Home Latest News ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿ ದರ್ಶನ
Latest Newsnamma chikmagalurTarikere

ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿ ದರ್ಶನ

Share
Share

ಚಿಕ್ಕಮಗಳೂರು: ಕಾಫಿನಾಡಿನ ಭದ್ರಾ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ದೈತ್ಯಾಕಾರದ ಹುಲಿಯೊಂದು ದರ್ಶನ ನೀಡುವ ಮೂಲಕ ಅಚ್ಚರಿ ಮತ್ತು ಸಂತಸ ಮೂಡಿಸಿದೆ.

ಕೆಮ್ಮಣ್ಣುಗುಂಡಿಯ ಪ್ರಸಿದ್ದ ಹೆಬ್ಬೆ ಫಾಲ್ಸ್ ರಸ್ತೆಯಲ್ಲಿ ಈ ಹುಲಿ ನಿರ್ಭೀತಿಯಿಂದ ಸಂಚರಿಸುತ್ತಿದ್ದು, ಅದರ ಗಾಂಭೀರ್ಯದ ನಡಿಗೆ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅರಣ್ಯದ ಹಸಿರಿನ ನಡುವೆ ರಸ್ತೆ ಬದಿಯಲ್ಲೇ ಕಾಣಿಸಿಕೊಂಡ ಹುಲಿಯ ಚಲನವಲನಗಳನ್ನು ಕಂಡು ಪ್ರವಾಸಿಗರು ಪುಳಕಿತರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಭದ್ರಾ ಅರಣ್ಯ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಚಟುವಟಿಕೆಗಳು ಗಣನೀಯವಾಗಿ ಹೆಚ್ಚಾಗಿದ್ದು, ಈಗ ಮತ್ತೆ ಹುಲಿ ಪ್ರತ್ಯಕ್ಷವಾಗಿರುವುದು ಸಫಾರಿ ಪ್ರಿಯರಲ್ಲಿ ಕುತೂಹಲ ಕೆರಳಿಸಿದೆ.

ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಭದ್ರಾ ಅಭಯಾರಣ್ಯದ ಜೀವವೈವಿಧ್ಯದ ಶ್ರೀಮಂತಿಕೆಗೆ ಸಾಕ್ಷಿಯಾಗಿವೆ.

Tourists on safari get a glimpse of a tiger

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...