Home State News ಮಾರುಕಟ್ಟೆಯಲ್ಲಿ ಟೊಮೆಟೊ ಧಾರಣೆ ದಿಢೀರ್‌ ಕುಸಿತ
State News

ಮಾರುಕಟ್ಟೆಯಲ್ಲಿ ಟೊಮೆಟೊ ಧಾರಣೆ ದಿಢೀರ್‌ ಕುಸಿತ

Share
Share

ಬೆಂಗಳೂರು: ಮಳೆ, ಮೋಡ ಕವಿದ ವಾತಾವರಣ ಮತ್ತು ರೋಗಬಾಧೆಯಿಂದ ಗುಣಮಟ್ಟ ಕಳೆದು ಕೊಳ್ಳುತ್ತಿರುವ ಟೊಮೆಟೊ ಧಾರಣೆ ಮಾರುಕಟ್ಟೆಯಲ್ಲಿ ದಿಢೀರ್‌ ಕುಸಿತ ಕಂಡಿದೆ.

ವಾರದ ಹಿಂದೆ ಕೋಲಾರ ಎಪಿಎಂಸಿ ಹರಾಜಿನಲ್ಲಿ ₹750ಕ್ಕೆ ಮಾರಾಟವಾಗಿದ್ದ 15 ಕೆ.ಜಿ ಟೊಮೆಟೊ ಬಾಕ್ಸ್‌ ಈಗ ₹300ಕ್ಕೆ ಕುಸಿದಿದೆ. ಗುಣಮಟ್ಟದ ಟೊಮೆಟೊ ಬಾಕ್ಸ್‌ಗೆ ಮಾತ್ರ ₹300 ಇದ್ದರೆ, ಇನ್ನುಳಿದ ಟೊಮೆಟೊ ಬಾಕ್ಸ್‌ಗಳು ಕೇವಲ ₹100ಕ್ಕೆ ಮಾರಾಟವಾಗುತ್ತಿವೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ ಟೊಮೆಟೊ ಬೆಲೆ ₹15ರಿಂದ ₹20 ಇದೆ. ಹೆಚ್ಚು ಟೊಮೆಟೊ ಬೆಳೆಯುವ ಕೋಲಾರ ಜಿಲ್ಲೆಯಲ್ಲಿ ಸುಗ್ಗಿ ಮುಗಿಯುತ್ತಿದೆ. ಸಾಲು, ಸಾಲು ಹಬ್ಬಗಳಿಂದಾಗಿ ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ಬೆಳೆಗಾರರು ದರ ಕುಸಿತದಿಂದ ನಿರಾಶರಾಗಿದ್ದಾರೆ.

ಎಪಿಎಂಸಿ ಮಾರುಕಟ್ಟೆಗೆ ಮಂಗಳವಾರ 17 ಸಾವಿರ ಕ್ವಿಂಟಲ್‌ ಅಂದರೆ 1.25 ಲಕ್ಷ ಬಾಕ್ಸ್‌ ಟೊಮೆಟೊ ಆವಕವಾಗಿದೆ. ಹಿಂದೆ ಇದೇ ಅವಧಿಯಲ್ಲಿ ದಿನಕ್ಕೆ 30 ಸಾವಿರ ಕ್ವಿಂಟಲ್‌ವರೆಗೆ ಟೊಮೆಟೊ ಮಾರುಕಟ್ಟೆಗೆ ಪೂರೈಕೆ ಆಗುತಿತ್ತು.

‘ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ ರಾಜ್ಯಗಳಲ್ಲಿ ಟೊಮೆಟೊಗೆ ಬೇಡಿಕೆ ಇದೆ. ಗುಣಮಟ್ಟದ ಟೊಮೆಟೊ ಮಾರುಕಟ್ಟೆಗೆ ಬರುತ್ತಿಲ್ಲ. ಗುಣಮಟ್ಟವಿಲ್ಲದಿದ್ದರೆ ಖರೀದಿ ಮಾಡಲ್ಲ. ಲಾರಿಯಲ್ಲಿ ಒಯ್ದರೂ ಮಾರಾಟವಾಗದೆ ಟೊಮೆಟೊ ಹಾಳಾಗುತ್ತಿದೆ. ಹೀಗಾಗಿ, ಟೊಮೆಟೊ ಸಾಗಿಸಲು ವರ್ತಕರು ಹಿಂದೇಟು ಹಾಕುತ್ತಿದ್ದಾರೆ’ ಎಂದು ಕೋಲಾರ ಎಪಿಎಂಸಿ ಕಾರ್ಯದರ್ಶಿ ಕಿರಣ್‌ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಜಿಲ್ಲೆಯಲ್ಲಿ ಟೊಮೆಟೊ ಬೆಳೆಯುವ ಪ್ರದೇಶದ ವಿಸ್ತೀರ್ಣ ತಗ್ಗಿಲ್ಲ. ಹವಾಮಾನ ವೈಪರೀತ್ಯ, ರೋಗಬಾಧೆ ಕಾರಣಗಳಿಂದ ಫಸಲು ಕಡಿಮೆ ಆಗಿದೆ ಎನ್ನುತ್ತಾರೆ ಅವರು.

ಏಷ್ಯಾದ 2ನೇ ದೊಡ್ಡ ಮಾರುಕಟ್ಟೆ ಕೋಲಾರದ ಎಪಿಎಂಸಿ ಟೊಮೆಟೊ ಮಾರಾಟದಲ್ಲಿ ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಮಾರುಕಟ್ಟೆ ಎನಿಸಿದೆ. ಚಿತ್ರದುರ್ಗದ ಚಳ್ಳಕೆರೆ ಸೇರಿ ವಿವಿಧೆಡೆಯ ಟೊಮೆಟೊ ಕೂಡಾ ಬರಲಿದೆ. ಇಲ್ಲಿಂದ ಬೆಂಗಳೂರು ಹೊರತುಪಡಿಸಿ 15ರಿಂದ 20 ರಾಜ್ಯಗಳಿಗೆ ಪೂರೈಕೆ ಆಗಲಿದೆ.

Tomato prices plummet in the market

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ರಾಜ್ಯದಲ್ಲಿ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಬೆಂಗಳೂರು: ಡಿಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ...