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ...

ಜಿಲ್ಲೆಯಲ್ಲಿ SIR ಪರಿಷ್ಕರಣೆಯಲ್ಲಿ 8,54,852 ನಮೂನೆಗಳ ಡಿಜಿಟಲೀಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲಾಧಿಕಾರಿ ಹಾಗೂ...

ಮರು ಮತ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡಗೆ 9 ಮತಗಳ ಗೆಲವು

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ...

ಎನ್‌ಆರ್‌ಪುರ, ಶೃಂಗೇರಿ – ಕೊಪ್ಪ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದ...