Home namma chikmagalur chikamagalur ಮೆಸ್ಕಾಂ ಸಬ್‌ಸ್ಟೇಷನ್‌ನಿಂದ ₹31 ಲಕ್ಷ ಮೌಲ್ಯದ ಟ್ರಾನ್ಸ್‌ಫಾರ್ಮರ್ ಆಯಿಲ್ ಕಳವು
chikamagalurHomeLatest Newsnamma chikmagalur

ಮೆಸ್ಕಾಂ ಸಬ್‌ಸ್ಟೇಷನ್‌ನಿಂದ ₹31 ಲಕ್ಷ ಮೌಲ್ಯದ ಟ್ರಾನ್ಸ್‌ಫಾರ್ಮರ್ ಆಯಿಲ್ ಕಳವು

Share
Share

ಚಿಕ್ಕಮಗಳೂರು: ಹೊಸದಾಗಿ ನಿರ್ಮಿಸಲಾಗಿದ್ದ 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿನ ಟ್ರಾನ್ಸ್‌ಫಾರ್ಮರ್‌ಗೆ ತುಂಬಿಸಲಾಗಿದ್ದ ಸುಮಾರು 12,400 ಲೀಟರ್, ₹31 ಲಕ್ಷ ಮೌಲ್ಯದ ಟ್ರಾನ್ಸ್‌ಫಾರ್ಮರ್ ಆಯಿಲ್ ಕಳವಾಗಿರುವ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಣದಾಳು ಗ್ರಾಮದಲ್ಲಿ ನಡೆದಿದೆ.

ಈ ಕುರಿತು ಗಾಣದಾಳು 66/11 ಕೆ.ವಿ. ಸಬ್‌ಸ್ಟೇಷನ್‌ನ ಸೈಟ್ ಇಂಜಿನಿಯರ್ ಪ್ರಜ್ವಲ್ ಪಿ. ಅವರು ಸೆ.30ರಂದು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಲಕ್ಯಾ ಹೋಬಳಿಯ ಗಾಣದಾಳು ಗ್ರಾಮದಲ್ಲಿ ಹೊಸ 66/11 ಕೆ.ವಿ. ಸಬ್‌ಸ್ಟೇಷನ್ ನಿರ್ಮಾಣ ಕಾಮಗಾರಿಯನ್ನು 2023ರ ಡಿಸೆಂಬರ್‌ನಿಂದ ಕೈಗೆತ್ತಿಕೊಳ್ಳಲಾಗಿತ್ತು.

ಆಗಸ್ಟ್ 2026ರ ಮೊದಲ ವಾರದಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಉಪಕೇಂದ್ರದಲ್ಲಿ ಎರಡು ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಿ, ತಲಾ 12,400 ಲೀಟರ್ ಆಯಿಲ್ ತುಂಬಿಸಲಾಗಿತ್ತು. ಆ.16ರಂದು ಪರಿಶೀಲಿಸಿದಾಗ ಎರಡೂ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಆಯಿಲ್ ಇರುವುದು ದೃಢಪಟ್ಟಿತ್ತು.

ಸೆ.30ರಂದು ಸಬ್‌ಸ್ಟೇಷನ್ ಉದ್ಘಾಟನೆ ಹಿನ್ನೆಲೆಯಲ್ಲಿ ಸೈಟ್ ಇಂಜಿನಿಯರ್, ಟ್ರಾನ್ಸ್‌ಫಾರ್ಮರ್ ತಯಾರಿಕಾ ಕಂಪನಿಯ ತಂತ್ರಜ್ಞರು ಹಾಗೂ ಇತರರು ಬೆಳಗ್ಗೆ 9.30ರ ಸುಮಾರಿಗೆ ಟ್ರಾನ್ಸ್‌ಫಾರ್ಮರ್‌ಗಳನ್ನು ಪರಿಶೀಲಿಸಿದಾಗ, ಒಂದು ಟ್ರಾನ್ಸ್‌ಫಾರ್ಮರ್‌ನಲ್ಲಿದ್ದ ಆಯಿಲ್ ಸಂಪೂರ್ಣವಾಗಿ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ.

