Home namma chikmagalur chikamagalur ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್
chikamagalurHomeLatest Newsnamma chikmagalur

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

Share
Share

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು. ಮಳೆ ಮಧ್ಯೆ ಸಿಲುಕಿದ ಪ್ರವಾಸಿಗರು ಹಾಗೂ ಪ್ರಯಾಣಿಕರು ಪರದಾಡುವಂತಾಯಿತು.

ಬಂಡೆ ರಸ್ತೆ ಮೇಲೆ ಉರುಳಿಬೀಳುವ ಕೆಲವೇ ಕ್ಷಣಗಳ ಮೊದಲು ಪ್ರವಾಸಿ ಕಾರೊಂದು ಆ ಸ್ಥಳವನ್ನು ದಾಟಿದ್ದು, ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾರ್ಮಾಡಿ ಘಾಟಿಯ ವಿವಿಧೆಡೆ ಮಳೆಯ ಪರಿಣಾಮ ಧರೆ ಕುಸಿತ, ಬಂಡೆಗಳು ಜಾರುವುದು ಹಾಗೂ ಮರಗಳು ಮುರಿದು ಬೀಳುವ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಸಮಾಜಸೇವಕ ಆರೀಫ್ ಹಾಗೂ ಸ್ಥಳೀಯರು ರಸ್ತೆ ಮೇಲೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ ಬಳಿಕ ವಾಹನ ಸಂಚಾರ ಪುನರಾರಂಭವಾಯಿತು.

ಚಾರ್ಮಾಡಿ ಘಾಟಿ ಮಲೆನಾಡು ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಜೀವನಾಡಿಯಾಗಿದ್ದು, ಪ್ರತಿದಿನ ನೂರಾರು ವಾಹನಗಳು, ಸರ್ಕಾರಿ ಮತ್ತು ಖಾಸಗಿ ಬಸ್‌ಗಳು, ಆಂಬುಲೆನ್ಸ್‌ಗಳು ಹಾಗೂ ತರಕಾರಿ ಸಾಗಣೆ ವಾಹನಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತವೆ. ಕೇವಲ ಅರ್ಧ ಗಂಟೆ ಸಂಚಾರ ಸ್ಥಗಿತಗೊಂಡರೂ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಹವಾಮಾನ ಇಲಾಖೆ ಇನ್ನಷ್ಟು ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ ಮತ್ತು ಮರಗಳು ಬೀಳುವ ಅಪಾಯ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ಅತೀವ ಎಚ್ಚರಿಕೆ ಹಾಗೂ ಜಾಗರೂಕತೆಯಿಂದ ವಾಹನ ಚಲಾಯಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.

Traffic jam at Charmadi Ghat due to traffic stoppage

Share

Leave a comment

Leave a Reply

Your email address will not be published. Required fields are marked *

Don't Miss

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ ಕತ್ತರಿಸುತ್ತಿರುವ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ ವ್ಯವಸ್ಥೆಗೆ ಒಳಪಡಿಸಿ ಸೇವಾ ಭದ್ರತೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಸೆ.21ರಿಂದ ತುಮಕೂರಿನ ಸಿದ್ದಗಂಗಾ ಮಠದಿಂದ...

Related Articles

ಪೂನಾ ಒಪ್ಪಂದ ಯಥಾವತ್ತಾಗಿ ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ಚಿಕ್ಕಮಗಳೂರು:  ದಲಿತ ಸಮುದಾಯದ ಪ್ರಾತಿನಿಧ್ಯ ಹಾಗೂ ಹಕ್ಕುಗಳನ್ನು ಸಂರಕ್ಷಿಸುವ ಉ ದ್ದೇಶದಿಂದ ಪೂನಾ ಒಪ್ಪಂದ ಯಥಾವತ್ತಾಗಿ...

ಶೇ.90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ...

ರಾಜ್ಯ ಹೆದ್ದಾರಿಯಲ್ಲಿ ದೈತ್ಯ ಒಂಟಿ ಸಲಗ ಪ್ರತ್ಯಕ್ಷ

ಚಿಕ್ಕಮಗಳೂರು : ಪ್ರಸಿದ್ದ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ...

ಸಾರಿಗೆ ಸಂಸ್ಥೆಯ ಬಸ್ – ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ

ಮೂಡಿಗೆರೆ: ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ...