ಮೂಡಿಗೆರೆ: ತಾಲೂಕಿನ ಕೊಟ್ಟಿಗೆಹಾರದ ಪೆಟ್ರೋಲ್ ಪಂಪ್ ಮುಂಭಾಗ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡ ಇಬ್ಬರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ಮಟ್ಟದ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತದೇಹಗಳನ್ನು ಮೂಡಿಗೆರೆಯ ಎಂ.ಜಿ.ಎಂ. ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Three killed in horrific accident in Kotteghaara
ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...
ByN Raju Chief EditorSeptember 29, 2026ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...
ByN Raju Chief EditorSeptember 28, 2026ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...
ByN Raju Chief EditorOctober 6, 2026ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...
ByN Raju Chief EditorOctober 6, 2026ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...
ByN Raju Chief EditorOctober 6, 2026ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...
ByN Raju Chief EditorOctober 6, 2026Excepteur sint occaecat cupidatat non proident
Leave a comment