ದೂರುದಾರರ ಕಂಪನಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದ ಹಾಸನ ಜಿಲ್ಲೆ ಬೇಲೂರು ತಾಲೂಕಿನ ರಾಜನಸಿರಿಯೂರು ಗ್ರಾಮದ ಆಕಾಶ್ ಎಂಬಾತ ಹಾಸನದ ಆಲೂರು 66/11 ಕೆ.ವಿ. ಹಳೆಯ ಸಬ್‌ಸ್ಟೇಷನ್‌ನಲ್ಲಿ ಟವರ್ ಸೈಟ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಗಾಣದಾಳು ಸಬ್‌ಸ್ಟೇಷನ್‌ಗೂ ಆಗಾಗ್ಗೆ ಬಂದು ಹೋಗುತ್ತಿದ್ದ ಈತನನ್ನು ಕೆಲಸಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ ಎಂಬ ಕಾರಣಕ್ಕೆ ಸೆ.8ರಂದು ಕೆಲಸದಿಂದ ತೆಗೆದುಹಾಕಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸೆ.21ರಂದು ಆಕಾಶ್ ತನ್ನ ಮೊಬೈಲ್‌ನಿಂದ ಕರೆ ಮಾಡಿ, ಸ್ನೇಹಿತನಿಗೆ ಟ್ರಾನ್ಸ್‌ಫಾರ್ಮರ್ ಆಯಿಲ್ ಬೇಕಾಗಿದೆ, ಕೊಡಬಹುದೇ ಎಂದು ಕೇಳಿದ್ದ. ಆದರೆ ತಾನು ಆಯಿಲ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿ ಕರೆ ಕಡಿತಗೊಳಿಸಿದ್ದಾಗಿ ಪ್ರಜ್ವಲ್ ದೂರಿನಲ್ಲಿ ತಿಳಿಸಿದ್ದಾರೆ.

ಕೆಲಸದಿಂದ ತೆಗೆದುಹಾಕಿದ ಹಿನ್ನೆಲೆಯಲ್ಲಿ ಆಯಿಲ್ ಅನ್ನು ಬೇರೆಯವರಿಗೆ ಮಾರಾಟ ಮಾಡುವ ಉದ್ದೇಶದಿಂದ ಆಕಾಶ್ ಕಳ್ಳತನ ಮಾಡಿರಬಹುದು ಎಂಬ ಅನುಮಾನವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆ.17ರಿಂದ ಸೆ.30ರ ನಡುವಿನ ಅವಧಿಯಲ್ಲಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ₹31 ಲಕ್ಷ ಮೌಲ್ಯದ 12,400 ಲೀಟರ್ ಟ್ರಾನ್ಸ್‌ಫಾರ್ಮರ್ ಆಯಿಲ್ ನಾಪತ್ತೆಯಾಗಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Transformer oil worth ₹31 lakh stolen from MESCOM substation

Share

Leave a comment

Leave a Reply

Your email address will not be published. Required fields are marked *

Don't Miss

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ಕಾಂಗ್ರೆಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್...

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ ಇತಿಹಾಸವಿರುವ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು ನೀಡುತ್ತಿರುವುದಕ್ಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೂಡಿಗೆರೆಯಿಂದ ಮೂಗ್ತಿಹಳ್ಳಿವರೆಗಿನ...

Related Articles

ನಕಲಿ ಪೊಲೀಸ್ ಇನ್ಸ್‌ಪೆಕ್ಟರ್‌ ಹೆಸರಿನಲ್ಲಿ ಚಿನ್ನದ ಸರ ಪಡೆದು ವಂಚನೆ

ಚಿಕ್ಕಮಗಳೂರು: ತಾನು ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡು ಆಭರಣ ಮಳಿಗೆಯಿಂದ ₹1.82 ಲಕ್ಷ ಮೌಲ್ಯದ ಚಿನ್ನದ...

ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಚಿಕ್ಕಮಗಳೂರು-ಕಳಸ ಸೇರ್ಪಡೆ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿಯಲ್ಲಿ ಜಿಲ್ಲೆಯ ಎರಡು ತಾಲ್ಲೂಕುಗಳು...

ಮನೆ ಬೀಗ ಮುರಿದು ₹7.06 ಲಕ್ಷ ಮೌಲ್ಯದ ನಗ-ನಗದು ಕಳವು

ಕಡೂರು: ಮನೆಯವರು ಕಣ್ಣಿನ ಚಿಕಿತ್ಸೆಗಾಗಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು...

ಫೇಸ್‌ಬುಕ್‌ನ ‘ಕೇರಳ ಲಾಟರಿ’ ಜಾಹೀರಾತು ನಂಬಿ ₹4.30 ಲಕ್ಷ ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ ‘ಕೇರಳ ಲಾಟರಿ’ ಜಾಹೀರಾತಿನ ಲಿಂಕ್ ಕ್ಲಿಕ್ ಮಾಡಿ, ಲಾಟರಿ ಗೆದ್ದಿರುವುದಾಗಿ ನಂಬಿ...