Home State News ಮಾರುಕಟ್ಟೆಯಲ್ಲಿ ಟೊಮೆಟೊ ಧಾರಣೆ ದಿಢೀರ್‌ ಕುಸಿತ
State News

ಮಾರುಕಟ್ಟೆಯಲ್ಲಿ ಟೊಮೆಟೊ ಧಾರಣೆ ದಿಢೀರ್‌ ಕುಸಿತ

Share
Share

ಬೆಂಗಳೂರು: ಮಳೆ, ಮೋಡ ಕವಿದ ವಾತಾವರಣ ಮತ್ತು ರೋಗಬಾಧೆಯಿಂದ ಗುಣಮಟ್ಟ ಕಳೆದು ಕೊಳ್ಳುತ್ತಿರುವ ಟೊಮೆಟೊ ಧಾರಣೆ ಮಾರುಕಟ್ಟೆಯಲ್ಲಿ ದಿಢೀರ್‌ ಕುಸಿತ ಕಂಡಿದೆ.

ವಾರದ ಹಿಂದೆ ಕೋಲಾರ ಎಪಿಎಂಸಿ ಹರಾಜಿನಲ್ಲಿ ₹750ಕ್ಕೆ ಮಾರಾಟವಾಗಿದ್ದ 15 ಕೆ.ಜಿ ಟೊಮೆಟೊ ಬಾಕ್ಸ್‌ ಈಗ ₹300ಕ್ಕೆ ಕುಸಿದಿದೆ. ಗುಣಮಟ್ಟದ ಟೊಮೆಟೊ ಬಾಕ್ಸ್‌ಗೆ ಮಾತ್ರ ₹300 ಇದ್ದರೆ, ಇನ್ನುಳಿದ ಟೊಮೆಟೊ ಬಾಕ್ಸ್‌ಗಳು ಕೇವಲ ₹100ಕ್ಕೆ ಮಾರಾಟವಾಗುತ್ತಿವೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊ ಬೆಲೆ ₹15ರಿಂದ ₹20 ಇದೆ. ಹೆಚ್ಚು ಟೊಮೆಟೊ ಬೆಳೆಯುವ ಕೋಲಾರ ಜಿಲ್ಲೆಯಲ್ಲಿ ಸುಗ್ಗಿ ಮುಗಿಯುತ್ತಿದೆ. ಸಾಲು, ಸಾಲು ಹಬ್ಬಗಳಿಂದಾಗಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ಬೆಳೆಗಾರರು ದರ ಕುಸಿತದಿಂದ ನಿರಾಶರಾಗಿದ್ದಾರೆ.

ಎಪಿಎಂಸಿ ಮಾರುಕಟ್ಟೆಗೆ ಮಂಗಳವಾರ 17 ಸಾವಿರ ಕ್ವಿಂಟಲ್‌ ಅಂದರೆ 1.25 ಲಕ್ಷ ಬಾಕ್ಸ್‌ ಟೊಮೆಟೊ ಆವಕವಾಗಿದೆ. ಹಿಂದೆ ಇದೇ ಅವಧಿಯಲ್ಲಿ ದಿನಕ್ಕೆ 30 ಸಾವಿರ ಕ್ವಿಂಟಲ್‌ವರೆಗೆ ಟೊಮೆಟೊ ಮಾರುಕಟ್ಟೆಗೆ ಪೂರೈಕೆ ಆಗುತಿತ್ತು.

‘ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ ರಾಜ್ಯಗಳಲ್ಲಿ ಟೊಮೆಟೊಗೆ ಬೇಡಿಕೆ ಇದೆ. ಗುಣಮಟ್ಟದ ಟೊಮೆಟೊ ಮಾರುಕಟ್ಟೆಗೆ ಬರುತ್ತಿಲ್ಲ. ಗುಣಮಟ್ಟವಿಲ್ಲದಿದ್ದರೆ ಖರೀದಿ ಮಾಡಲ್ಲ. ಲಾರಿಯಲ್ಲಿ ಒಯ್ದರೂ ಮಾರಾಟವಾಗದೆ ಟೊಮೆಟೊ ಹಾಳಾಗುತ್ತಿದೆ. ಹೀಗಾಗಿ, ಟೊಮೆಟೊ ಸಾಗಿಸಲು ವರ್ತಕರು ಹಿಂದೇಟು ಹಾಕುತ್ತಿದ್ದಾರೆ’ ಎಂದು ಕೋಲಾರ ಎಪಿಎಂಸಿ ಕಾರ್ಯದರ್ಶಿ ಕಿರಣ್‌ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಜಿಲ್ಲೆಯಲ್ಲಿ ಟೊಮೆಟೊ ಬೆಳೆಯುವ ಪ್ರದೇಶದ ವಿಸ್ತೀರ್ಣ ತಗ್ಗಿಲ್ಲ. ಹವಾಮಾನ ವೈಪರೀತ್ಯ, ರೋಗಬಾಧೆ ಕಾರಣಗಳಿಂದ ಫಸಲು ಕಡಿಮೆ ಆಗಿದೆ ಎನ್ನುತ್ತಾರೆ ಅವರು.

