ಚಿಕ್ಕಮಗಳೂರು : ಟೆಂಪೋ ಟ್ರಾವಲರ್ ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಬಳಿ ನಡೆದಿದೆ.
ಬೆಂಗಳೂರಿನಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ಪ್ರವಾಸಿಗರ ಟೆಂಪೋ ಟ್ರಾವಲರ್ ಪಲ್ಟಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ಅವರುಗಳನ್ನು ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಡಿಗೆರೆಯಿಂದ ಹೊರನಾಡಿಗೆ ಸಾಗುವ ರಸ್ತೆಯೂ ತಿರುವುಗಳಿಂದ ಕೂಡಿದ್ದು ಪದೇ ಪದೇ ಪ್ರವಾಸಿಗರ ವಾಹನಗಳು ಅಪಘಾತಕ್ಕೆ ಒಳಗಾಗುತ್ತಿವೆ.
Leave a comment