Home Crime News ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ ನಿಯಂತ್ರಣ ತಪ್ಪಿ ಪಲ್ಟಿ
Crime NewsHomeLatest Newsnamma chikmagalur

ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ ನಿಯಂತ್ರಣ ತಪ್ಪಿ ಪಲ್ಟಿ

Share
Share

ಚಿಕ್ಕಮಗಳೂರು: ಮಂಗಳೂರಿನಿಂದ ಹೊರನಾಡಿಗೆ ಆಗಮಿಸಿದ್ದ ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ (ಟಿಟಿ) ವಾಹನ ತಡರಾತ್ರಿ ಹೊರನಾಡು ಸಮೀಪದ ಭಾಮಿ ಅಂಗಡಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿದಂತೆ ಒಟ್ಟು 13 ಮಂದಿ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಪ್ರವಾಸಕ್ಕೆಂದು ಹೊರಟಿದ್ದವರು ಮೊದಲು ಶೃಂಗೇರಿ ಭೇಟಿ ನೀಡಿ, ಬಳಿಕ ಹೊರನಾಡಿಗೆ ಆಗಮಿಸಿದ್ದರು. ಹೊರನಾಡಿನಲ್ಲಿ ತಂಗಲು ಮುಂಚಿತವಾಗಿ ಬುಕ್ ಮಾಡಿದ್ದ ರೂಮ್‌ಗಳ ಕಡೆಗೆ ವಾಹನದಲ್ಲಿ ತೆರಳುತ್ತಿದ್ದಾಗ, ಭಾಮಿ ಅಂಗಡಿ ಸೇತುವೆ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣವಾಗಿ ಉರುಳಿ ಬಿದ್ದಿತ್ತಾದರೂ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಾಹನದಲ್ಲಿದ್ದ ಹೊರನಾಡು ಸಮೀಪ ಅಪಘಾತಕ್ಕೀಡಾದ ಮಂಗಳೂರಿನ ಟೆಂಪೊ ಟ್ರ್ಯಾವೆಲ‌ರ್
ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಕಳಸದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಎಲ್ಲ ಎಂದು ತಿಳಿದುಬಂದಿದೆ. ಪ್ರವಾಸಿಗರು ಸುರಕ್ಷಿತವಾಗಿದ್ದಾರೆ

Tourists’ Tempo Traveler loses control and overturns

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...