ಏಷ್ಯಾದ 2ನೇ ದೊಡ್ಡ ಮಾರುಕಟ್ಟೆ ಕೋಲಾರದ ಎಪಿಎಂಸಿ ಟೊಮೆಟೊ ಮಾರಾಟದಲ್ಲಿ ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಮಾರುಕಟ್ಟೆ ಎನಿಸಿದೆ. ಚಿತ್ರದುರ್ಗದ ಚಳ್ಳಕೆರೆ ಸೇರಿ ವಿವಿಧೆಡೆಯ ಟೊಮೆಟೊ ಕೂಡಾ ಬರಲಿದೆ. ಇಲ್ಲಿಂದ ಬೆಂಗಳೂರು ಹೊರತುಪಡಿಸಿ 15ರಿಂದ 20 ರಾಜ್ಯಗಳಿಗೆ ಪೂರೈಕೆ ಆಗಲಿದೆ.

Tomato prices plummet in the market

Share

Leave a comment

Leave a Reply

Your email address will not be published. Required fields are marked *

Don't Miss

ಸಂಗೊಳ್ಳಿ ರಾಯಣ್ಣ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ

ಚಿಕ್ಕಮಗಳೂರು:  ಸಂಗೊಳ್ಳಿ ರಾಯಣ್ಣ ನಾಡು ಅಪ್ರತಿಮೆ ಸ್ವಾತಂತ್ರ್ಯ ಹೋರಾಟಗಾರ. ಬ್ರಿಟಿಷರ ಕಪಿಮುಷ್ಠಿಯಿಂದ ನಲುಗುತ್ತಿದ್ಧ ಭಾರತೀಯರಿಗೆ ನ್ಯಾಯ ಒದಗಿಸಲು ಪ್ರಾಣವನ್ನೆ ಅರ್ಪಿಸಿದ ಧೀ ಮಂತ ಮಹಾಪುರುಷ ಎಂದು ಶಾಸಕಿ ನಯನ ಮೋಟಮ್ಮ ಹೇಳಿದರು....

ವಿಬಿ-ಜಿ ರಾಮ್‌ಜೀ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಕುತಂತ್ರ

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಪಕ್ಷ ಹ ಲವಾರು ಕುತಂತ್ರ ನಡೆಸಿ ಅಪಪ್ರಚಾರ ಮಾಡುತ್ತಿದೆ. ಕೇಂದ್ರ ಸರ್ಕಾರದ ಸತ್ಯ ದರ್ಶನ ಮಾಡಿಸಲು ರಾಜ್ಯಾ ದ್ಯಂತ ಜನಜಾಗೃತಿ ನಡೆಸಿ...

Related Articles

ರಾಮಚಂದ್ರ ರಾವ್ ಅಲಿಯಾಸ್ ಕಾಮುಕ ರಾವ್ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ

ರಾಮಚಂದ್ರ ರಾವ್ ಅಲಿಯಾಸ್ ಕಾಮಚಂದ್ರ ರಾವ್ ನಿವೃತ್ತಿ ಅಂಚಿನಲ್ಲಿ ಕಾಮ ಪುರಾಣದಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಮಾಡಿದ್ದು...

ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ....

ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೋ ! ಭ್ರಾಂತಿಯೋ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿ ಎರಡೂವರೆ ವರ್ಷ ಪೂರೈಸುತ್ತಿದೆ.ಸರ್ಕಾರ ರಚನೆಯಾದಾಗಿನಿಂದ ಇಲ್ಲಿಯವರೆಗೆ “ಮುಖ್ಯಮಂತ್ರಿ” ಬದಲಾಗುತ್ತಾರೆ...

ಅಭ್ಯರ್ಥಿ ಗರಿಷ್ಠ ವಯೋಮಿತಿಯಲ್ಲಿ ಒಮ್ಮೆ ಅನ್ವಯವಾಗುವಂತೆ 3 ವರ್ಷ ಸಡಿಲಿಕೆ

ಚಿಕ್ಕಮಗಳೂರು:  ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು...