Home namma chikmagalur chikamagalur 25 ಲಕ್ಷ ರೂಪಾಯಿ ಮೌಲ್ಯದ ಮರಗಳ ಕಡಿದು ನಾಶ
chikamagalurCrime NewsHomeLatest Newsnamma chikmagalur

25 ಲಕ್ಷ ರೂಪಾಯಿ ಮೌಲ್ಯದ ಮರಗಳ ಕಡಿದು ನಾಶ

Share
Share

ತರೀಕೆರೆ: ಜಮೀನಿನೊಳಗೆ ಅಕ್ರಮವಾಗಿ ಅತಿಕ್ರಮ ಪ್ರವೇಶ ಮಾಡಿ ಬರೋಬ್ಬರಿ 25 ಲಕ್ಷ ರೂಪಾಯಿ ಮೌಲ್ಯದ ಮರಗಳನ್ನು ಕಡಿದು ನಾಶಪಡಿಸುವಾಗ ಪ್ರಶ್ನಿಸಲು ಹೋದವರಿಗೆ ಮಚ್ಚು ಹಾಗೂ ಲಾಂಗ್ ತೋರಿಸಿ ಜೀವಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪವೊಂದು ತರೀಕೆರೆ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಕೇಳಿ ಬಂದಿದೆ. ಗ್ರಾಮದ ಸರ್ವೆ ನಂ. 1 ರ ಜಮೀನಿನಲ್ಲಿ ಈ ಕೃತ್ಯ ನಡೆದಿದೆ.

ಕಿರಣ್ ಡಿ.ಜೆ, ದೇವಿಬಾಯಿ ಹಾಗೂ ರುದ್ರನಾಯ್ ಎಂಬುವರು ಅಕ್ರಮವಾಗಿ ಜಮೀನಿಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿದ್ದಾರೆ ಎಂದು ದೂರಲಾಗಿದ್ದು. ತೋಟದಲ್ಲಿದ್ದ ಬೆಲೆಬಾಳುವ ಮರಗಳನ್ನು ಸಾರಾಸಗಟಾಗಿ ಕಡಿದು ಧ್ವಂಸ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನು ಕಂಡು ಜಮೀನಿನ ಮಾಲೀಕರು ಪ್ರಶ್ನಿಸಲು ಹೋದಾಗ, ಆರೋಪಿಗಳು ಮಚ್ಚು ಮತ್ತು ಲಾಂಗ್‌ಗಳನ್ನು ಹಿಡಿದು ಓಡಾಡುತ್ತಾ, ಜಮೀನಿನ ಮಾಲೀಕ ಹಾಗೂ ಅವರ ಕುಟುಂಬಕ್ಕೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಗಲಾಟೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿಂದೆ ತರೀಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಆರೋಪಿಗಳ ಕಿರುಕುಳ ಹಾಗೂ ಬೆದರಿಕೆ ಮುಂದುವರಿದಿತ್ತು.

ಈ ಹಿನ್ನೆಲೆಯಲ್ಲಿ ಸಂತ್ರಸ್ತರು ನ್ಯಾಯಾಲಯದ ಬಾಗಿಲು ತಟ್ಟಿದ್ದರು. ಘಟನೆಯ ಸಂಪೂರ್ಣ ವಿವರ ಆಲಿಸಿದ ತರೀಕೆರೆ ಘನ ನ್ಯಾಯಾಲಯವು ಆರೋಪಿಗಳ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿಕೊಳ್ಳುವಂತೆ ಆದೇಶಿಸಿದೆ. ನ್ಯಾಯಾಲಯದ ನಿರ್ದೇಶನದಂತೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Trees worth Rs 25 lakh cut down and destroyed

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...