Home namma chikmagalur ವಿದ್ಯುತ್‌ಸ್ಪರ್ಷಕ್ಕೆ ಮೂರು ಹಸುಗಳು ಸಾವು
namma chikmagalurchikamagalurHomeLatest News

ವಿದ್ಯುತ್‌ಸ್ಪರ್ಷಕ್ಕೆ ಮೂರು ಹಸುಗಳು ಸಾವು

Share
Share

ಚಿಕ್ಕಮಗಳೂರು: ವಿದ್ಯುತ್ ಸ್ಪರ್ಶದಿಂದ ಮೂರು ಹಸುಗಳು ಸಾವನ್ನಪ್ಪಿರುವ ದಾರುಣ ಘಟನೆ ತಾಲ್ಲೂಕಿನ ಕೆಳಮಲ್ಲಂದೂರು ಗ್ರಾಮದಲ್ಲಿ ನಡೆದಿದೆ.

ಕೆಳಮಲ್ಲಂದೂರು ಗ್ರಾಮದ ಕೃಷಿಕ ಸಿ.ಎಸ್. ಗೋಪಾಲಗೌಡ ಎಂಬುವವರಿಗೆ ಸೇರಿದ ಮೂರು ಜರ್ಸಿ ಹಸಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ. ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರಿಂದ ಆಕಸ್ಮಿಕ ವಿದ್ಯುತ್ ತಗುಲಿ ಹಸುಗಳು ಅಸುನೀಗಿವೆ ಎಂದು ಹೇಳಲಾಗುತ್ತಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಕುಟುಂಬಕ್ಕೆ ಆರ್ಥಿಕ ಆಧಾರಸ್ತಂಭವಾಗಿದ್ದ ಮೂರು ಹಸುಗಳು ಏಕಕಾಲದಲ್ಲಿ ಸಾವನ್ನಪ್ಪಿದ್ದು, ಸುಮಾರು ೨ ಲಕ್ಷಕ್ಕೂ ಅಧಿಕ ನಷ್ಟವುಂಟಾಗಿದೆ. ಪ್ರೀತಿಯಿಂದ ಸಾಕಿ ಸಲಹಿದ್ದ ಹಸುಗಳು ಸಾವನ್ನಪ್ಪಿರುವುದರಿಂದ ರೈತ ಗೋಪಾಲಗೌಡ ಕುಟುಂಬದವರು ಕಂಗಾಲಾಗಿದ್ದಾರೆ.

ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತರಿಗೆ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Three cows die from electrocution

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...