Home namma chikmagalur chikamagalur ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪಂಜಿನ ಮೆರವಣಿಗೆ
chikamagalurHomeLatest Newsnamma chikmagalur

ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡಿಸಿ ಪಂಜಿನ ಮೆರವಣಿಗೆ

Share
Share

ಚಿಕ್ಕಮಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ ಭೀಮ್ ಆರ್ಮಿ ಮತ್ತು ಭಾರತೀಯ ಭಾರತೀಯ ಬೌದ್ಧ ಮಹಾಸಭಾದಿಂದ ಶುಕ್ರವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಲಾಯಿತು.

ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ತನಕ ಮೆರವಣಿಗೆ ನಡೆಸಿದ ಸಂಘಟನೆಗಳ ಮುಖಂಡರು, ಕೇಂದ್ರ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು.

ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್‌ಕುಮಾರ್ ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿನ ವೈಫಲ್ಯಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ದೇಶದಲ್ಲೇ ಇಂತಹ ದೊಡ್ಡ ಮಟ್ಟದ ಪರೀಕ್ಷಾ ಅಕ್ರಮ ನಡೆದಿರುವ ಉದಾಹರಣೆಗಳಿಲ್ಲ. ಬಿಜೆಪಿ ನಾಯಕರು ಅದನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಏಕೆ ಪಡೆಯುತ್ತಿಲ್ಲ ಎಂದು ಪ್ರಶ್ನಿಸಿದರು.

ಭೀಮ್ ಆರ್ಮಿ ಜಿಲ್ಲಾ ಘಟಕದ ಅಧ್ಯಕ್ಷ ಹೊನ್ನೇಶ್ ಮಾತನಾಡಿ, ‘ದೇಶದ ದೊಡ್ಡ ಹಗರಣ ಇದಾಗಿದೆ. ನೀಟ್ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ನಾಚಿಕೆಗೇಡು. ಪ್ರಧಾನಿ ನರೇಂದ್ರ ಮೋದಿ ಅವರು ಈ ಹಗರಣದ ಬಗ್ಗೆ ಮಾತನಾಡುತ್ತಿಲ್ಲ ಎಂದು ಹೇಳಿದರು.

ದಲಿತ ಸಂಘಟನೆ ಮುಖಂಡ ಹುಣಸೇಮಕ್ಕಿ ಲಕ್ಷ್ಮಣ್ ಮಾತನಾಡಿ, ದೇಶದ ದೊಡ್ಡ ಕೋಚಿಂಗ್ ಸೆಂಟರ್‌ಗಳ ಒಳ ಒಪ್ಪಂದದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಇದರಲ್ಲಿ ಬಿಜೆಪಿ ಅಂಗ ಸಂಸ್ಥೆಗಳ ಪಾಲಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆಯದಿದ್ದರೆ ದಲಿತ ಸಂಘಟನೆಗಳು ದೆಹಲಿ ಚಲೋ ಹೋಗಿ ಮುತ್ತಿಗೆ ಹಾಕಲಾಗವುದು ಎಂದು ಹೇಳಿದರು.

ಅಲೆಮಾರಿ ಬುಡಕಟ್ಟು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ದಿವಾಕರ್, ಎಸ್‌ಡಿಪಿಐ ಮುಖಂಡ ಗೌಸ್ ಮುನಿರ್, ರಾಜ್ ಪ್ರಶಾಂತ್, ಪ್ರವೀಣ್ ಗುಂಡ, ದಿಲೀಪ್ ಭಾಗವಹಿಸಿದ್ದರು.

Torch march condemns attack on students

Share

Leave a comment

Leave a Reply

Your email address will not be published. Required fields are marked *

Don't Miss

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು ಮಾತ್ರ ನೆಚ್ಚಿಕೊಂಡು ಅಧಿಸೂಚನೆ ಹೊರಡಿಸುತ್ತಿರುವುದು ಮಲೆನಾಡಿನ ರೈತರು ಹಾಗೂ ಸ್ಥಳೀಯ ಜನರಲ್ಲಿ ತೀವ್ರ ಆತಂಕ...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ ಕಡಿದು ಮಾಂಸ ಮಾರಾಟ ಮಾಡಲು ಯತ್ನಿಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು...

Related Articles

ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆ ಮಹತ್ವ ನೀಡಿ

ಚಿಕ್ಕಮಗಳೂರು:  ಸಹಕಾರಿ ರಂಗದಲ್ಲಿ ನಿಷ್ಟೆ, ಪ್ರಾಮಾಣಿಕತೆಗೆ ಹೆಚ್ಚಿನ ಮಹತ್ವ ನೀಡಬೇಕು. ಒಳ ವ್ಯವಹಾರದಲ್ಲಿ ತೊಡಗಿಸಿಕೊಂಡರೆ ಎಂದಿಗೂ...

ಬರಗಾಲ ಪರಿಹಾರಕ್ಕೆ ಆಗ್ರಹಿಸಿ ಸೆ.28ರಂದು ರೈತ ಸಂಘದ ಪ್ರತಿಭಟನಾ ಮೆರವಣಿಗೆ

ಚಿಕ್ಕಮಗಳೂರು: ಭೀಕರ ಬರಗಾಲದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ...

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ,...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ...