Home namma chikmagalur chikamagalur ಕೆಎಸ್‌ಆರ್‌ಟಿಸಿ ಬಸ್‌ ನಲ್ಲಿ ತರಕಾರಿ ಸರಕು ಸಗಾಟ
chikamagalurHomeLatest Newsnamma chikmagalur

ಕೆಎಸ್‌ಆರ್‌ಟಿಸಿ ಬಸ್‌ ನಲ್ಲಿ ತರಕಾರಿ ಸರಕು ಸಗಾಟ

Share
Share

ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳು ಪ್ರಯಾಣಿಕರನ್ನು ಕರೆದೊಯ್ಯುವ ಬದಲು ತರಕಾರಿ ಸರಕು ವಾಹನಗಳಾಗಿ ಬದಲಾಗುತ್ತಿದ್ದು, ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಚಿಕ್ಕಮಗಳೂರಿನಿಂದ ಬಾಳೆಹೊನ್ನೂರು ಮಾರ್ಗವಾಗಿ ಶೃಂಗೇರಿಗೆ ಸಂಚರಿಸುವ ಸರ್ಕಾರಿ ಬಸ್‌ಗಳಲ್ಲಿ ನಿತ್ಯವೂ ಶೃಂಗೇರಿಯ ತರಕಾರಿ ಅಂಗಡಿಗಳಿಗೆ ಬೇಕಾದ ಮೂಟೆಗಳನ್ನು ಸೀಟುಗಳ ಮೇಲೆಯೇ ಲೋಡ್ ಮಾಡಲಾಗುತ್ತಿದೆ.

ನಿಯಮಾನುಸಾರ ಪ್ರಯಾಣಿಕರ ಲಗೇಜ್ ಜಾಗದಲ್ಲಿಡಬೇಕಾದ ಸರಕನ್ನು ನೇರವಾಗಿ ಬಸ್ಸಿನ ಹಿಂಬದಿಯ ಸೀಟುಗಳ ಮೇಲೆಯೇ ರಾಶಿ ಹಾಕುತ್ತಿರುವುದು ಸಿಬ್ಬಂದಿಯ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ.

ಒಂದೆಡೆ ಸರಿಯಾದ ಸಮಯಕ್ಕೆ ಬಸ್‌ಗಳಿಲ್ಲದೇ ನಿತ್ಯ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುತ್ತಿದ್ದರೆ, ಮತ್ತೊಂದೆಡೆ ಹಿರಿಯ ನಾಗರಿಕರು ಮತ್ತು ಮಹಿಳೆಯರು ಸೀಟು ಸಿಗದೆ ಬರೋಬ್ಬರಿ ನೂರು ಕಿಲೋಮೀಟರ್‌ಗಳಿಗೂ ಅಧಿಕ ದೂರ ನಿಂತೇ ಪ್ರಯಾಣಿಸಬೇಕಾದ ನರಕಯಾತನೆ ಎದುರಾಗಿದೆ.

ಕಣ್ಣೆದುರೇ ಸೀಟುಗಳು ತರಕಾರಿ ಮೂಟೆಗಳಿಂದ ಭರ್ತಿಯಾಗಿದ್ದರೂ ಜನಸಾಮಾನ್ಯರು ಕೈಕಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನನಿತ್ಯದ ಈ ಅಕ್ರಮ ಸಾಗಾಟಕ್ಕೆ ಕೆಎಸ್‌ಆರ್‌ಟಿಸಿ ಸಿಬ್ಬಂದಿಯೇ ಸಾಥ್ ನೀಡುತ್ತಿದ್ದಾರೆ ಎಂದು ಕೆಂಡಾಮಂಡಲವಾಗಿರುವ ಪ್ರಯಾಣಿಕರು, ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಕರ್ತವ್ಯಲೋಪ ಎಸಗಿರುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Transportation of vegetables in KSRTC buses

Share

Leave a comment

Leave a Reply

Your email address will not be published. Required fields are marked *

Don't Miss

ಪ್ರಧಾನ ಮಂತ್ರಿ ವಿಕಸಿತ ಭಾರತ ಸಂಕಲ್ಪದಡಿ ತರೀಕೆರೆ ಅಭಿವೃದ್ಧಿಗೆ ಆದ್ಯತೆ

ತರೀಕೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಂಕಲ್ಪದಂತೆ ತರೀಕೆರೆ ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡಿ ಶ್ರಮಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು....

ಬಾಬಾ ಬುಡನ್ ದರ್ಗಾ ವಿವಾದ: ಪೊಲೀಸರ ‘ಬಿ’ ರಿಪೋರ್ಟ್‌ಗೆ ಆಕ್ಷೇಪ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಐತಿಹಾಸಿಕ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆದಿದೆಯೆನ್ನಲಾದ ಅಕ್ರಮ ಕೃತ್ಯಗಳ ಕುರಿತು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ‘ಬಿ’ ಫೈನಲ್ ವರದಿಯನ್ನು ವಿರೋಧಿಸಿ, ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಪೆಟಿಷನ್...

Related Articles

ಮೂರು ದಿನಗಳ ಕಾಲ ನಗರದಲ್ಲಿ ಕುಡಿಯುವ ನೀರಿನ ಪೂರೈಕೆ

ಚಿಕ್ಕಮಗಳೂರು: ಕಾಫಿನಾಡಿನ ನಗರವಾಸಿಗಳಿಗೆ ಮುಂದಿನ ಮೂರು ದಿನಗಳ ಕಾಲ ಕುಡಿಯುವ ನೀರಿನ ಪೂರೈಕೆಯಲ್ಲಿ ಭಾರಿ ವ್ಯತ್ಯಯ...

ಚಿಕ್ಕನಕೊಡಿಗೆ ಬಳಿ ಅಪಘಾತದಲ್ಲಿ 80 ವರ್ಷದ ವೃದ್ಧ ಸಾವು

ಕೊಪ್ಪ: ತೀರ್ಥಹಳ್ಳಿ–ಕೊಪ್ಪ ಮುಖ್ಯ ರಸ್ತೆಯ ಚಿಕ್ಕನಕೊಡಿಗೆ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 80...

₹1.49 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಅಜ್ಜಂಪುರ: ಮನೆಯ ಬೀರುವಿನ ಬೀಗ ಮುರಿದು ₹1.49 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು...

₹4.94 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳ ಕಳವು

ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್‌ ಸಮೀಪದ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಹಳೆಯ ಕಟ್ಟಡದಲ್ಲಿ ಸಂಗ್ರಹಿಸಿಡಲಾಗಿದ್ದ ₹4.94...